ಗಣಿಬಾಧಿತ ಪ್ರದೇಶಕ್ಕೆ ಸೌಲಭ್ಯ ಮರೀಚಿಕೆ

ಗುಬ್ಬಿ:       ದಶಕದ ಹಿಂದೆ ಗಣಿಗಾರಿಕೆಯಿಂದ ನಲುಗಿದ್ದ ತಾಲ್ಲೂಕಿನ ನಿಟ್ಟೂರು ಹೋಬಳಿಯ ಕೊಂಡ್ಲಿ ಸುತ್ತಲಿನ ಹಳ್ಳಿಗಳ ಜನರಿಗೆ ಮೂಲ ಸೌಲಭ್ಯಗಳು ಮರೀಚಿಕೆ ಆಗಿವೆ. ಇಲ್ಲಿ ಮೊದಲಿದ್ದ ಅತ್ಯಂತ ಸುಂದರ ಭೌಗೊಳಿಕ ರಚನೆ ಹಾಗೂ ಪ್ರಕೃತಿಯ ಸೌಂದರ್ಯ ನಾಶವಾಗಿದೆ. ಇದನ್ನು ಪುನಃ ಕಟ್ಟುವ ಯೋಜನೆಗೆ ಕಾಯಕಲ್ಪ ಸಿಗಬೇಕಿದೆ.       ಶಿವಸಂದ್ರ, ಎಮ್ಮೆದೊಡ್ಡಿ, ಮುಸಕೊಂಡ್ಲಿ, ಮಾವಿನಹಳ್ಳಿ, ಕಂಚಿಗಾನಹಳ್ಳಿ, ಕೊಂಡ್ಲಿಕ್ರಾಸ್, ಬ್ಯಾಟಪ್ಪನಪಾಳ್ಯ, ಹೊನ್ನೇನಹಳ್ಳಿ, ದೊಡ್ಡಕೊಂಡ್ಲಿ, ಹರೇನಹಳ್ಳಿ, ಕಾರೇಕುರ್ಚಿ ಭಾಗದ ರೈತರು ಗಣಿಗಾರಿಕೆಯ ಕರಾಳ ಪರಿಣಾಮಗಳಿಂದ ಈಗಾಗಲೇ ತತ್ತರಿಸಿದ್ದಾರೆ. ಇಲ್ಲಿನ ಜನರು ಪಂಚಾಯಿತಿ ಮಟ್ಟದಲ್ಲಿ ಜಾರಿಯಾಗುವ ಯೋಜನೆಗಳಿಗಷ್ಟೇ ತೃಪ್ತಿಪಟ್ಟುಕೊಳ್ಳಬೇಕಿದೆ.       ‘ಗಣಿಗಾರಿಕೆ ಕಾರಣ ಸುತ್ತಲ ಹಳ್ಳಿಗಳ ರೈತರ ಜಮೀನು ಫಲವತ್ತತೆ ಕಳೆದುಕೊಂಡಿದೆ. ಗೋಮಾಳ, ಹುಲ್ಲುಗಾವಲು ಪ್ರದೇಶ ಮತ್ತು ಗೋಕಟ್ಟೆ ಮರೆಯಾಗಿವೆ. ಇವನ್ನು ಮೊದಲಿನಂತೆ ಪುನರ್ ನಿರ್ಮಿಸಬೇಕು ಎನ್ನುವ ಒತ್ತಾಯವೂ ರೈತರಿಂದ ಕೇಳಿಬಂದಿದೆ. ಒಮ್ಮೊಮ್ಮೆ ಹೆಚ್ಚು…

ಮುಂದೆ ಓದಿ...

