ಮತದಾನ: ಜಾಗೃತಿ ಮೂಡಿಸುವ ಜವಾಬ್ದಾರಿ ಕ್ಯಾಂಪಸ್ ಅಂಬಾಸಿಡರ್‍ಗಳದ್ದು

 ತುಮಕೂರು:       ಮತದಾನ ಕುರಿತು ಯುವ ಮತದಾರರಲ್ಲಿ ಜಾಗೃತಿ ಮೂಡಿಸುವ ಜವಾಬ್ದಾರಿ ಕ್ಯಾಂಪಸ್ ಅಂಬಾಸಿಡರ್‍ಗಳು ಹೊಂದಿದ್ದು, ಪ್ರಾಮಾಣಿಕವಾಗಿ ನಿಭಾಯಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ಕರೆ ನೀಡಿದರು.       ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮತದಾನದ ಕುರಿತು ಕಾಲೇಜು ಕ್ಯಾಂಪಸ್ ಅಂಬಾಸಿಡರ್‍ಗಳಿಗಾಗಿ ಏರ್ಪಡಿಸಿದ್ದ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿಂದು ಮಾತನಾಡಿದ ಅವರು 18 ವರ್ಷ ತುಂಬಿದ ಎಲ್ಲಾ ಯುವಕ/ಯುವತಿಯರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡುವುದಕ್ಕಾಗಿ ತಪ್ಪದೇ ನೋಂದಣಿ ಮಾಡಿಕೊಳ್ಳುವಂತೆ ತಿಳಿಸಿದರು.       ಮತದಾರರ ಕುಂದು ಕೊರತೆಗಳನ್ನು ಆಲಿಸಿ, ಅವರಿಗೆ ಮಾಹಿತಿ ಅಥವಾ ಪರಿಹಾರ ನೀಡಲು ಉಚಿತ ಸಹಾಯವಾಣಿ 1950 ಆರಂಭಿಸಿರುವ ಬಗ್ಗೆ ಕಾಲೇಜುಗಳಲ್ಲಿ ಹಾಗೂ ಸಾರ್ವಜನಿಕರಲ್ಲಿ ವ್ಯಾಪಕ ಪ್ರಚಾರ ಮಾಡಬೇಕೆಂದು ತಿಳಿಸಿದರು. ಚುನಾವಣೆಯಲ್ಲಿ ನಡೆಯುತ್ತಿರುವ ಸಂದರ್ಭದಲ್ಲಿ ದೂರುಗಳಿದ್ದಲ್ಲಿ ಸಲ್ಲಿಸಲು “ಸಿವಿಜಿಲ್” ಎಂಬ ನೂತನ…

ಮುಂದೆ ಓದಿ...

ತುಮಕೂರು ಇನ್ನು ಮುಂದೆ ಹಸಿರು ತಾಲೂಕು

ತುಮಕೂರು:       ಮಾಹತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ರೋಟರಿ ಸಂಸ್ಥೆ ಸಹಯೋಗದಲ್ಲಿ ತುಮಕೂರು ತಾಲೂಕನ್ನು ಹಸಿರು ತಾಲೂಕನ್ನಾಗಿಸುವ ನಿಟ್ಟಿನಲ್ಲಿ ಕೋಟಿ ಗಿಡಗಳನ್ನು ನೆಡುವ ಉದ್ದೇಶ ಹೊಂದಲಾಗಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ತಿಳಿಸಿದರು.       ತಮ್ಮ ಕಚೇರಿಯಲ್ಲಿಂದು ಪೂರ್ವಭಾವಿ ಸಿದ್ಧತಾ ಸಭೆ ನಡೆಸಿ ಮಾತನಾಡಿದ ಅವರು ಕೋಟಿ ಗಿಡಗಳನ್ನು ನೆಡಲು ರೂಪುರೇಷೆಗಳನ್ನು ಸಿದ್ಧಪಡಿಸುವ ಸಲುವಾಗಿ ಮಾರ್ಚ್ 12ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ತುಮಕೂರು ತಾಲೂಕಿನ ಎಲ್ಲ ಗ್ರಾಮ ಪಂಚಾಯತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಸಭೆಯನ್ನು ಕರೆಯಲಾಗಿದೆ. ತಾಲೂಕಿನ ಎಲ್ಲ ಶಾಲೆಗಳನ್ನು ಸ್ವಚ್ಛ ಹಾಗೂ ಸುಂದರವನ್ನಾಗಿಸುವ ಚಿಂತನೆ ನಡೆಸಿದ್ದು, ಇದಕ್ಕಾಗಿ ಪ್ರತಿ ಶಾಲೆಗೆ ತಲಾ 2 ಲಕ್ಷ ರೂ.ಗಳನ್ನು ನೀಡಲು ರೋಟರಿ ಸಂಸ್ಥೆ ಮುಂದಾಗಿದೆ. ಮೊದಲಿಗೆ ಸುಮಾರು 30…

