ದೇವೇಗೌಡರ ಬಗ್ಗೆ ಅಪಪ್ರಚಾರ ಮಾಡುತ್ತಿರುವುದು ಸರಿಯಲ್ಲ – ಸಿ.ಬಿ.ಸುರೇಶ್‍ಬಾಬು

ಚಿಕ್ಕನಾಯಕನಹಳ್ಳಿ :       ಶಾಸಕರಾಗಿರುವ ಮಾಧುಸ್ವಾಮಿರವರು ಮೂರು ತಿಂಗಳಲ್ಲಿ ತಾಲ್ಲೂಕಿಗೆ ನೀರು ಹರಿಸುತ್ತೇನೆ ಎಂದು ಹೇಳಿದ್ದರು ಒಂದು ವರ್ಷವಾಯಿತು ತಾಲ್ಲೂಕಿನಲ್ಲಿ ಇದುವರೆವಿಗೂ ಯಾವುದೇ ಅಭಿವೃದ್ದಿ ಮಾಡಿಲ್ಲ, ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ತಂದಂತಹ ಯೋಜನೆಗಳಿಗೆ ಗುದ್ದಲಿ ಪೂಜೆ ನೆರವೇರಿಸುತ್ತಿರುವುದೇ ಅವರ ಅಭಿವೃದ್ದಿಯಾಗಿದೆ ಎಂದು ಮಾಜಿ ಶಾಸಕ ಸಿ.ಬಿ.ಸುರೇಶ್‍ಬಾಬು ಆರೋಪಿಸಿದರು.\      ಪಟ್ಟಣದ ತಮ್ಮ ಗೃಹ ಕಛೇರಿಯಲ್ಲಿ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಪೂರ್ವಭಾವಿ ಸಭೆಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಅಭಿವೃದ್ದಿಯ ಕೆಲವು ಕಾಮಗಾರಿಗಳು ಶಂಕುಸ್ಥಾಪನೆ ಮಾಡಿದ್ದರೂ ಪುನಃ ಶಂಕಸ್ಥಾಪನೆ ಮಾಡಿ ತಮ್ಮ ಹಿಡಿತದಲ್ಲಿ ಇಟ್ಟುಕೊಳ್ಳಲು ಶಾಸಕರು ಪ್ರಯತ್ನಿಸುತ್ತಿದ್ದಾರೆ, ನನ್ನ ಅಭಿವೃದ್ದಿ ಕಾರ್ಯಗಳನ್ನು ತಮ್ಮ ಅಭಿವೃದ್ದಿ ಕಾರ್ಯಗಳೆಂದು ಬೆಂಬಲಿಸಲು ಶಾಸಕರು ಹೊರಟಿದ್ದಾರೆ ನಾನು ಒಂದು ವರ್ಷ ಏನು ಮಾತನಾಡಬಾರದು ಎಂದು ಸುಮ್ಮನಿದ್ದೆ ಎಂದ ಅವರು, ತಾಲ್ಲೂಕಿನ ಅಭಿವೃದ್ದಿಗಾಗಿ ಮುಖ್ಯಮಂತ್ರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ನಮ್ಮ ಕ್ಷೇತ್ರದ…

ಮುಂದೆ ಓದಿ...