ತುರುವೇಕೆರೆ : ಬೋನಿಗೆ ಬಿದ್ದ ಚಿರತೆ

ತುರುವೇಕೆರೆ:       ತಾಲ್ಲೂಕಿನ ದಂಡಿನಶಿವರ ಹೋಬಳಿಯ ತೋವಿನಕೆರೆ ಆಸುಪಾಸಿನ ಗ್ರಾಮಸ್ಥರನ್ನು ನಿದ್ದೆಗೆಡಿಸಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಬೋನಿನ ಮೂಲಕ ಭಾನುವಾರ ಸೆರೆ ಹಿಡಿಯುವಲ್ಲಿ ಸಫಲರಾಗಿದ್ದಾರೆ.        ದೊಂಬರನಹಳ್ಳಿ, ಚಿಮ್ಮನಹಳ್ಳಿ, ತೋವಿನಕೆರೆ, ಹಾಲ್ದೇವರಹಟ್ಟಿ, ಮಾರತ್ತಮ್ಮನಹಳ್ಳಿ, ಡಿ.ಶೆಟ್ಟಿಹಳ್ಳಿ, ಹೊಸಹಳ್ಳಿ, ಕುರುಬರಹಳ್ಳಿ, ಅಕ್ಕಳಸಂದ್ರ ಬಸವಾಪುರ ಸೇರಿದಂತೆ ಹತ್ತಕ್ಕೂ ಹೆಚ್ಚಿನ ಗ್ರಾಮಗಳಲ್ಲಿನ ಸಾಕು ಪ್ರಾಣಿಗಳನ್ನು ಚಿರತೆಯು ಹಿಡಿದು ತಿನ್ನುವ ಮೂಲಕ ಕಳೆದ ಐದಾರು ತಿಂಗಳಿಂದ ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಸಿತ್ತು.        ಗೊಲ್ಲರಹಟ್ಟಿಗಳ ಕೊಟ್ಟಿಗೆಗಳಲ್ಲಿ ಕೂಡಿದ್ದ ಕುರಿಗಳ ಮೇಲೆ ಚಿರತೆ ದಾಳಿ ನಡೆಸುತ್ತಿದ್ದವು. ಇನ್ನು ರೈತರು ಮುಂಜಾನೆ ಮತ್ತು ಸಂಜೆ ತಮ್ಮ ತೋಟಕ್ಕೆ ನೀರು ಬಿಡಲು ಹೋಗುವುದಕ್ಕೂ ಹೆದರುತ್ತಿದ್ದರು.       ಇದರಿಂದ ಆತಂಕಗೊಂಡ ಜನರು ಅರಣ್ಯಾಧಿಕಾರಿಗೆ ದೂರು ನೀಡಿದ್ದರು. ಅರಣ್ಯಾಧಿಕಾರಿಗಳು ಮೂರು ದಿನಗಳ ಹಿಂದೆ ತೋವಿನಕೆರೆ ಬಳಿಯ ಬಸವಾಪುರ ಕಾವಲ್‌ನ ತೋಟವೊಂದರಲ್ಲಿ ಬೋನ್‌…

ಮುಂದೆ ಓದಿ...

ಮೋದಿ ಪ್ರಮಾಣವಚನ ಕ್ಷಣ, ಅಭಿಮಾನಿಗಳ ಸಂಭ್ರಮ

ತುಮಕೂರು:        ನರೇಂದ್ರ ಮೋದಿ ಎರಡನೇ ಅವಧಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಅಭಿಮಾನಿಗಳು ಗುರುವಾರ ಸಂಭ್ರಮಾಚರಿಸಿದರು.       ನಗರದ ಟೌನ್‌ಹಾಲ್‌ ವೃತ್ತದಲ್ಲಿ ಬೃಹತ್‌ ಎಲ್‌ಇಡಿ ಪರದೆ ಅಳವಡಿಸಿ, ಸಾರ್ವಜನಿಕರು ಮೋದಿ ಪ್ರಮಾಣ ವಚನ ಸ್ವೀಕರಿಸುವ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಬಿಜೆಪಿ ಅವಕಾಶ ಮಾಡಿಕೊಟ್ಟಿತ್ತು. ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್‌ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು, ಸಾರ್ವಜನಿಕರು ಇಲ್ಲಿ ಕಾರ್ಯಕ್ರಮ ವೀಕ್ಷಿಸಿದರು. ಇದೇ ವೇಳೆ ಕಾರ್ಯಕರ್ತರು ಟೌನ್‌ಹಾಲ್‌ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಹಬ್ಬದಂತೆ ಸಂಭ್ರಮಿಸಿದರು. ಗುಬ್ಬಿ ತಾಲೂಕಿನ ಎಂ.ಎನ್‌. ಕೋಟೆಯ ಹೊಸಕೆರೆಯಲ್ಲಿ ಹಾಗೂ ತುಮಕೂರು ನಗರದ ಹಲವೆಡೆ ಮೋದಿ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಿಸಿದರು.        ಟೀ ಹಂಚಿದ ಅಭಿಮಾನಿ:       …

