16 ಲಕ್ಷ ನಗದು, 95ಲಕ್ಷ ರೂ. ಮೌಲ್ಯದ ಮದ್ಯ ವಶ!

ತುಮಕೂರು:       ಲೋಕಸಭಾ ಚುನಾವಣೆ-2019ರ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದ ದಿನದಿಂದ ಇಲ್ಲಿಯವರೆಗೂ ತುಮಕೂರು ಜಿಲ್ಲೆಯಲ್ಲಿ 95,13,736 ರೂ. ಮೌಲ್ಯದ 25,015.68 ಲೀ. ಮದ್ಯ, 16,67,760 ರೂ. ನಗದು ಹಾಗೂ 47 ದ್ವಿಚಕ್ರ ವಾಹನಗಳು ಸೇರಿದಂತೆ 44.47 ಲಕ್ಷ ರೂ. ಮೌಲ್ಯದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.       ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಜಿಲ್ಲಾದ್ಯಂತ ಚೆಕ್‍ಪೋಸ್ಟ್‍ಗಳನ್ನು ತೆರೆಯಲಾಗಿದ್ದು, ಚೆಕ್‍ಪೋಸ್ಟ್ ಸಿಬ್ಬಂದಿ ಹಾಗೂ ಇವರ ಜೊತೆಗೆ ಎಸ್‍ಎಸ್‍ಟಿ ತಂಡಗಳ ಕಟ್ಟುನಿಟ್ಟಿನ ತಪಾಸಣೆಯಿಂದಾಗಿ ಜಿಲ್ಲೆಯಲ್ಲಿ 16,67,760 ರೂ.ಗಳ ನಗದನ್ನು ವಶಪಡಿಸಿಕೊಂಡಿದ್ದು, ತೀವ್ರ ಪರಿಶೀಲನೆಯ ನಂತರ 1,47,760 ರೂ.ಗಳನ್ನು ಸಂಬಂಧಿಸಿದ ವಾರಸುದಾರರಿಗೆ ಹಿಂದಿರುಗಿಸಲಾಗಿದೆ. ಉಳಿದಂತೆ 15,20,000 ರೂ.ಗಳನ್ನು ಆದಾಯ ತೆರಿಗೆ ಇಲಾಖೆಯ ವಶಕ್ಕೆ ಒಪ್ಪಿಸಲಾಗಿದೆ.       ಜಿಲ್ಲೆಯಲ್ಲಿ ಅಕ್ರಮ ಮದ್ಯವನ್ನು ತಡೆಗಟ್ಟಲು 14 ಅಬಕಾರಿ ತಂಡಗಳು ಕಾರ್ಯನಿರ್ವಹಿಸುತ್ತಿದ್ದು, ದಿನದ 24 ಗಂಟೆಗಳು ಕಾರ್ಯಾಚರಣೆ ನಡೆಸುತ್ತಿವೆ.…

ಮುಂದೆ ಓದಿ...

ಕಲಾವಿದರ ಕುಂಚದಲ್ಲಿ ಅರಳಿದ ಮತದಾನ ಮಹತ್ವ

ತುಮಕೂರು:         ತುಮಕೂರು ಟೌನ್‍ಹಾಲ್ ಸರ್ಕಲ್ ಬಳಿಯ ಮಹಾನಗರ ಪಾಲಿಕೆಯ ಉದ್ಯಾನವನದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಚಿತ್ರಕಲಾ ಪರಿಷತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸಲು ಚಿತ್ರಕಲಾ ಶಿಕ್ಷಕರಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.       ಕಾರ್ಯಕ್ರಮವನ್ನು ಶ್ರೀ ಬೂಬಾಲನ್, ಆಯುಕ್ತರು, ಮಹಾನಗರ ಪಾಲಿಕೆ ಇವರು ಸ್ವತಃ ಚಿತ್ರವನ್ನು ಬಿಡಿಸುವುದರ ಮುಖಾಂತರ ಉದ್ಘಾಟಿಸಿದರು. ಅವರು ತಮ್ಮ ಉದ್ಘಾಟನಾ ಭಾಷಣದಲ್ಲಿ ಚಿತ್ರಕಲೆಯು ಸಾರ್ವಜನಿಕರ ಮನಸ್ಸಿಗೆ ಮುದ ನೀಡುವ ರೀತಿಯಲ್ಲಿ ಸಂದೇಶಗಳನ್ನು ತಲುಪಿಸುವ ಉತ್ತಮ ಸಾಧನವಾಗಿದ್ದು, ಅದಕ್ಕೆ ಬೆಲೆಕಟ್ಟಲು ಯಾರಿಂದಲೂ ಸಾಧ್ಯವಿಲ್ಲ. ಪ್ರಸ್ತುತ ನಡೆಯುತ್ತಿರುವ 2019ರ ಲೋಕಸಭಾ ಚುನಾವಣೆಯಲ್ಲಿ ಚಿತ್ರಕಲಾ ಕಲಾವಿದರು ತಮ್ಮ ಕುಂಚಗಳಲ್ಲಿ ಅರಳಿಸುವ ಚುನಾವಣಾ ಮಹತ್ವವನ್ನು ಸಾರುವ ಚಿತ್ರಕಲೆಯು ಹಲವಾರು ಜನರನ್ನು ತಲುಪಿ, ಆ ಮೂಲಕ ಅವರಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸುವ ಮಹತ್ತರ ಕಾರ್ಯವನ್ನು…

