ನ್ಯಾಯಾಲಯದ ಆವರಣದಲ್ಲೇ ಎಸಿಬಿ ಬಲೆಗೆ ಬಿದ್ದ ಪಬ್ಲಿಕ್ ಪ್ರಾಸಿಕ್ಯೂಟರ್!

ತಿಪಟೂರು:       ಎಸಿಬಿ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಪ್ರಬ್ಲಿಕ್ ಪ್ರಾಸಿಕ್ಯೂಟರ್ ಸಿಕ್ಕಿಬಿದ್ದಿದ್ದಾರೆ. 20 ಸಾವಿರ ಲಂಚ ಸ್ವೀಕಾರ ಮಾಡುವಾಗ ರೆಡ್ ಹ್ಯಾಂಡ್ ಅಗಿ ಬಲೆಗೆ ಬಿದ್ದಿದ್ದಾರೆ.       ತುಮಕೂರು ಜಿಲ್ಲೆಯ ತಿಪಟೂರು ನ್ಯಾಯಾಲಯದಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಪೂರ್ಣಿಮಾ ಅವರು ಕಕ್ಷಿದಾರರಿಂದ ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.       ಕೆಇಬಿಯ ಇಂಜಿನಿಯರ್ ಗುರುಸ್ವಾಮಿ ಅವರ ಬಳಿ ಪಬ್ಲಿಕ್ ಪ್ರಾಸಿಕ್ಯೂಟರ್ ಪೂರ್ಣಿಮಾ ಅವರು 40 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 20 ಸಾವಿರ ರೂ.ಗಳನ್ನು ಪಡೆಯುವಾಗ ಅಧಿಕಾರಿಗಳು ದಾಳಿ ನಡೆಸಿದ್ದಾರೆ.       ತಿಪಟೂರು ಟೌನ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಪಬ್ಲಿಕ್ ಪ್ರಾಸಿಕ್ಯೂಟರ್ ಪೂರ್ಣಿಮಾ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.   

ಮುಂದೆ ಓದಿ...

ಮೇವು, ನೀರು ಪೂರೈಕೆಯಾಗಲಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಧಿಕಾರಿಗಳಿಗೆ ಸೂಚನೆ

 ತುಮಕೂರು:       ಜಿಲ್ಲೆಯ 10 ತಾಲ್ಲೂಕುಗಳು ಬರಪೀಡಿತವಾಗಿರುವುದರಿಂದ ಜನ-ಜಾನುವಾರುಗಳಿಗೆ ಕುಡಿಯುವ ನೀರು ಮೇವಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಕ್ರಮಕೈಗೊಳ್ಳಬೇಕೆಂದು ಯೋಜನೆ ಮತ್ತು ಸ್ಯಾಂಖಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.       ಇಂದು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ತುಮಕೂರು ಜಿಲ್ಲೆಯಲ್ಲಿ ಬರಪರಿಹಾರ ಹಾಗೂ ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಕುರಿತ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.       ಜಿಲ್ಲೆಯಲ್ಲಿ ಬರವಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಇರುತ್ತದೆ. ಎಲ್ಲಿ ಸಮಸ್ಯೆ ಇದೆಯೋ ಅಲ್ಲಿ ಕುಡಿಯುವ ನೀರಿನ ಪೂರೈಕೆಯನ್ನು ಮಾಡಬೇಕು. ಅಲ್ಲದೆ ಜನರ ಬಳಿಗೆ ಧಾವಿಸಿ ಅವರ ಸಮಸ್ಯೆಗಳನ್ನು ಆಲಿಸಿ ಅವರ ಸಮಸ್ಯೆಗೆ ಸ್ಪಂದಿಸಬೇಕು. ಜಾನುವಾರುಗಳಿಗೂ ನೀರು ಮತ್ತು ಮೇವು ಕೊರತೆಯಾಗದಂತೆ ನೋಡಿಕೊಳ್ಳಿ ಎಂದು…

ಮುಂದೆ ಓದಿ...

SSLC ಫಲಿತಾಂಶ: ತುಮಕೂರಿಗೆ 18ನೇ ಸ್ಥಾನ

ತುಮಕೂರು:        ತುಮಕೂರು ಶೈಕ್ಷಣಿಕ ಜಿಲ್ಲೆಯು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯದಲ್ಲಿ 18ನೇ ಸ್ಥಾನ ಪಡೆದುಕೊಂಡಿದೆ ಎಂದು ಡಿಡಿಪಿಐ ಎಂ.ಆರ್. ಕಾಮಾಕ್ಷಿ ತಿಳಿಸಿದ್ದಾರೆ.       ಜಿಲ್ಲೆಯಲ್ಲಿ ಕಳೆದ 2019ರ ಮಾರ್ಚ್ ಮಾಹೆಯಲ್ಲಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ನೋಂದಣಿಯಾದ 21126(ಬಾಲಕರು-11253, ಬಾಲಕಿಯರು-9873) ವಿದ್ಯಾರ್ಥಿಗಳ ಪೈಕಿ 16947(ಬಾಲಕರು-8718, ಬಾಲಕಿಯರು-8229) ವಿದ್ಯಾರ್ಥಿಗಳು ತೇರ್ಗಡೆ ಹೊಂದಿ, ಶೇ.80.21 ಫಲಿತಾಂಶ ಲಭಿಸಿದೆ. ತೇರ್ಗಡೆಯಾದ ಒಟ್ಟು 16947 ವಿದ್ಯಾರ್ಥಿಗಳಲ್ಲಿ ಕನ್ನಡ ಮಾಧ್ಯಮದ 9160, ಆಂಗ್ಲ ಮಾಧ್ಯಮದ 7754, ಉರ್ದು ಮಾಧ್ಯಮದ 33 ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಶಾಲೆಗಳ 5356, ಅನುದಾನಿತ ಶಾಲೆಗಳ 6594, ಅನುದಾನಿತ ರಹಿತ ಶಾಲೆಗಳ 4997 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇವರಲ್ಲಿ 2712 ಪರಿಶಿಷ್ಟ ಜಾತಿ, 974 ಪ.ಪಂಗಡ, 1697 ಪ್ರವರ್ಗ-1, 3655 ಪ್ರವರ್ಗ-2ಎ, 1598 ಪ್ರವರ್ಗ-2ಬಿ, 3474 ಪ್ರವರ್ಗ 3ಎ, 2479 ಪ್ರವರ್ಗ 3ಬಿ ಹಾಗೂ…

ಮುಂದೆ ಓದಿ...