ಮುಂದೆ ಓದಿ...

ಕಠಿಣ ಕಾನೂನಿನಿಂದ ತಂಬಾಕು ಉತ್ಪನ್ನಗಳ ನಿಯಂತ್ರಣ ಸಾಧ್ಯ

ತುಮಕೂರು:       ತಂಬಾಕು ಸೇವನೆ ಆರೋಗ್ಯಕ್ಕೆ ಅಪಾಯಕಾರಿಯಾಗಿದ್ದು, ಕಠಿಣ ಕಾನೂನು ಜಾರಿಯಾದಾಗ ಮಾತ್ರ ತಂಬಾಕು ಉತ್ಪನ್ನಗಳನ್ನು ನಿಯಂತ್ರಿಸಲು ಸಾಧ್ಯ ಎಂದು ಶಾಸಕ ಜ್ಯೋತಿ ಗಣೇಶ್ ಅಭಿಪ್ರಾಯಪಟ್ಟರು.       ನಗರದ ಜಿಲ್ಲಾ ಬಾಲಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸ್, ಶಿಕ್ಷಣ, ಮಹಾನಗರ ಪಾಲಿಕೆ, ಸಾರಿಗೆ, ಕೆ.ಎಸ್.ಆರ್.ಟಿ.ಸಿ., ಐ.ಎಂ.ಎ., ಉಚಿತ ಕಾನೂನು ಸೇವಾ ಪ್ರಾಧಿಕಾರ, ತುಮಕೂರು ಹಾಲು ಒಕ್ಕೂಟ, ಫುಡ್ ಪಾರ್ಕ್, ವಿವಿಧ ನರ್ಸಿಂಗ್ ಕಾಲೇಜುಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿಂದು “ವಿಶ್ವ ತಂಬಾಕು ರಹಿತ ದಿನಾಚರಣೆ ಹಾಗೂ ತಂಬಾಕು ಮುಕ್ತ ತುಮಕೂರು ನಗರ ಘೋಷಣಾ ಕಾರ್ಯಕ್ರಮ”ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಯುವಕರು ಹೆಚ್ಚಾಗಿ ತಂಬಾಕು ಸೇವನೆಯನ್ನು ಚಟವಾಗಿ ರೂಢಿಸಿಕೊಂಡಿದ್ದು, ತಂಬಾಕು ಉತ್ಪನ್ನಗಳಾದ ಧೂಮಪಾನ, ಗುಟ್ಕಾ ಸೇವನೆಯಿಂದ ತಮ್ಮ ಅತ್ಯಮೂಲ್ಯ…

ಮುಂದೆ ಓದಿ...