ಮುಂದೆ ಓದಿ...

ಮರಳು ಅಡ್ಡೆಯ ಮೇಲೆ ಪೊಲೀಸರ ದಾಳಿ : 3ಟ್ರಾಕ್ಟರ್ ಮತ್ತು 1ಜೆಸಿಬಿ ವಶ

 ಕೊರಟಗೆರೆ:       ಖಾಸಗಿ ಜಮೀನಿನಲ್ಲಿ ಶೇಖರಣೆ ಆಗಿರುವ ಮರಳನ್ನು ಜೆಸಿಬಿ ಬಳಕೆಯಿಂದ ಟ್ರಾಕ್ಟರ್‍ನಿಂದ ಅಕ್ರಮವಾಗಿ ಗ್ರಾಮದ ಹೊರವಲಯದ ನಿರ್ಜನ ಪ್ರದೇಶಕ್ಕೆ ಸಾಗಾಣಿಕೆ ಮಾಡಿದ ನಂತರ ಲಾರಿ ಮೂಲಕ ಬೆಂಗಳೂರಿಗೆ ಸಾಗಿಸುವ ವೇಳೆ ಪಿಎಸ್‍ಐ ಮಂಜುನಾಥ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿರುವ ಘಟನೆ ಮಂಗಳವಾರ ಮಧ್ಯರಾತ್ರಿ ನಡೆದಿದೆ.       ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿ ಜೆಟ್ಟಿಅಗ್ರಹಾರ ಗ್ರಾಪಂ ವ್ಯಾಪ್ತಿಯ ಅಜ್ಜಿಹಳ್ಳಿ ಗ್ರಾಮದ ರಂಗಪ್ಪ ಎಂಬುವರ ಖಾಸಗಿ ಜಮೀನಿನಿಂದ ಅಕ್ರಮವಾಗಿ ಮಂಗಳವಾರ ಮಧ್ಯರಾತ್ರಿ ವೇಳೆ ಮರಳನ್ನು ಜೆಸಿಬಿಯ ಮೂಲಕ ಟ್ರಾಕ್ಟರ್‍ಗಳಿಗೆ ತುಂಬುತ್ತೀದ್ದ ವೇಳೆ ಸ್ಥಳದಲ್ಲಿದ್ದ 3ಟ್ರಾಕ್ಟರ್ ಮತ್ತು 1ಜೆಸಿಬಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.       ಅಜ್ಜಿಹಳ್ಳಿ ಗ್ರಾಮದ ರಂಗಪ್ಪ ಎಂಬುವರ ಖಾಸಗಿ ಜಮೀನಿನಿಂದ ಪ್ರತಿದಿನ ಅಕ್ರಮವಾಗಿ ಮರಳನ್ನು ಗ್ರಾಮದ ಹೊರವಲಯದ ನಿರ್ಜನ ಪ್ರದೇಶದಲ್ಲಿ ಶೇಖರಣೆ ಮಾಡಿ ನಂತರ ಅದನ್ನು ಲಾರಿಯ ಮೂಲಕ…

ಮುಂದೆ ಓದಿ...

