ತುಮಕೂರು : ಗೌಡರ ಗದ್ದುಗೆ ಗುದ್ದಾಟ!!

ತುಮಕೂರು:      ತುಮಕೂರು ಲೋಕಸಭಾ ಕ್ಷೇತ್ರ ರಾಷ್ಟ್ರ ರಾಜಕಾರಣದ ಕೆಂಗಣ್ಣಿಗೆ ಗುರಿಯಾಗುವಂತೆ ಕಂಡುಬರುತ್ತಿದೆ. ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ತುಮಕೂರು ಸ್ಪರ್ಧಿಸುವ ನಿರ್ಧಾರ ಅಂತಿಮಗೊಂಡಿದ್ದು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಕಣಕ್ಕಿಳಿಯುವ  ಹೆಚ್.ಡಿ.ದೇವೇಗೌಡರು ಜೆಡಿಎಸ್ ನ ಪಾಬಲ್ಯ ಅತ್ಯಧಿಕವಾಗಿರುವ ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಿದರೆ, ಅನಾಯಾಸವಾಗಿ ಜಯಗಳಿಸಬಹುದೆಂಬ ಲೆಕ್ಕಾಚಾರದಲ್ಲಿದ್ದಾರೆ.       ಕಳೆದ ಲೋಕಸಭಾ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದ ಕಾಂಗ್ರೆಸ್ ನ ಸಂಸದ ಎಸ್.ಪಿ.ಮುದ್ದಹನುಮೇಗೌಡರಿಗೆ ಟಾಂಗ್ ನೀಡಿ ಜೆಡಿಎಸ್ ಪಕ್ಷವು ತನ್ನ ವಶಕ್ಕೆ ತುಮಕೂರು ಕ್ಷೇತ್ರವನ್ನ ಪಡೆದುಕೊಂಡಿರುವುದರಿಂದ ಸಂಸದ ಮುದ್ದಹನುಮೇಗೌಡರ ಆಕ್ರೋಶಕ್ಕೂ ಹೊರತಾಗಿಲ್ಲ. ಬೇರೆ ಕ್ಷೇತ್ರಗಳ ರೀತಿಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನ ಹೊಂದಾಣಿಕೆ ಎರಡೂ ಪಕ್ಷಗಳ ಸ್ಪಷ್ಟ ನಿಲುವು ಒಮ್ಮತವಾಗಿ ಕಂಡುಬರುತ್ತಿಲ್ಲ. ಕಾಂಗ್ರೆಸ್ ನಲ್ಲಿ ಆಂತರಿಕ ಭಿನ್ನರಾಗ ಹೆಚ್ಚಾಗುತ್ತಿದೆ. ಹೇಮಾವತಿ ನೀರನ್ನು ತುಮಕೂರಿಗೆ ಸಮರ್ಪಕವಾಗಿ ಹರಿಸಿಲ್ಲವೆಂಬ ಕೂಗು ಉಲ್ಬಣಗೊಂಡಿದೆ.        ಬಿಜೆಪಿ ಪಕ್ಷದಲ್ಲಿ ಮಾಜಿ ಶಾಸಕ…

ಮುಂದೆ ಓದಿ...

ಬೈಕ್ ಗೆ ಅಡ್ಡಬಂದ ನಾಯಿ : ಗಂಭೀರ ಗಾಯ!

ಕೊಡಿಗೇನಹಳ್ಳಿ:       ರಸ್ತೆಯಲ್ಲಿ ನಾಯಿ ಅಡ್ಡ ಬಂದ ಪರಿಣಾಮ ದ್ವೀಚಕ್ರ ವಾಹನದಿಂದ ಬಿದ್ದ ವ್ಯಕ್ತಿಗೆ ಗಂಭಿರ ಗಾಯಗಳಾದ ಘಟನೆ ಭಾನುವಾರ ರಾತ್ರಿ ನಡೆದಿದೆ.       ತಾಲೂಕಿನ ಕೋಡ್ಗದಾಲ ಮೂಲಕ ಬ್ಯಾಲ್ಯ ಗ್ರಾಮಕ್ಕೆ ಹೋಗುತಿದ್ದ ಅಗ್ರಹಾರ ಗ್ರಾಪಂ ಸದಸ್ಯ ಉಗ್ರಪ್ಪನ ವಾಹನಕ್ಕೆ ದಿಢೀರ ಬೀದಿ ನಾಯಿ ಅಡ್ಡ ಬಂದ ಪರಿಣಾಮ ದ್ವೀಚಕ್ರವಾಹನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಬಿದ್ದಿದ್ದಾರೆ.        ಅದೆ ರಸ್ತೆಯಲ್ಲಿ ಸಂಚರಿಸುತಿದ್ದ ಪರಿಚಿತ ವ್ಯಕ್ತಿ ಹನುಮಂತರಾಯಪ್ಪ ತಕ್ಷಣ ಗಾಯಾಳಾನ್ನು ಆಂಬುಲೆನ್ಸ್ ಮೂಲಕ ಮಧುಗಿರಿ ಆಸ್ಪತ್ರೆಗೆ ರವಾನಿಸಿದ್ದು, ತಲೆಗೆ ತೀವ್ರ ಪೆಟ್ಟಾದ ಪರಿಣಾಮ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿಸಿದ್ದಾರೆ.