ಜೂನ್ 1 ರಿಂದ ತುಮಕೂರಿನಲ್ಲಿ ವಿದ್ಯುತ್ ವ್ಯತ್ಯಯ

 ತುಮಕೂರು:       ತುಮಕೂರು ನಗರ ಬೆಸ್ಕಾಂ ಉಪವಿಭಾಗ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಭೂಗತ ಕೇಬಲ್ ಅಳವಡಿಕೆ ಕಾಮಗಾರಿ ಕೈಗೊಳ್ಳುವುದರಿಂದ ಜೂನ್ 1 ರಿಂದ 25ರವರೆಗೆ ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಟಿಎಫ್10 ಹಾಗೂ 2 ಫೀಡರ್ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.        ಕಾಮಗಾರಿ ಕೈಗೊಂಡಿರುವುದರಿಂದ ಜೂನ್ 1, 2, 14 ಹಾಗೂ 24ರಂದು ಕುವೆಂಪು ನಗರ; ಜೂ.3, 12 ಹಾಗೂ 19ರಂದು ಬಿ.ಎ.ಗುಡಿಪಾಳ್ಯ; ಜೂ. 4 ಹಾಗೂ 17ರಂದು ಬಟವಾಡಿ; ಜೂನ್ 6, 8, 18 ಹಾಗೂ 20ರಂದು ಹನುಮಂತಪುರ; ಜೂ. 9ರಂದು ವಾಲ್ಮೀಕಿ ನಗರ: ಜೂ. 10 ಹಾಗೂ 25ರಂದು ಶಾರದಾದೇವಿ ನಗರ; ಜೂ. 11, 15 ಹಾಗೂ 21ರಂದು ವಿದ್ಯಾನಗರ; ಜೂ. 13ರಂದು ಬಿ.ಹೆಚ್.ರಸ್ತೆ; ಜೂ.16 ಹಾಗೂ…

ಮುಂದೆ ಓದಿ...

ವರ್ಷದೊಳಗೆ ತುಮಕೂರಲ್ಲಿ ಮಾಲ್ ನಿರ್ಮಿಸಲು ಡಿಸಿಎಂ ಸೂಚನೆ

 ತುಮಕೂರು :       ತುಮಕೂರಿನ ಸ್ಮಾರ್ಟ್‍ಸಿಟಿ ಯೋಜನೆಯಡಿ ಶ್ರೀ ಸಿದ್ದಿವಿನಾಯಕ ಮಾರುಕಟ್ಟೆ ಸ್ಥಳದಲ್ಲಿ ಮಲ್ಟಿ ಯುಟಿಲಿಟಿ ಮಾಲ್ ವಿಥ್ ಮಲ್ಟಿಲೆವೆಲ್ ಕಾರ್‍ಪಾರ್ಕಿಂಗ್ ಯೋಜನೆಯನ್ನು ಪಿಪಿಪಿ ಮಾದರಿಯಲ್ಲಿ ಒಂದು ವರ್ಷದೊಳಗೆ ನಿರ್ಮಿಸುವಂತೆ ಉಪಮುಖ್ಯಮಂತ್ರಿ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಅವರು ಸೂಚಿಸಿದರು.       ಮಲ್ಟಿಯುಟಿಲಿಟಿ ಮಾಲ್ ನಿರ್ಮಾಣ ಸಂಬಂಧ ಇಂದು ವಿಧಾನಸೌಧದ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. ಶ್ರೀ ಸಿದ್ದಿವಿನಾಯಕ ಮಾರುಕಟ್ಟೆ ಸ್ಥಳ ಪ್ರಸ್ತುತ ಎಪಿಎಂಸಿ ಸುಪರ್ಧಿಗೆ ಸೇರಿದೆ. ಆದರೂ ಈ ಸ್ಥಳ ತಕರಾರಿನಲ್ಲಿದ್ದು, ಅಗತ್ಯಬಿದ್ದರೆ ಸ್ಥಳವನ್ನು ಸಚಿವ ಸಂಪುಟದಲ್ಲಿ ಮುಂದಿಟ್ಟು ವಶಕ್ಕೆ ಪಡೆದು ಕೊಳ್ಳಲಾಗುವುದು ಎಂದರು.       ಈ ಸ್ಥಳದಲ್ಲಿ ನಿರ್ಮಾಣವಾಗುತ್ತಿರುವ ಮಾಲ್ ಮೂರು ಅಂತಸ್ತಿನ ಕಟ್ಟಡವಾಗಿದೆ. ತಳಮಹಡಿಯಲ್ಲಿ 140 ಕಾರ್ ಗಳ ಪಾರ್ಕಿಂಗ್ ನಿರ್ಮಿಸಲಾಗುತ್ತಿದೆ. ಈ ಮಾಲ್‍ನನ್ನು ಒಂದು ವರ್ಷದ…

ಮುಂದೆ ಓದಿ...