ತಿಪಟೂರಿನಲ್ಲಿ ಡ್ರಾಮಾ ಜ್ಯೂನಿಯರ್ ಫಿನಾಲೆ

 ತಿಪಟೂರು:       ಜೀ ಕನ್ನಡ ವಾಹಿನಿಯಲ್ಲಿ ಮೂಡಿಬರುತ್ತಿರುವ ಡ್ರಾಮಾ ಜ್ಯೂನಿಯರ್ಸ್ ಸೀಜನ್ -3ರ ಗ್ರ್ಯಾಂಡ್ ಫಿನಾಲೆ ಮಾ.9 ರಂದು ಸಂಜೆ 6 ಗಂಟೆಗೆ ಕನ್ನಡ ಚಿತ್ರರಂಗದ ಹಾಸ್ಯ ಚಕ್ರವರ್ತಿ ದಿ. ನರಸಿಂಹರಾಜು ಅವರ ಹುಟ್ಟೂರು ತಿಪ ಟೂರಿನ ಕಲ್ಪತರು ಕ್ರೀಡಾಂಗಣ ದಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.       ಕೇವಲ ರಂಗಭೂಮಿಯ ನಾಟಕಕ್ಕೆ ಸೀಮಿತವಾಗದೆ 1 ರಿಂದ 10ನೇ ತರಗತಿಯ ಮಕ್ಕಳ ಪಠ್ಯ ವಿಷಯಗಳನ್ನು ನಾಟಕಕ್ಕೆ ಅಳವಡಿಸಿಕೊಂಡು ಅಭಿನಯಿಸಿರುವುದು ಈ ಸೀಜನ್‍ನ ವಿಶೇಷ ಎಂದಿದ್ದಾರೆ.       ಡ್ರಾಮಾ ಜೀನಿಯರ್ಸ್ ಪುಟಾಣೆಗಳ ಮನರಂಜನೆ ಜೊತೆ ನೃತ್ಯ ಪ್ರದರ್ಶನ ಹಾಗೂ ಸರಿಗಮಪ ರಿಯಾ ಲಿಟಿ ಶೋ ವಿಜೇತರಾದ ಕೀರ್ತನ್ ಹೊಳ್ಳ ಹಾಗೂ ಹನುಮಂತಣ್ಣ ಇವರಿಂದ ಗಾಯನ ಕಾರ್ಯಕ್ರಮ ಇದ್ದು ತೀರ್ಪುಗಾರರಾದ ನಟಿ ಲಕ್ಷ್ಮಿ, ನಟರಾದ ಮುಖ್ಯ ಮಂತ್ರಿ ಚಂದ್ರು, ವಿಜಯ ರಾಘವೇಂದ್ರ,…

ಮುಂದೆ ಓದಿ...

3-4 ದಿನಗಳಲ್ಲಿ ಸೀಟು ಹಂಚಿಕೆ ಗೊಂದಲ ಬಗೆಹರಿಯಲಿದೆ – ಕೋನರೆಡ್ಡಿ 

ತುಮಕೂರು:       ಮುಂಬರುವ ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಗೊಂದಲ ಇನ್ನು ಮೂರ್ನಾಲ್ಕು ದಿನಗಳಲ್ಲಿ ಬಗೆಹರಿಯಲಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೋನರೆಡ್ಡಿ  ವಿಶ್ವಾಸ ವ್ಯಕ್ತಪಡಿಸಿದರು.       ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿ. ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು, ನಂತರ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.       ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ರಾಜ್ಯದಲ್ಲಿ ಮೈತ್ರಿ ಸರ್ಕಾರವನ್ನು ನಡೆಸುತ್ತಿದ್ದು, ಕೋಮುವಾದಿ ಬಿಜೆಪಿ ಪಕ್ಷವನ್ನು ಅಧಿಕಾರದಿಂದ ದೂರವಿಟ್ಟು ಕಾಂಗ್ರೆಸ್ ಪಕ್ಷ ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಲೋಕಸಭಾ ಕ್ಷೇತ್ರಗಳಿಗೆ ಸೀಟು ಹಂಚಿಕೆ ಬಗ್ಗೆ ಈಗಾಗಲೇ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್‌ಗಾಂಧಿಯವರ ಬಳಿ ಚರ್ಚೆ ನಡೆಸಿದ್ದು ಜೆಡಿಎಸ್‌ಗೆ 12 ಕ್ಷೇತ್ರಗಳನ್ನು…

ಮುಂದೆ ಓದಿ...