ಮುಂದೆ ಓದಿ...

ಸ್ವೀಪ್ ಸಮಿತಿ ವತಿಯಿಂದ ಮತದಾನದ ಬಗ್ಗೆ ಜನರಲ್ಲಿ ಪ್ರಾತ್ಯಕ್ಷಿತೆ.

ಕೊರಟಗೆರೆ :       ಮತದಾನ ನಮ್ಮ ಹಕ್ಕು ಯಾರು ಮರೆಯಬಾರದು ಉತ್ತಮ ಸಮಾಜನಿರ್ಮಾಣಕ್ಕಾಗಿ ಯೋಗ್ಯ ಅಭ್ಯüರ್ಥಿಯನ್ನು ಆರಿಸಬೇಕು ಯಾವುದೇ ಅಸೆ, ಆಮಿಷಗಳಿಗೆ ಒಳಗಾಗದೆ ಪ್ರಾಮಾಣಿಕ ಹಾಗೂ ಪಾರದರ್ಶಕವಾಗಿ ಮತ ಚಲಾಯಿಸಬೇಕು, ಪ್ರಜಾಪ್ರಭುತ್ವ ಬಲಪಡಿಸಲು ಮತದಾನ ಅತ್ಯತ್ತಮ ಅವಕಾಶವಾಗಿದೆ ಎಂದು ತಾ.ಪಂ. ಕಾರ್ಯನಿರ್ನಹಣಾದಿಕಾರಿ ಶಿವಪ್ರಕಾಶ್ ತಿಳಿಸಿದರು.       ಅವರು ಕೊರಟಗೆರೆ ಪಟ್ಟಣ ಪಂಚಾಯಿತಿ ಮುಂಭಾಗದ ಬಸ್ ನಿಲ್ದಾಣದಲ್ಲಿ ಭಾರತ ಚುನಾವಣಾ ಆಯೋಗ ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಮತ ಚಲಾಯಿಸಲು ಜನರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಮತದಾರರಿಗೆ ಅರಿವು ಎವಿಎಂ-ವಿವಿಪ್ಯಾಡ್ ಬಗ್ಗೆ ಪ್ರಾತ್ಯಕ್ಷಿತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಹಬ್ಬದಂತಾಗಬೇಕು, ಕುಟುಂಬ ಸಮೇತ ಮತಗಟ್ಟೆಗೆ ಬಂದು ಕಡ್ಡಾಯವಾಗಿ ಮತ ಚಲಾಯಿಸಬೇಕು, ಯಾರೋಬ್ಬರೂ ಕೂಡ ಮತದಾನದಿಂದ ವಂಚಿತರಾಗಬಾರದು, ಚುನಾವಣೆಯಲ್ಲಿ ಪಕ್ಷ, ವ್ಯಕ್ತಿ ಅನ್ನುವುದು ಮುಖ್ಯವಲ್ಲ ಎಂದು ಅವರು…

ಮುಂದೆ ಓದಿ...

