ಜನಪ್ರತಿನಿಧಿಗಳು ಬರಗಾಲವನ್ನು ಎದುರಿಸಲು ವಿಫಲವಾಗಿದ್ದಾರೆ-ಕೆಎನ್‍ಆರ್

ಮಧುಗಿರಿ:       ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಜನಪ್ರತಿನಿಧಿಗಳು ಬರಗಾಲವನ್ನು ಎದುರಿಸಲು ವಿಫಲವಾಗಿದ್ದಾರೆ ಹಾಗೂ ಅಧಿಕಾರಿಗಳು ಈ ಮೊದಲೇ ಮುಂಜಾಗ್ರತ ಕ್ರಮ ಕೈಗೊಂಡಿಲ್ಲದೇ ಇರುವುದರಿಂದ ತಾಲ್ಲೂಕಿನಲ್ಲಿ ನೀರಿನ ಹಾಹಾಕಾರ ಹೆಚ್ಚಾಗಿದೆ ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು.       ಪಟ್ಟಣದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾವುದೇ ಸರಕಾರವಿರಲಿ ಜನರ ಯೋಗ ಕ್ಷೇಮವನ್ನು ವಿಚಾರಿಸುವಂತಹ ಶಾಸಕರಿರಬೇಕು. ಆದರೆ ತಾಲ್ಲೂಕಿನ ಚಿತ್ರಣವೇ ಬೇರೆಯಾಗಿದೆ. ಈ ಹಿಂದೆ ನಾನು ಶಾಸಕನಾಗಿದ್ದಾಗ ನೀರಿನ ಬವಣೆ ಅಷ್ಟಾಗಿ ಕಂಡುಬಂದಿರಲಿಲ್ಲ ಕಳೆದ ಬಾರಿಗಿಂತ ಈ ಬಾರಿ ಅವಧಿಗೂ ಮುಂಚೆಯೇ ಹೆಚ್ಚಾಗಿ ಹೇಮಾವತಿ ನೀರು ಹರಿದಿದೆ.       ಹೇಮಾವತಿ ನೀರನ್ನು ಸಿದ್ದಾಪುರ ಕೆರೆಗೆ ಹರಿಸಿ ಅಲ್ಲಿಂದ ಬಿಜವರದ ಕೆರೆಗೆ ನೀರು ಹರಿಸಲಾಗಿತ್ತು ಆದರೂ ಈಗ ನೀರಿನ ಬವಣೆ ಹೆಚ್ಚಾಗಿ ಕಂಡು ಬರುತ್ತಿದೆ ಎಂದರು.    …

ಮುಂದೆ ಓದಿ...

ಹೇಮಾವತಿ ನೀರು ಕೊಡುತ್ತಿಲ್ಲ ಎಂಬ ಹೇಳಿಕೆಯಲ್ಲಿ ಸತ್ವವಿಲ್ಲ – ದೇವೇಗೌಡರು

ತುಮಕೂರು:       ಜಿಲ್ಲೆಗೆ ದೇವೇಗೌಡರು ಹೇಮಾವತಿ ನೀರು ಕೊಡುತ್ತಿಲ್ಲ ಎಂಬ ವಿರೋಧಿಗಳ ಹೇಳಿಕೆಯಲ್ಲಿ ಸತ್ವವಿಲ್ಲ. ಮನಸ್ಸಿಗೆ ಬಂದಂತೆ ಪ್ರಚಾರ ಮಾಡುವವರನ್ನು ಸಮಾಧಾನಪಡಿಸಲು ಆಗುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಹೇಳಿದರು.       ತುಮಕೂರಿಗೆ ಬರಬೇಕಾದ ನೀರನ್ನು ದೇವೇಗೌಡರು ಹಿಡಿದಿಟ್ಟುಕೊಳ್ಳುತ್ತಿದ್ದಾರೆ ಎಂಬ ಕೆಲವರ ಹೇಳಿಕೆಗೆ ನಾನು ಹೆಚ್ಚು ಮಹತ್ವ ಕೊಡುವುದಿಲ್ಲ. ನೀರಾವರಿ ವಿಷಯದ ಬಗ್ಗೆ ಮಾತನಾಡುವವರು ತಿಳಿದುಕೊಂಡು ಮಾತನಾಡಬೇಕು. ಪ್ರಚಾರಕ್ಕಾಗಿ ಹೇಳಿಕೆ ನೀಡಿದರೂ ಅದರಲ್ಲಿ ಸತ್ವ ಇರಬೇಕು ಎಂದು ಗುಡುಗಿದರು.ನಗರದಲ್ಲಿ ರಾತ್ರಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಡಿಯುವ ನೀರಿಗೆ ನನ್ನ ಮೊದಲ ಆದ್ಯತೆ, ಜಿಲ್ಲೆಯ ಹಳ್ಳಿಗಳಿಗೆ ನೀರು ಒದಗಿಸಲು ಹೆಚ್ಚು ಆಸಕ್ತಿ ವಹಿಸಬೇಕು. ಇದಕ್ಕಾಗಿ ನಾನು ಶ್ರಮಿಸುತ್ತಾ ಬಂದಿದ್ದೇನೆ ಎಂದರು.       ಇಂದಿರಾಗಾಂಧಿ ಅವರು ಪ್ರಧಾನಿಯಾಗಿದ್ದಾಗ ನಾನು ರಾಜ್ಯದಲ್ಲಿ ನೀರಾವರಿ ಮಂತ್ರಿಯಾಗಿದ್ದೆ. ಆಗ ನೀರಿನ ಬಳಕೆ ಹಾಗೂ…

ಮುಂದೆ ಓದಿ...