ಸುಳ್ಳು ಭರವಸೆ ಮೂಲಕ ಬಿಜೆಪಿಯಿಂದ ಜನರಿಗೆ ಮೋಸ-ಶೇಷಾದ್ರಿ

 ತುಮಕೂರು:       ದೇಶದಲ್ಲಿ ಸುಳ್ಳುಹೇಳುವ ಪಕ್ಷ ಎಂದರೆ ಅದು ಬಿಜೆಪಿ ಪಕ್ಷ. ಕೇವಲ ಸುಳ್ಳು ಭರವಸೆಗಳನ್ನು ನೀಡಿ ಬಡಜನರನ್ನು, ಕಾರ್ಮಿಕ ವರ್ಗದವರನ್ನು ಮೋಸ ಮಾಡಿದ್ದಾರೆ ಎಂದು ಸಿಪಿಐನ ಜಿಲ್ಲಾ ಉಸ್ತುವಾರಿ ಶೇಷಾದ್ರಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.       ಸಿಪಿಐ ಪಕ್ಷದ ಕಚೇರಿಯಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಬಡಜನರಿಗೆ ವಿವಿಧ ಆಶ್ವಾಸನೆಗಳನ್ನು ನೀಡಿತ್ತು.ಅದರಲ್ಲಿ ಇಲ್ಲಿಯವರೆಗೆ ಯಾವೊಂದು ಭರವಸೆಯೂ ಈಡೇರಿಲ್ಲ. ಬದಲಿಗೆ ನೋಟು ಅಮಾನಿಕರಣ, ಜಿಎಸ್‍ಟಿ ಜಾರಿಯಂತಹ ಯೋಜನೆಗಳಿಂದ ಬಡವರಿಗೆ ಸಮಸ್ಯೆಯನ್ನುಂಟು ಮಾಡಿದೆ ಎಂದರು.       ಇಂದು ಕೇಂದ್ರದಲ್ಲಿ ಬಿಜೆಪಿ ಪಕ್ಷ ಇಲ್ಲ.ಮೋದಿ ಪಕ್ಷ ಮಾತ್ರ ಇದೆ. ಮೋದಿಯವರು ಸರ್ವಾಧಿಕಾರ ಧೋರಣೆಯನ್ನು ತೋರುತ್ತಿದ್ದಾರೆ. ಅದಕ್ಕಾಗಿಯೇ ವಿವಿಧ ಪಕ್ಷಗಳು ಬಿಜೆಪಿಯೊಂದಿಗಿನ ಮೈತ್ರಿ ತ್ಯಜಿಸಿ ಬೇರೆಯಾಗಿದ್ದಾರೆ. ಕೇಂದ್ರ ಸರ್ಕಾರವು ರೈತರ ಹಾಗೂ ಕಾರ್ಮಿಕರ ವಿರೋಧಿಯಾಗಿದೆ.ಚುನಾವಣೆ ಮುಂಚೆ…

ಮುಂದೆ ಓದಿ...

ಯಾವುದೇ ಆಮಿಷಕ್ಕೊಳಗಾಗದೆ ಮತದಾನ ಮಾಡಿ-ಸಿಇಓ ಕರೆ

 ತುಮಕೂರು :       ಜಿಲ್ಲೆಯಲ್ಲಿ ಏಪ್ರಿಲ್ 18ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಮತದಾರರು ಯಾವುದೇ ಆಮಿಷಕ್ಕೊಳಗಾಗದೆ ನಿರ್ಭೀತಿಯಿಂದ ಮತದಾನ ಮಾಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ಕರೆ ನೀಡಿದರು.       ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಕೊರಟಗೆರೆ ತಾಲ್ಲೂಕು ಕಾಶಾಪುರ ಗ್ರಾಮದ ಹಕ್ಕಿ-ಪಿಕ್ಕಿ ಜನಾಂಗದವರ ಕಾಲೋನಿಯಲ್ಲಿಂದು ಏರ್ಪಡಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು ಮತದಾರರ ಪಟ್ಟಿಯಲ್ಲಿರುವ ಪ್ರತಿಯೊಬ್ಬರೂ ತಪ್ಪದೇ ತಮ್ಮ ಹಕ್ಕನ್ನು ಚಲಾಯಿಸಬೇಕು.       ಮತಪಟ್ಟಿಯಲ್ಲಿ ತಮ್ಮ ಹೆಸರಿದ್ದು, ಎಪಿಕ್ ಕಾರ್ಡ್ ಹೊಂದಿಲ್ಲದಿದ್ದರೂ 11 ಪರ್ಯಾಯ ದಾಖಲಾತಿಗಳಲ್ಲಿ ಯಾವುದಾದರು ಒಂದನ್ನು ಮತಗಟ್ಟೆಯಲ್ಲಿ ಹಾಜರುಪಡಿಸಿದರೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.       ಚುನಾವಣೆ ದಿನದಂದು ವಯೋವೃದ್ಧರು ಹಾಗೂ ವಿಕಲಚೇತನರು ಮತದಾನ ಮಾಡಲು ಅನುವಾಗುವಂತೆ ಬೆಳಿಗ್ಗೆಯಿಂದ ಸಂಜೆಯವರೆಗೆ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ…

ಮುಂದೆ ಓದಿ...