ಕೊರಟಗೆರೆ : ಗರ್ಭಕೋಶ ಸುತ್ತಲಿದ್ದ 2ಕೆಜಿ 650ಗ್ರಾಂ ಗೆಡ್ಡೆ ಹೊರತೆಗೆದ ಸರ್ಕಾರಿ ಆಸ್ಪತ್ರೆ ವೈದ್ಯರು

ಕೊರಟಗೆರೆ:       ಮಹಿಳೆಯ ಹೊಟ್ಟೆಯಲ್ಲಿ ಕಳೆದ ನಾಲ್ಕು ವರ್ಷದಿಂದ ಗರ್ಭಕೋಶದ ಸುತ್ತಲು ಬೆಳೆದಿದ್ದ 2ಕೆಜಿ 650ಗ್ರಾಂ ತೂಕದ ಗೆಡ್ಡೆಯನ್ನು ಕೊರಟಗೆರೆ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ತಂಡ ನಡೆಸಿದ ಶಸ್ತ್ರಚಿಕಿತ್ಸೆ ಮಂಗಳವಾರ ಯಶಸ್ವಿಯಾಗಿದೆ.       ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಸ್ತ್ರೀರೋಗ ತಜ್ಞ ಡಾ.ನಾಗಭೂಷನ್, ಅರವಳಿಕೆ ತಜ್ಞ ಡಾ.ಪ್ರಕಾಶ್, ಆಸ್ಪತ್ರೆಯ ಸಿಬ್ಬಂದಿಗಳಾದ ಚಂದ್ರಕಲಾ, ಪ್ರೇಮಾ ಮತ್ತು ನಂಜೇಗೌಡ ನೇತೃತ್ವದ ವೈದ್ಯರ ತಂಡ ಕಮಲಮ್ಮ ಎಂಬ ಮಹಿಳೆಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ.        ತುಂಬಾಡಿ ಗ್ರಾಪಂ ವ್ಯಾಪ್ತಿಯ ಪುಟ್ಟಮ್ಮನಪಾಳ್ಯ ಗ್ರಾಮದ ಕಮಲಮ್ಮ ಎಂಬ ಮಹಿಳೆಯ ಹೊಟ್ಟೆಯಲ್ಲಿ ಗರ್ಭಕೋಶ ಸುತ್ತಲೂ ಕಳೆದ ನಾಲ್ಕು ವರ್ಷದಿಂದ ಬೆಳೆದಿದ್ದ 2ಕೆಜಿ 650ಗ್ರಾಂ ತೂಕದ ಗೆಡ್ಡೆಯನ್ನು ಕೊರಟಗೆರೆ ಪಟ್ಟಣದ ಸರಕಾರಿ ವೈದ್ಯರ ತಂಡ ಸುಸುತ್ರವಾಗಿ ಶಸ್ತ್ರ ಚಿಕಿತ್ಸೆ ನಡೆಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತೀದ್ದಾರೆ.  …

ಮುಂದೆ ಓದಿ...

ನಾಳೆಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ : 36,196 ಪರೀಕ್ಷಾರ್ಥಿಗಳು

 ತುಮಕೂರು:       ಜಿಲ್ಲೆಯ ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಗಳ 36196 ವಿದ್ಯಾರ್ಥಿಗಳು ಮಾರ್ಚ್ 21ರಿಂದ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಬರೆಯಲಿದ್ದಾರೆ ಎಂದು ಡಿಡಿಪಿಐ ಎಂ.ಆರ್.ಕಾಮಾಕ್ಷಿ ತಿಳಿಸಿದ್ದಾರೆ. 141 ಪರೀಕ್ಷಾ ಕೇಂದ್ರ :-       ಜಿಲ್ಲೆಯ 141(ತುಮಕೂರು-83, ಮಧುಗಿರಿ-58)ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ತುಮಕೂರಿನ 23751(ಬಾಲಕರು-13156, ಬಾಲಕಿಯರು-10595) ಹಾಗೂ ಮಧುಗಿರಿಯ 12445(ಬಾಲಕರು-6572, ಬಾಲಕಿಯರು-5873) ಸೇರಿ ಒಟ್ಟು 36,196 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ.       ಜಿಲ್ಲೆಯಲ್ಲಿ 141 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಪೈಕಿ 62 ಕ್ಲಸ್ಟರ್ ಸಹಿತ, 76 ಕ್ಲಸ್ಟರ್ ರಹಿತ ಹಾಗೂ 3 ಖಾಸಗಿ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ತುಮಕೂರು ನಗರದ ವಿದ್ಯಾನಿಕೇತನ ಶಾಲೆ, ಎಸ್.ಐ.ಟಿ.ಯ ವಾಸವಿ ಪ್ರೌಢಶಾಲೆ ಹಾಗೂ ಮಧುಗಿರಿಯ ಜ್ಯೂಪಿಟರ್ ಪಬ್ಲಿಕ್ ಶಾಲೆ ಸೇರಿ 3 ಖಾಸಗಿ ಕೇಂದ್ರಗಳಲ್ಲಿ…

ಮುಂದೆ ಓದಿ...