ತುಮಕೂರು ಲೋಕಸಭಾ ಕ್ಷೇತ್ರ : 16 ಲಕ್ಷ ಮತದಾರರು!

 ತುಮಕೂರು :       ತುಮಕೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 1608000 ಮತದಾರರು ಇದ್ದು, ಏಪ್ರಿಲ್ 18ರಂದು ನಡೆಯುವ ಚುನಾವಣಾ ಮತದಾನವನ್ನು ಜಿಲ್ಲೆಯಲ್ಲಿ ಶಾಂತಿಯುತವಾಗಿ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ಅವರು ತಿಳಿಸಿದ್ದಾರೆ.      ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಸಂಜೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 2209780 ಮತದಾರರಿದ್ದು, ತುಮಕೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 803006 ಗಂಡಸರು, 804874 ಮಹಿಳೆಯರು, ಇತರೆ 120 ಒಟ್ಟು 1608000 ಮತದಾರರು ಇದ್ದಾರೆ.       ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೂ ಸೇರುವ ಶಿರಾ ಮತ್ತು ಪಾವಗಡ ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 410867 ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಸೇರಿರುವ ಕುಣಿಗಲ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 190913 ಮತದಾರರು ಇದ್ದಾರೆ ಎಂದರು.      ಈಗಾಗಲೇ…

ಮುಂದೆ ಓದಿ...

ಜಿಲ್ಲಾಧಿಕಾರಿಗಳಿಂದ ಚುನಾವಣಾ ಕೈಪಿಡಿ ಬಿಡುಗಡೆ

ತುಮಕೂರು:       ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ 1952 ರಿಂದ 2014ರವರೆಗಿನ ಚುನಾವಣಾ ಹಿನ್ನೋಟ ಕೈಪಿಡಿಯನ್ನು ಜಿಲ್ಲಾಧಿಕಾರಿ ಡಾ|| ಕೆ.ರಾಕೇಶ್‍ಕುಮಾರ್ ಬಿಡುಗಡೆ ಮಾಡಿದರು.       ತಮ್ಮ ಕಚೇರಿಯಲ್ಲಿಂದು ಬಿಡುಗಡೆ ಮಾಡಿದ ನಂತರ ಮಾತನಾಡಿದ ಅವರು ಜಿಲ್ಲೆಯಲ್ಲಿ ಏ.18ರಂದು ಲೋಕಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮಾಧ್ಯಮ ಮಿತ್ರರಿಗೆ ಅನುಕೂಲವಾಗುವಂತೆ ಈ ಕೈಪಿಡಿಯನ್ನು ತಯಾರಿಸಲಾಗಿದ್ದು, ಕೈಪಿಡಿಯಲ್ಲಿ ಪ್ರಸಕ್ತ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ವಿವರ, 2019ರ ಏ.9ಕ್ಕೆ ಇದ್ದಂತೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರವಾರು ಮತದಾರರ ಸಂಖ್ಯೆ, ಮತಗಟ್ಟೆಗಳ ವಿವರದೊಂದಿಗೆ 1952-2014ರವರೆಗಿನ ಲೋಕಸಭಾ ಚುನಾವಣಾ ಅಂಕಿ-ಅಂಶಗಳನ್ನು ನೀಡಲಾಗಿದೆ. ಕೈಪಿಡಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕಿ ಆರ್.ರೂಪಕಲಾ ಅವರು ಸಿದ್ಧಪಡಿಸಿದ್ದು, 2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮಾಧ್ಯಮ ಮಿತ್ರರಿಗೆ ಈ ಕೈಪಿಡಿ ಸದುಪಯೋಗವಾಗಲಿದೆ ಎಂಬ ಆಶಯ ವ್ಯಕ್ತಪಡಿಸಿದರು.       ಈ ಸಂದರ್ಭದಲ್ಲಿ…

ಮುಂದೆ ಓದಿ...

ರಾಜಕೀಯ ಜೀವನದಲ್ಲಿ ಕೊಟ್ಟ ಮಾತಿಗೆ ಎಂದೂ ತಪ್ಪಿ ನಡೆದಿಲ್ಲ-ಹೆಚ್.ಡಿ.ದೇವೆಗೌಡ

ತುಮಕೂರು:       ಜಿಲ್ಲೆಯ ಮತದಾರರು ಈ ಬಾರಿ ನನ್ನ ಕೈ ಹಿಡಿದರೆ,ಅವರ ಋಣ ತೀರಿಸಿಯೇ ಜಿಲ್ಲೆಯಿಂದ ನಿಗರ್ಮಿಸುತ್ತೇನೆ ಎಂದು ಮಾಜಿ ಪ್ರಧಾನಿ ಹಾಗೂ ತುಮಕೂರು ಲೋಕಸಭಾ ಕ್ಷೇತ್ರದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ.      ಜಿಲ್ಲಾ ಕುಂಚಿಟಿಗರ ಸಮುದಾಯಭವನದಲ್ಲಿ ತುಮಕೂರು ಜಿಲ್ಲಾ ಮಡಿವಾಳ ಸಮಾಜ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತಿದ್ದ ಅವರು,ಜಿಲ್ಲೆಯ ಮತದಾರರು ವಿರೋಧ ಪಕ್ಷದವರು ಮಾಡುವ ಅಪಪ್ರಚಾರಗಳಿಗೆ ಕಿವಿಗೊಡದೆ,ನನ್ನನ್ನು ಆರಿಸಿ ಕಳುಹಿಸಿಕೊಡಿ, ಜಿಲ್ಲೆಯ ನೀರಾವರಿ ಸೇರಿದಂತೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಯೇ ಇಲ್ಲಿಂದ ನಿಗರ್ಮಿಸುತ್ತೇನೆ.ನನ್ನ 60 ವರ್ಷಗಳ ರಾಜಕೀಯ ಜೀವನದಲ್ಲಿ ಎಂದಿಗೂ ಕೊಟ್ಟ ಮಾತಿಗೆ ತಪ್ಪಿ ನಡೆದಿಲ್ಲ.ನನ್ನ ಜೀವನದ ಕೊನೆಯ ವರೆಗೂ ಅದನ್ನು ಉಳಿಸಿಕೊಂಡು ಹೋಗಲಿದ್ದೇನೆ ಎಂದರು.       ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ 16 ಲಕ್ಷ ಮತದಾರರಲ್ಲಿ ಸುಮಾರು 10 ಲಕ್ಷಕ್ಕೂ ಅಧಿಕ ಮತಗಳು…

ಮುಂದೆ ಓದಿ...