ಅಂತರ್ಜಲದ ಕತ್ತು ಹಿಸುಕಿದ ಮರಳು ಮಾಫಿಯಾ

ಚಿಕ್ಕನಾಯಕನಹಳ್ಳಿ:      ತಾಲ್ಲೂಕಿನ ಭೂ ಸ್ವರೂಪ ಅರೆ ಮಲೆನಾಡು ಹಾಗೂ ಬಯಲುಸೀಮೆಯನ್ನು ಕೂಡಿಸುವ ಕೊಂಡಿಯಂತಿದೆ. ಕೃಷ್ಣ ಹಾಗೂ ಕಾವೇರಿ ಕೊಳ್ಳಗಳ ನಡುವೆ ವಿಭಾಗಿಸಿದೆ.       ಆದ್ದರಿಂದ ತಾಲ್ಲೂಕಿನ ರೈತರು ತೆಂಗಿಗೂ ಸೈ ಹಾಗೂ ಸಿರಿಧಾನ್ಯಕ್ಕೂ ಜೈ ಎನ್ನುತ್ತಾರೆ. ಆದರೆ ಕಳೆದ ಎರಡು ದಶಕಗಳಿಂದ ತಾಲ್ಲೂಕಿನಲ್ಲಿ ಚಾಲ್ತಿಯಲ್ಲಿರುವ ಕಬ್ಬಿಣದ ಅದಿರು ಗಣಿಗಾರಿಕೆ, ಅಕ್ರಮ ಮರಳು ಮಾಫಿಯಾ ಹಾಗೂ ಅಕ್ರಮ ಇಟ್ಟಿಗೆ ಕಾರ್ಖಾನೆಗಳು ತಾಲ್ಲೂಕಿನ ಭೂ ಸ್ವರೂಪ ಹಾಳುಗೆಡವಿವೆ. ರೈತರ ಬದುಕನ್ನು ಮೂರಾಬಟ್ಟೆ ಮಾಡಿವೆ.       ತಾಲ್ಲೂಕಿನ ಉದ್ದಕ್ಕೂ ಚಾಚಿಕೊಂಡಿದ್ದ ಅಬ್ಬಿಗೆ, ಮದನಿಂಗನಕಣಿವೆ ಹಾಗೂ ಕುದುರೆ ಕಣಿವೆಯ ಬೆಟ್ಟಸಾಲುಗಳು ಹಾಗೂ ತಿಪಟೂರು ತಾಲ್ಲೂಕಿನ ಹಾಲ್ಕುರಿಕೆಯಿಂದ ಬೋರನಕಣಿವೆ ವರೆಗೆ ಚಾಚಿಕೊಂಡಿರುವ ಸುವರ್ಣಮುಖಿ ಹಳ್ಳ ತಾಲ್ಲೂಕಿನ ಭೂ ಶ್ರೀಮಂತಿಕೆಯನ್ನು ಹೆಚ್ಚಿಸಿದ್ದವು. ಕಬ್ಬಿಣದ ಅದಿರು ಗಣಿಗಾರಿಕೆ ಹಾಗೂ ಅಕ್ರಮ ಮರಳು ಗಣಿಗಾರಿಕೆ ನೇರವಾಗಿ ಈ ಎರಡು ಪ್ರಾಕೃತಿಕ…

ಮುಂದೆ ಓದಿ...

ಕೊರಟಗೆರೆ : ಬೈಕ್ ಡಿಕ್ಕಿ- ಪಾದಚಾರಿ ಸಾವು!

ಕೊರಟಗೆರೆ:       ದ್ವಿಚಕ್ರ ವಾಹನವೊಂದು ರಸ್ತೆ ಬದಿ ಚಲಿಸುತ್ತಿದ್ದ ಪಾದಾಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕೊರಟಗೆರೆ ಪಟ್ಟಣದ ಜೆಟ್ಟಿಅಗ್ರಹಾರ ರಸ್ತೆ ಬಳಿ ನಡೆದಿದೆ.       ಜೆಟ್ಟಿ ಅಗ್ರಹಾರ ಗ್ರಾಮದ ವಾಸಿ ನರಸಿಂಹಯ್ಯ(60) ಮೃತಪಟ್ಟ ದುದೈವಿ. ಇವರು ಕೈಮರದ ಆಶ್ರಮಕ್ಕೆ ಭೇಟಿ ನೀಡಿ ಮರಳಿ ನಡೆದುಕೊಂಡು ಮನೆಗೆ ಬರುತ್ತಿರುವ ವೇಳೆ ಪಾದಚಾರಿಗೆ ದ್ವೀಚಕ್ರ ವಾಹನ ಏಕಾಏಕಿ ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ಅಜ್ಜಿಹಳ್ಳಿ ಗ್ರಾಮದ ವಾಸಿಯಾದ ದ್ವಿಚಕ್ರ ವಾಹನ ಸವಾರ ಸ್ಥಳದಿಂದ ಪರಾರಿಯಾಗಿದ್ದಾನೆ.       ಅಪಘಾತ ನಡೆದ ಸ್ಥಳಕ್ಕೆ ಕೊರಟಗೆರೆ ಆರಕ್ಷಕ ಉಪನೀರಿಕ್ಷಕ ಮಂಜುನಾಥ ಭೇಟಿ ಪರಿಶೀಲನೆ ನಡೆಸಿದ್ದು, ಕೊರಟಗೆರೆ ಪೆÇಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.  

ಮುಂದೆ ಓದಿ...