ದೇಶದ ಅಭಿವೃದ್ಧಿ ಮತ್ತು ಬಡವರ ರಕ್ಷಣೆಗಾಗಿ ಮತ್ತೊಮ್ಮೆ ಮೋದಿ-ಹುಲಿನಾಯ್ಕರ್

ಕೊರಟಗೆರ:       ಭಾರತ ದೇಶದ ಸಮಗ್ರ ಅಭಿವೃದ್ದಿ ಮತ್ತು ಬಡವರ ರಕ್ಷಣೆಗಾಗಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಪಕ್ಷಕ್ಕೆ ಕುರುಬ ಸಮುದಾಯ ಮತ್ತೋಮ್ಮೆ ಬೆಂಬಲಸಿ ತುಮಕೂರು ಜಿಲ್ಲೆಯ ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜುಗೆ ಮತ ನೀಡಬೇಕು ಎಂದು ರಾಜ್ಯ ಹಿಂದುಳಿದ ವರ್ಗದ ಉಪಾಧ್ಯಕ್ಷ ಡಾ.ಎಂ.ಆರ್.ಹುಲಿನಾಯ್ಕರ್ ಮನವಿ ಮಾಡಿದರು.       ಪಟ್ಟಣದ ಬಸವೇಶ್ವರ ಸಮುದಾಯ ಭವನದಲ್ಲಿ ಲೋಕಸಭಾ ಚುನಾವಣೆ ಪ್ರಯುಕ್ತ ಬಿಜೆಪಿ ಯುವ ಮೋರ್ಚದ ವತಿಯಿಂದ ಮಂಗಳವಾರ ಏರ್ಪಡಿಸಲಾಗಿದ್ದ ಕೊರಟಗೆರೆ ಕುರುಬ ಸಮುದಾಯದ ಮುಖಂಡರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.       ತುಮಕೂರು ಜಿಲ್ಲೆಗೆ ಹೇಮಾವತಿ ನೀರು ಹಂಚುವ ವಿಚಾರದಲ್ಲಿ ಮಾಜಿ ಪ್ರದಾನಿ ದೇವೇಗೌಡರು ತಾರತಮ್ಮ ಮಾಡಿದ್ದಾರೆ. ದೇವೇಗೌಡರು ಕುರುಬ ಸಮುದಾಯದ ವಿರೋದಿ ಆಗಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನ ಹೆಜ್ಜೆ ಹೆಜ್ಜೆಗೂ ತುಳಿದುಕೊಂಡು ಬಂದಿದ್ದಾರೆ. ಜಾತಿಯ ಮೂಲಕ ರಾಜಕಾರಣ ಮಾಡುವ ಮಾಜಿ ಪ್ರಧಾನಿಗೆ…

ಮುಂದೆ ಓದಿ...

ಮೋದಿ ಭಾಷಣ ಸುಬ್ಬರಾಯನ ಕೆರೆ ಥರ – ಸಿದ್ದರಾಮಯ್ಯ

ಮಧುಗಿರಿ:       ಎಚ್.ಡಿ.ದೇವೇಗೌಡರ ಪರ ಮಾಜಿ ಸಿಎಂ ಸಿದ್ದರಾಮಯ್ಯ ಮೂರು ತಾಲೂಕುಗಳಲ್ಲಿ ಬುಧವಾರ ಪ್ರಚಾರ ನಡೆಸುವ ಮೂಲಕ ಜೆಡಿಎಸ್ ವಲಯದಲ್ಲಿ ಸ್ವಲ್ಪ ಸಮಾಧಾನ ಮೂಡಿಸಿದರು.       ದೇವೇಗೌಡರ ರಾಜಕೀಯ ವಿರೋಧಿಗಳಾಗಿರುವ ಸಿದ್ದರಾಮಯ್ಯ ಪ್ರಚಾರ ನಡೆಸುವ ಬಗ್ಗೆ ಜಿಲ್ಲೆಯ ಜನರಲ್ಲಿ ಕುತೂಹಲವಿತ್ತು. ಮೈತ್ರಿ ಅಭ್ಯರ್ಥಿ ದೇವೇಗೌಡರನ್ನು ಗೆಲ್ಲಿಸಿ ಎಂದು ಮನವಿ ಮಾಡುವ ಮೂಲಕ ಗೊಂದಲಕ್ಕೆ ತೆರೆ ಎಳೆದರು.       ಯುವಕರೇ ನಿಮ್ಮಲ್ಲಿ ಕೈ ಜೋಡಿಸಿ ಪ್ರಾರ್ಥಿಸುತ್ತೇನೆ. ಮೋದಿ, ಮೋದಿ ಎಂದು ಹೇಳ್ಬೇಡಿ. ಅವರು ನಿಮಗೇ ಟೋಪಿ ಹಾಕಿದ್ದಾರೆ. ಬಿಜೆಪಿ ಸೋಲಿಸುವ ಮೂಲಕ ಪ್ರಜಾಪ್ರಭುತ್ವ ಉಳಿಸಿ ಎಂದು ಮನವಿ ಮಾಡಿದರು.       ಕೊಡುಗೆ ಹೇಳಲು ಏನೂ ಇಲ್ಲದೆ ಚಿತ್ರದುರ್ಗ, ಮೈಸೂರಲ್ಲಿ ಮಾಡಿದ ಭಾಷಣ ಸುಬ್ಬರಾಯನ ಕೆರೆ ಥರ ಇತ್ತು. ಅಭಿವೃದ್ಧಿ ಕೆಲಸಗಳ ಬಗ್ಗೆ ಒಂದೂ ಮಾತನಾಡಲಿಲ್ಲ ಎಂದು ವ್ಯಂಗ್ಯವಾಡಿದರು.…

ಮುಂದೆ ಓದಿ...