ಸಂಚಾರಿ ನಿಯಮ ಉಲ್ಲಂಘನೆ: 86 ಸವಾರರ ಡಿ.ಎಲ್ ಅಮಾನತು!

 ತುಮಕೂರು:       ಮದ್ಯಪಾನ, ಅತಿವೇಗ ಅಜಾಗರೂಕ ಚಾಲನೆ, ಸಂಚಾರಿ ನಿಯಮ ಉಲ್ಲಂಘನೆ ಮಾಡಿರುವ 86 ಸವಾರರುಗಳ ಡಿ.ಎಲ್(ಚಾಲನಾ ಪರವಾನಗಿ)ಗಳನ್ನು ಅಮಾನತ್ತುಗೊಳಿಸಿದ್ದು, ಸಂಚಾರಿ ನಿಯಮ ಉಲ್ಲಂಘಿಸಿರುವವರ ವಿರುದ್ಧದ ಕಾರ್ಯಚಾರಣೆಯನ್ನು ಇನ್ನಷ್ಟು ಚುರುಕುಗೊಳಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ|| ಕೆ.ರಾಕೇಶ್ ಕುಮಾರ್ ಅವರು ಸಾರಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.       ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ನಡೆದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಮದ್ಯಪಾನ-120, ಅಪಘಾತ-10, ಅತಿವೇಗ/ಅಜಾಗರೂಕ ಚಾಲನೆ-35 ಹಾಗೂ ಸಂಚಾರ ನಿಯಮ ಉಲ್ಲಂಘನೆ-16 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 86 ಡಿ.ಎಲ್‍ಗಳನ್ನು ಅಮಾನತ್ತುಗೊಳಿಸಲಾಗಿದೆ ಎಂದರು.       ಎಲ್ಲಾ ಕಾಲೇಜುಗಳಲ್ಲಿ ಸಾರಿಗೆ ಹಾಗೂ ಪೊಲೀಸ್ ಇಲಾಖೆಗಳು ಜಂಟಿಯಾಗಿ ರಸ್ತೆ ಸುರಕ್ಷತೆ ಬಗ್ಗೆ ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸಬೇಕು. ಲೋಕಸಭಾ ಚುನಾವಣೆ ಮುಗಿದ ನಂತರ…

ಮುಂದೆ ಓದಿ...

ಮತ ಚಲಾವಣೆ ನಮ್ಮೆಲ್ಲರ ಕರ್ತವ್ಯ – ಸಿಇಓ ಶುಭಾ ಕಲ್ಯಾಣ್

 ತುಮಕೂರು:       ಚುನಾವಣೆಯಲ್ಲಿ ಮತ ಚಲಾಯಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.       ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಮತದಾನದ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿಂದು ಮಾತನಾಡಿದ ಅವರು 18 ವರ್ಷ ತುಂಬಿದ ಪತ್ರಿಯೊಬ್ಬ ಯುವಕ/ಯುವತಿಯರು ಏಪ್ರಿಲ್ 18ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು ತಪ್ಪದೇ ಮತಪಟ್ಟಿಯಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಅವರು ತಿಳಿಸಿದರು.       ಮತದಾನ, ಮತಕ್ಷೇತ್ರ, ಮತಪಟ್ಟಿ ಮತ್ತಿತರ ಮಾಹಿತಿಯನ್ನು ಪಡೆಯಲು ಚುನಾವಣಾ ಆಯೋಗವು “ಚುನಾವಣೆ” ಎಂಬ ನೂತನ ಮೊಬೈಲ್ ಆ್ಯಪ್ ಸೃಜಿಸಲಾಗಿದೆ. ಗೂಗಲ್ ಪ್ಲೇಸ್ಟೋರ್ ಮೂಲಕ ಈ ಆ್ಯಪ್‍ನ್ನು ಡೌನ್‍ಲೋಡ್ ಮಾಡಿಕೊಂಡು ಚುನಾವಣಾ ಮಾಹಿತಿಯನ್ನು ಪಡೆಯಬಹುದಾಗಿದೆ ಅಥವಾ ಉಚಿತ ಸಹಾಯವಾಣಿ 1950 ಕರೆ ಮಾಡುವ ಮೂಲಕ ಮತದಾರರ ಪಟ್ಟಿಯಲ್ಲಿ…

ಮುಂದೆ ಓದಿ...