ಬಿಜೆಪಿ ಅಭ್ಯರ್ಥಿ ಜಿಎಸ್‍ಬಿ ನಾಮಪತ್ರ ಸಲ್ಲಿಕೆ!

ತುಮಕೂರು:       ರಾಜ್ಯದಲ್ಲಿ ಏ. 18 ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ತುಮಕೂರು ಲೋಕಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಹಾಗೂ ಮಾಜಿ ಸಂಸದ ಜಿ.ಎಸ್. ಬಸವರಾಜು ಇಂದು ಮಧ್ಯಾಹ್ನ ತಮ್ಮ ಉಮೇದುವಾರಿಕೆಯನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಕೆ. ರಾಕೇಶ್‍ಕುಮಾರ್ ಅವರಿಗೆ ಸಲ್ಲಿಸಿದರು.       ನಗರದ ಕಾಲ್ಟ್ಯಾಕ್ಸ್‍ನಲ್ಲಿರುವ ಶ್ರೀ ಸಿದ್ದಿವಿನಾಯಕ ದೇವಾಲಯಕ್ಕೆ ಮಾಜಿ ಸಚಿವರಾದ ವಿ. ಸೋಮಣ್ಣ, ಮಾಜಿ ಶಾಸಕ ಬಿ.ಸುರೇಶ್‍ಗೌಡ, ಸೊಗಡು ಶಿವಣ್ಣ, ಶಾಸಕರಾದ ಜೆ.ಸಿ. ಮಾಧುಸ್ವಾಮಿ, ಜಿ.ಬಿ. ಜ್ಯೋತಿಗಣೇಶ್, ಬಿ.ಸಿ. ನಾಗೇಶ್ ಸೇರಿದಂತೆ ಕಾರ್ಯಕರ್ತರೊಂದಿಗೆ ಭೇಟಿ ನೀಡಿದ ಬಿಜೆಪಿ ಅಭ್ಯರ್ಥಿ ಜಿ.ಎಸ್. ಬಸವರಾಜು ಸಿದ್ದಿವಿನಾಯಕನಿಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.       ನಂತರ ಸಿದ್ದಿವಿನಾಯಕ ದೇವಾಲಯದಲ್ಲಿ ವಿವಿಧ ಜಾನಪದ ಕಲಾ ತಂಡಗಳ ಆಕರ್ಷಕ ಪ್ರದರ್ಶನದೊಂದಿಗೆ ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ಪಕ್ಷದ ಕಾರ್ಯಕರ್ತರು…

ಮುಂದೆ ಓದಿ...

ಮಾಜಿ ಶಾಸಕ ಹೆಚ್.ಬಿ.ನಂಜೇಗೌಡ ಬಿಜೆಪಿ ತೊರೆದು ಜೆಡಿಎಸ್ ಗೆ ಸೇರ್ಪಡೆ!

ತುರುವೇಕೆರೆ :       ತಾಲೂಕಿನ ಮಾಜಿ ಶಾಸಕ ಹೆಚ್.ಬಿ.ನಂಜೇಗೌಡ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮನೆಗೆ ವಿಧಾನ ಪರಿಷತ್ ಸದಸ್ಯ ಬೆಮಲ್ ಕಾಂತರಾಜ್ ರವರೊಂದಿಗೆ ತೆರಳಿದ ಮಾಜಿ ಶಾಸಕ ಹೆಚ್.ಬಿ.ನಂಜೇಗೌಡ ತಮ್ಮ ಮಾತೃ ಪಕ್ಷ ಜೆಡಿಎಸ್ ಗೆ ಸೇರ್ಪಡೆಗೊಂಡರು.        ತಮ್ಮ ರಾಜಕೀಯ ಗುರುಗಳಾಗಿರುವ ದೇವೇಗೌಡರೇ ತಮ್ಮ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವುದರಿಂದ ಅವರ ಗೆಲುವಿಗೆ ಶ್ರಮಿಸುವುದು ತಮ್ಮ ಕರ್ತವ್ಯವಾಗಿದೆ. ಜಿಲ್ಲೆಯ ಸರ್ವತೋಮುಖ ಅಭಿವೃಧ್ಧಿಗೆ ದೇವೇಗೌಡರು ಶ್ರಮಿಸುವರು. ಅವರ ಗೆಲುವು ನೂರಕ್ಕೆ ನೂರರಷ್ಟು ಖಚಿತ ಎಂದು ಹೇಳಿದ ನಂಜೇಗೌಡರು ತಾಲೂಕಿನಲ್ಲಿ ದೇವೇಗೌಡರಿಗೆ ನಿರೀಕ್ಷೆಗೂ ಮೀರಿದ ಮತಗಳು ಲಭಿಸುವುವು. ಅವರು ಸ್ಪರ್ಧಿಸುತ್ತಿರುವುದು ಜೆಡಿಎಸ್ ಕಾರ್ಯಕರ್ತರಿಗೆ ರೋಮಾಂಚನವನ್ನು ಉಂಟು ಮಾಡಿದೆ. ಮುಂಬರುವ ದಿನಗಳಲ್ಲಿ ಬೆಮಲ್ ಕಾಂತರಾಜ್ ಹಾಗೂ ಇನ್ನಿತರ ಮುಖಂಡರ ನೇತೃತ್ವದಲ್ಲಿ ಜೆಡಿಎಸ್ ನ್ನು ಭದ್ರಗೊಳಿಸಲಾಗುವುದು ಎಂದು ಹೆಚ್.ಬಿ.ನಂಜೇಗೌಡ ಹೇಳಿದರು.    …

ಮುಂದೆ ಓದಿ...