ಜೂನ್ 1 ರಿಂದ ಮಾವು ಮತ್ತು ಹಲಸು ಪ್ರದರ್ಶನ ಮತ್ತು ಮಾರಾಟ ಮೇಳ

 ತುಮಕೂರು:       ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಸಂಯುಕ್ತಾಶ್ರಯದಲ್ಲಿ ಜೂನ್ 1 ರಿಂದ 5ರವರೆಗೆ 5 ದಿನಗಳ ಕಾಲ “ಮಾವು ಮತ್ತು ಹಲಸು ಪ್ರದರ್ಶನ ಮತ್ತು ಮಾರಾಟ ಮೇಳ ಹಾಗೂ ಸಸ್ಯಸಂತೆ ಮೇಳ”ವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ತಿಳಿಸಿದರು.       ಜಿಲ್ಲಾ ಪಂಚಾಯತಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೇಳವನ್ನು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ. ಜಿಲ್ಲೆಯಲ್ಲಿ ಮಾವು ಪ್ರಮುಖವಾದ ಬೆಳೆಯಾಗಿದ್ದು, 16,330 ಹೆಕ್ಟೇರ್ ಪ್ರದೇಶದ ವಿಸ್ತೀರ್ಣದಲ್ಲಿ ಬೆಳೆಯಲಾಗುತ್ತಿದೆ. ಬಾದಾಮಿ, ರಸಪುರಿ, ಸೇಂದೂರು, ತೋತಾಪುರಿ ಮತ್ತಿತರ ಮಾವಿನ ತಳಿಗಳನ್ನು ಹೆಚ್ಚಾಗಿ ಬೆಳೆಯುತ್ತಿರುವುದರಿಂದ 1.50 ರಿಂದ 1.90ಲಕ್ಷ ಮೆಟ್ರಿಕ್ ಟನ್‍ಗಳಷ್ಟು ವಾರ್ಷಿಕ ಉತ್ಪಾದನೆಯಾಗುತ್ತಿದೆ ಎಂದು ಅಂದಾಜು ಮಾಡಲಾಗಿದೆ ಎಂದು ತಿಳಿಸಿದರು.…

ಮುಂದೆ ಓದಿ...

ವಿವಿಗಳಲ್ಲಿ ಶೈಕ್ಷಣಿಕ, ಭೌತಿಕ ಪ್ರಗತಿ ಅಗತ್ಯ: ಡಾ. ಎಸ್. ಎ. ಕೋರಿ

 ತುಮಕೂರು:       ದೇಶದ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳ ಪಟ್ಟಿಯಲ್ಲಿ ಕರ್ನಾಟಕದ ವಿವಿಗಳು ಕಾಣಿಸಿಕೊಳ್ಳಬೇಕಾದರೆ ಶೈಕ್ಷಣಿಕ ಪ್ರಗತಿಯೊಂದಿಗೆ ಮೂಲಭೂತ ಸೌಕರ್ಯಗಳನ್ನೂ ಹೆಚ್ಚಿಸಿಕೊಳ್ಳುವ ಅಗತ್ಯವಿದೆ ಎಂದು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಸ್. ಎ. ಕೋರಿ ಅಭಿಪ್ರಾಯಪಟ್ಟರು.       ತುಮಕೂರು ವಿಶ್ವವಿದ್ಯಾನಿಲಯದಲ್ಲಿ ರೂಸಾ ನೆರವಿನೊಂದಿದೆ ನವೀಕರಿಸಲಾದ ಸಭಾಂಗಣವನ್ನು ಹಾಗೂ ನ್ಯಾಕ್ ಮಾನ್ಯತೆ ಮಾನದಂಡಗಳ ಕುರಿತ ಕಾರ್ಯಾಗಾರವನ್ನು ಬುಧವಾದ ಉದ್ಘಾಟಿಸಿದ ಅವರು, ವಿಶ್ವವಿದ್ಯಾನಿಲಯಗಳು ಸರ್ಕಾರದಿಂದ ದೊರೆಯುವ ಹಣಕಾಸು ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದರು.       ರಾಷ್ಟ್ರಮಟ್ಟದ 100 ಟಾಪ್ ವಿವಿಗಳ ಸಾಲಿನಲ್ಲಿ ಅಥವಾ ಪ್ರಪಂಚದ 500 ಟಾಪ್ ವಿವಿಗಳ ಸಾಲಿನಲ್ಲಿ ರಾಜ್ಯದ ವಿವಿಗಳು ಬರುತ್ತಿಲ್ಲ. ಅಂತರ ರಾಷ್ಟ್ರೀಯ ಮಾನದಂಡಗಳ ಪ್ರಕಾರ ನಮ್ಮಲ್ಲಿ ಯೋಜನೆಗಳು ಜಾರಿಗೆ ಬರದಿರುವುದೇ ಇದಕ್ಕೆ ಕಾರಣ ಎಂದರು.       ಕೇಂದ್ರ ಅನುದಾನಗಳನ್ನು ಪಡೆಯುವಲ್ಲಿ…