ಮುಂದೆ ಓದಿ...

ಕ್ಷೇತ್ರವನ್ನು ಜೆಡಿಎಸ್‍ನವರು ಪಡೆದುಕೊಂಡಿರುವುದು ಮೈತ್ರಿ ಧರ್ಮಕ್ಕೆ ವಿರುದ್ದ : ಕೆ.ಎನ್. ರಾಜಣ್ಣ

ಮಧುಗಿರಿ :      ಡಿಸಿಎಂ ಡಾ.ಜಿ. ಪರಮೇಶ್ವರ್‍ರವರು ಸಂಸದ ಮುದ್ದಹನುಮೇಗೌಡರನ್ನು ಪ್ರಚಾರದಿಂದ ದೂರವಿಟ್ಟು ಅವರನ್ನು ಮೂಲೆಗುಂಪು ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಕೆ.ಎನ್. ರಾಜಣ್ಣ ಆರೋಪಿಸಿದರು.       ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಸಂಸದ ಮುದ್ದಹನುಮೇಗೌಡರ ಕ್ಷೇತ್ರವನ್ನು ಜೆಡಿಎಸ್‍ನವರು ಪಡೆದುಕೊಂಡಿರುವುದು ಮೈತ್ರಿ ಧರ್ಮಕ್ಕೆ ವಿರುದ್ದ. ಇದು ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರಿಗೆ ಅತೃಪ್ತಿ ತಂದಿದೆ. ಇಂದಿನ ಕಾಂಗ್ರೆಸ್-ಜೆಡಿಎಸ್ ಸಭೆಗೆ ಅವರನ್ನು ಸೇರಿಸದೇ ಮೂಲೆ ಗುಂಪು ಮಾಡುತ್ತಿರುವುದಕ್ಕೆ ಕಾರ್ಯಕರ್ತರಿಗೆ ಅಸಮಾಧಾನವಾಗಿದೆ. ಇಂದಿನ ಸಭೆಗೆ ಕರೆದುಕೊಂಡು ಬಂದರೆ ಮಾತ್ರ ನಾನು ಸಭೆಯಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದೆ. ಆದರ ಅವರನ್ನು ಪ್ರಚಾರಕ್ಕೆ ಕರೆದುಕೊಂಡು ಬರುತ್ತಿಲ್ಲ.       ಮೈಸೂರಿನಲ್ಲಿ ಸಚಿವ ಜಿ.ಟಿ. ದೇವೇಗೌಡ ಸಭೆ ಕರೆದು ನಾವು ಕಾಂಗ್ರೆಸ್‍ಗೆ ಮತ ಚಲಾಯಿಸುವುದಿಲ್ಲ ಬಿಜೆಪಿಗೆ ಮತ ಚಲಾಯಿಸುತ್ತೇವೆ ಎಂಬುದಾಗಿ ಹೇಳಿಕೆ ನೀಡಿದ್ದು, ತುಮಕೂರು ಜಿಲ್ಲೆಯಲ್ಲಿ ನಾವು ಜೆಡಿಎಸ್‍ಗೆ ಏಕೆ ಮತ…

ಮುಂದೆ ಓದಿ...