ನಾನು ತುಮಕೂರಿಗೆ ಮಾತ್ರ ಸೀಮಿತವಲ್ಲ – ಹೆಚ್.ಡಿ. ದೇವೇಗೌಡ

ತುಮಕೂರು:       ಕಾಂಗ್ರೆಸ್ ಪಕ್ಷದಲ್ಲಿ ಹಾಲಿ ಸಂಸದರಿಗೆಲ್ಲರಿಗೂ ಸೀಟು ನೀಡಿ ಮುದ್ದಹನುಮೇಗೌಡರೊಬ್ಬರಿಗೆ ಟಿಕೆಟ್ ಕೈ ತಪ್ಪಿರುವುದು ನನಗೂ ನೋವು ತಂದಿದೆ. ಆದರೆ ದೋಸ್ತಿ ಪಕ್ಷಗಳ ಕ್ಷೇತ್ರ ಹಂಚಿಕೆಯಲ್ಲಿ ತುಮಕೂರು ಜೆಡಿಎಸ್ ಪಕ್ಷಕ್ಕೆ ದೊರೆತಿರುವುದರಿಂದ ಉಭಯ ಪಕ್ಷಗಳ ನಾಯಕರು ಮತ್ತು ಕಾರ್ಯಕರ್ತರ ಒತ್ತಾಯದ ಮೇರೆಗೆ ಈ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧಿಸಿದ್ದೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹೇಳಿದರು.       ನಗರದಲ್ಲಿ ನಿನ್ನೆ ಸಂಜೆ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಕೇವಲ ತುಮಕೂರು ಕ್ಷೇತ್ರಕ್ಕೆ ಮಾತ್ರ ಸೀಮಿತವಲ್ಲ. ರಾಜ್ಯದ 28 ಕ್ಷೇತ್ರಗಳಿಗೂ ಹೋಗಿ ಪ್ರಚಾರ ಮಾಡಬೇಕಾಗಿದೆ. 28 ಕ್ಷೇತ್ರಗಳಲ್ಲೂ ಮೈತ್ರಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದು ತಿಳಿಸಿದರು.       ರಾಜ್ಯದ 28 ಕ್ಷೇತ್ರಗಳಲ್ಲೂ ಮೈತ್ರಿಕೂಟದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಶಕ್ತಿಮೀರಿ ಪ್ರಯತ್ನಿಸುವುದಾಗಿ ಅವರು ಹೇಳಿದರು. ನಾನು 29…

ಮುಂದೆ ಓದಿ...

ಸ್ವಕ್ಷೇತ್ರದಲ್ಲೇ ಡಿಸಿಎಂ ಪರಮೇಶ್ವರ್ ಒಬ್ಬಂಟಿ!

ತುಮಕೂರು :       ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ದೇವೇಗೌಡರಿಗೆ ನೀಡಿದ ಹಿನ್ನೆಯಲ್ಲಿ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರು ರೊಚ್ಚಿಗೆದ್ದಿದ್ದಾರೆ.       ಹೌದು, ಇತ್ತೀಚೆಗೆ ಪರಮೇಶ್ವರ್ ಬಲಗೈ ಬಂಟ ಬಲರಾಮಯ್ಯ ಮನೆಯಲ್ಲಿ ನಡೆದ ಸಭೆಯಲ್ಲಿ ಕಾರ್ಯಕರ್ತರು ಪಕ್ಷದ ವ್ಯಕ್ತಿಗೆ ಟಿಕೆಟ್ ನೀಡಬೇಕೆಂದು ರೊಚ್ಚಿಗೆದ್ದಿದ್ದರು, ಹಾಗೂ ಮುದ್ದಹನುಮೇಗೌಡರಿಗೆ ಯಾವುದೇ ಕಾರಣಕ್ಕೂ ವಾಪಾಸ್ ತೆಗೆಯಬಾರದೆಂಬ ಬೇಡಿಕೆಯನ್ನೂ ಸಹ ಕಾರ್ಯಕರ್ತರು ಇಟ್ಟಿದ್ದರು. ಇದಾದ ಬಳಿಕ ಮುದ್ದಹನುಮೇಗೌಡರಿಗೆ ಬಿಫಾರಂ ನೀಡದ ಹಿನ್ನೆಲೆಯಲ್ಲಿ ಅವರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸಾವಿರಾರು ಬೆಂಬಲಿಗರೊಂದಿಗೆ ಆಗಮಿಸಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದರು.       ಮೈತ್ರಿ ಅಭ್ಯರ್ಥಿಯಾದ ದೇವೇಗೌಡರ ಉಮೇದುವಾರಿಕೆ ಸಲ್ಲಿಸಲು ಕಾಂಗ್ರೆಸ್ ಕಾರ್ಯಕರ್ತರ ಕೊರತೆ ಎದ್ದು ಕಾಣುತ್ತಿತ್ತು. ಅದೇ ಮುದ್ದಹನುಮೇಗೌಡರ ಮೆರವಣಿಗೆಯಲ್ಲಿ ಕೊರಟಗೆರೆ ಕ್ಷೇತ್ರದ ಸಾವಿರಾರು ಮುಖಂಡರು ಆಗಮಿಸುವ ಮೂಲಕ ಪರಮೇಶ್ವರ್ ರವರಿಗೆ ನಾವು ಪಕ್ಷ ಬಿಟ್ಟು ಬೇರೆಯವರಿಗೆ ಮತ ನೀಡುವುದಿಲ್ಲಾ ಎಂಬ ಸಂದೇಶ ನೀಡಿದಂತಾಗಿದೆ.…

ಮುಂದೆ ಓದಿ...