ಮುಂದೆ ಓದಿ...

ವಿವಿಧ ಬೇಡಿಕೆಗಳ ಈಡೇರಿಕೆಗೆ ಕೆಎಸ್‍ಆರ್‍ಟಿಸಿ ಕಾರ್ಮಿಕರ ಒತ್ತಾಯ

 ತುಮಕೂರು:       ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೆಎಸ್‍ಆರ್‍ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್ ಸಂಘಟನೆ, ಎಐಟಿಯುಸಿ ನೇತೃತ್ವದಲ್ಲಿ ನಗರದ ಕೇಂದ್ರ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿ ಒತ್ತಾಯಿಸಲಾಯಿತು.       ಕೆಎಸ್‍ಆರ್‍ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್ 6ನೇ ಸಮ್ಮೇಳನದ ತೀರ್ಮಾನದಂತೆ ರಾಜ್ಯ ಸರ್ಕಾರ ಕೆಎಸ್‍ಆರ್‍ಟಿಸಿ ಬೇಡಿಕೆಗಳನ್ನು ಈಡೇರಿಸಬೇಕು, ಕಾರ್ಮಿಕರ ಸಮಸ್ಯೆಗಳ ಬಗ್ಗೆ, ವೈದ್ಯಕೀಯ ಸೌಲಭ್ಯ, ಸಂಘದ ಮಾನ್ಯತಾ ಚುನಾವಣೆ ಹಾಗೂ ಕೆಎಸ್‍ಆರ್‍ಟಿಸಿ ನಿಗಮಗಳನ್ನು ಒಂದು ಮಾಡುವ ಮೂಲಕ ಕೆಎಸ್‍ಆರ್‍ಟಿಸಿ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ ವ್ಯಕ್ತಪಡಿಸಲಾಯಿತು.       ಕೆಎಸ್‍ಆರ್‍ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್ ಜಿಲ್ಲಾ ಗೌರವಾಧ್ಯಕ್ಷ ಗಿರೀಶ್ ಮಾತನಾಡಿ, ಕೆಎಸ್‍ಆರ್‍ಟಿಸಿಯನ್ನು ನಾಲ್ಕು ವಿಭಾಗಗಳಾಗಿ ವಿಭಜಿಸಿದ ನಂತರ ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದ್ದು, ಸಂಸ್ಥೆಯಲ್ಲಿ ದುಡಿಯುವ ಕಾರ್ಮಿಕರಿಗಾಗಲಿ, ಪ್ರಯಾಣಿಕರಿಗಾಗಲಿ ಇದರಿಂದ ಯಾವುದೇ ಉಪಯೋಗವಾಗಿಲ್ಲ, ಕಾರ್ಮಿಕರ ಸಂಖ್ಯೆ…

ಮುಂದೆ ಓದಿ...

