ಮಾಸ್ಟರ್ ಹಿರಣ್ಣಯ್ಯ ವಿಧಿವಶ!!


ಬೆಂಗಳೂರು:        ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ರಂಗಭೂಮಿ ಕಲಾವಿದ ಮಾಸ್ಟರ್​ ಹಿರಣ್ಣಯ್ಯ ಅವರು ಗುರುವಾರ ನಗರದ ಉತ್ತರಹಳ್ಳಿಯ ಬಿಜಿಎಸ್​ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.       ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ  ಮಾಸ್ಟರ್ ಹಿರಣ್ಣಯ್ಯ  ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.       ಹಿರಣ್ಣಯ್ಯ ಪತ್ನಿ ಹಾಗೂ ಐವರು ಮಕ್ಕಳನ್ನು ಅಗಲಿದ್ದಾರೆ. ಇವರ ನಿಧನ ಚಿತ್ರರಂಗಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ.        ಬೆಳಗ್ಗೆ ನಿಧನರಾದ ಮಾಸ್ಟರ್​ ಹಿರಣ್ಣಯ್ಯ ಅವರ ಅಂತ್ಯ ಸಂಸ್ಕಾರ ಬನಶಂಕರಿ ವಿದ್ಯುತ್​ ಚಿತಾಗಾರದಲ್ಲಿ ಸಂಜೆ ನೆರವೇರಿತು. ಅವರ ಮೂವರು ಪುತ್ರರು ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಸಂಸ್ಕಾರ ವಿಧಿವಿಧಾನ ಪೂರೈಸಿದರು.      ಪುತ್ರರಾದ ಬಾಬು ಹಿರಣ್ಣಯ್ಯ, ಶ್ರೀಕಾಂತ್​ ಹಿರಣ್ಣಯ್ಯ ಮತ್ತು ಗುರುನಾಥ್​ ಹಿರಣ್ಣಯ್ಯ ಅಂತಿಮ…


ಮುಂದೆ ಓದಿ...

ಮೇ.20ರೊಳಗೆ ವಿದ್ಯಾರ್ಥಿ ನಿಲಯಗಳ ಅವ್ಯವಸ್ಥೆಯ ಸರಿಪಡಿಸಲು ಸಿಇಓ ಸೂಚನೆ


 ತುಮಕೂರು:       ಈಗ ರಜಾ ದಿನವಾಗಿರುವುದರಿಂದ ಜಿಲ್ಲೆಯ ಸರ್ಕಾರಿ ವಿದ್ಯಾರ್ಥಿ ನಿಲಯಗಳಲ್ಲಿರುವ ಅವ್ಯವಸ್ಥೆಯನ್ನು ಮೇ 20ರೊಳಗಾಗಿ ಸರಿಪಡಿಸಿ ಫೋಟೋ ಸಹಿತ ತಮಗೆ ವರದಿ ಸಲ್ಲಿಸಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು.       ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿಂದು ನಡೆದ ಜಿಲ್ಲೆಯ ವಸತಿ ನಿಲಯಗಳ ಮೇಲ್ವಿಚಾರಕರು/ಪಾಲಕರ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ರಜಾ ದಿನಗಳು ಮುಗಿಯುವುದರೊಳಗೆ ಜಿಲ್ಲೆಯ ಸರ್ಕಾರಿ ಮೆಟ್ರಿಕ್ ಪೂರ್ವ/ಮೆಟ್ರಿಕ್ ನಂತರ ಮತ್ತು ಸರ್ಕಾರಿ ವಸತಿ ನಿಲಯಗಳಲ್ಲಿ ದುರಸ್ಥಿಯಲ್ಲಿರುವ ಶೌಚಾಲಯ, ಅಡುಗೆ ಮನೆ, ಶುದ್ಧ ಕುಡಿಯುವ ನೀರಿನ ಘಟಕ, ವಿದ್ಯಾರ್ಥಿಗಳ ಕೊಠಡಿಗಳನ್ನು ದುರಸ್ಥಿಪಡಿಸಿ ಅಗತ್ಯ ಮೂಲಭೂತ ಸೌರ್ಕಯಗಳನ್ನು ಕಲ್ಪಿಸಬೇಕೆಂದು ಅವರು ನಿರ್ದೇಶನ ನೀಡಿದರು.       ನಗರ, ಗ್ರಾಮೀಣ ಪ್ರದೇಶಗಳಲ್ಲಿರುವ ವಸತಿ ನಿಲಯಗಳಲ್ಲಿ ಶೌಚಾಲಯ ಹಾಗೂ ಸ್ನಾನದ ಕೊಠಡಿಗಳಿಗೆ ಮೊದಲ ಆದ್ಯತೆ ನೀಡಬೇಕು. ಪ್ರತಿದಿನ ಸ್ವಚ್ಛತೆ…


ಮುಂದೆ ಓದಿ...