ಕಾಂಗ್ರೆಸ್ ಸೋಲಿಗೆ ಮುಖ್ಯಮಂತ್ರಿ ಆಡಳಿತ ಕಾರಣ: ಆರ್ ರಾಜೇಂದ್ರ

      ಕಾಂಗ್ರೆಸ್ ಸೋಲಿಗೆ ಮುಖ್ಯಮಂತ್ರಿ ಆಡಳಿತ ಕಾರಣ ಎಂದು ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಆರ್.ರಾಜೇಂದ್ರ,  ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ದ ಹರಿಹಾಯ್ದರು.      ಬಿಜೆಪಿಗೆ ಮೊದಲನೆಯದಾಗಿ ಅಭಿನಂದನೆಯನ್ನು ಸಲ್ಲಿಸುತ್ತಾ ಮಾತು ಆರಂಬಿಸಿದ ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಆರ್.ರಾಜೇಂದ್ರ, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಒಂದು ಸ್ಥಾನಕ್ಕಿಳಿದಿದೆ ಹಾಗಾಗಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆಯಿದೆ ಎಂದರು.  ಸರ್ಕಾರದ ಆಡಳಿತದಲ್ಲಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿರವರು  ಸರಿಯಾಗಿ ಅನುದಾನವನ್ನು ಬಿಡುಗಡೆ ಮಾಡುತ್ತಿಲ್ಲ ಹಾಗಾಗಿ ಕೆಲಸ ಕಾರ್ಯಗಳು ನಡೆಯುತ್ತಿಲ್ಲ.         ಮುಖ್ಯಮಂತ್ರಿಗಳು ಎಲ್ಲಿ ಹೆಚ್ಚು ಕಾಲ ಕಳೆಯುತ್ತಿದ್ದರೆಂದರೆ ತಾಜ್ ವೆಸ್ಟ್‌  ಎಂಡ್ ಹೋಟೆಲ್ನಲ್ಲಿ  ಕಾಲಕಳೆಯುತ್ತಿದ್ದಾರೆ. ದೇವೇಗೌಡರು ಸೋಲು  ಅನುಭವಿಸಲು ಮೂಲ ಕಾರಣ ಒಬ್ಬ ವ್ಯಕ್ತಿ. ಕೆಎನ್ ರಾಜಣ್ಣ ಮತ್ತು ಮುದ್ದಹನುಮೇಗೌಡರ ವಿರುದ್ಧ ಹಣದ ವಿಚಾರವಾಗಿ ಆಪಾದಿಸಿದ ಹಿನ್ನೆಲೆಯಲ್ಲಿ ಸೋಲನ್ನು…

ಮುಂದೆ ಓದಿ...

ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚುವಂತೆ ಅಧಿಕಾರಿಗಳಿಗೆ ಡೀಸಿ ಸೂಚನೆ

 ತುಮಕೂರು:       ಜಿಲ್ಲಾ ವ್ಯಾಪ್ತಿಯಲ್ಲಿರುವ ರಸ್ತೆಗಳಲ್ಲಿ ಇರುವ ಗುಂಡಿಗಳನ್ನು ಮುಚ್ಚಲು ಕ್ರಮವಹಿಸಬೇಕೆಂದು ಲೋಕೋಪಯೋಗಿ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ಸೂಚನೆ ನೀಡಿದರು.       ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇತ್ತೀಚೆಗೆ ಜರುಗಿದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲಾ ವ್ಯಾಪ್ತಿಯ ರಸ್ತೆಗಳಿಗೆ ರಸ್ತೆ ಉಬ್ಬುಗಳಿಗೆ ಬಣ್ಣ ಹಚ್ಚುವ, ಸೂಚನೆ ಫಲಕಗಳನ್ನು ಹಾಕುವ, ಟ್ರಾಫಿಕ್ ಚಿಹ್ನೆಗಳ ಫಲಕಗಳನ್ನು ನಿಲ್ಲಿಸುವ ಮತ್ತಿತರ ಮೂಲ ಸೌಕರ್ಯಗಳನ್ನು ಒದಗಿಸಬೇಕಲ್ಲದೆ, ಡಿವೈಡರ್‍ಗಳನ್ನು ವೈಜ್ಞಾನಿಕವಾಗಿ ನಿರ್ಮಿಸಿ ಅವುಗಳಿಗೆ ಬಣ್ಣ ಹಚ್ಚಬೇಕು ಹಾಗೂ ವಾಹನಗಳು ಮುಖ್ಯ ರಸ್ತೆಯಿಂದ ಸೇವಾ ರಸ್ತೆಗೆ ಬರುವ ಮಾರ್ಗದಲ್ಲಿ ಕಡ್ಡಾಯವಾಗಿ ಚಿಹ್ನೆಗಳನ್ನು ಪ್ರದರ್ಶಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.       ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು, ಕಾರ್ಮಿಕರು,…

ಮುಂದೆ ಓದಿ...