ಮಾಸ್ಟರ್ ಹಿರಣ್ಣಯ್ಯ ವಿಧಿವಶ!!

ಬೆಂಗಳೂರು: 

      ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ರಂಗಭೂಮಿ ಕಲಾವಿದ ಮಾಸ್ಟರ್​ ಹಿರಣ್ಣಯ್ಯ ಅವರು ಗುರುವಾರ ನಗರದ ಉತ್ತರಹಳ್ಳಿಯ ಬಿಜಿಎಸ್​ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

      ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ  ಮಾಸ್ಟರ್ ಹಿರಣ್ಣಯ್ಯ  ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

      ಹಿರಣ್ಣಯ್ಯ ಪತ್ನಿ ಹಾಗೂ ಐವರು ಮಕ್ಕಳನ್ನು ಅಗಲಿದ್ದಾರೆ. ಇವರ ನಿಧನ ಚಿತ್ರರಂಗಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ. 

      ಬೆಳಗ್ಗೆ ನಿಧನರಾದ ಮಾಸ್ಟರ್​ ಹಿರಣ್ಣಯ್ಯ ಅವರ ಅಂತ್ಯ ಸಂಸ್ಕಾರ ಬನಶಂಕರಿ ವಿದ್ಯುತ್​ ಚಿತಾಗಾರದಲ್ಲಿ ಸಂಜೆ ನೆರವೇರಿತು. ಅವರ ಮೂವರು ಪುತ್ರರು ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಸಂಸ್ಕಾರ ವಿಧಿವಿಧಾನ ಪೂರೈಸಿದರು.

     ಪುತ್ರರಾದ ಬಾಬು ಹಿರಣ್ಣಯ್ಯ, ಶ್ರೀಕಾಂತ್​ ಹಿರಣ್ಣಯ್ಯ ಮತ್ತು ಗುರುನಾಥ್​ ಹಿರಣ್ಣಯ್ಯ ಅಂತಿಮ ವಿಧಿವಿಧಾನಗಳನ್ನು ಪೂರೈಸಿದರು. ಕೇವಲ ಕುಟುಂಬಸ್ಥರು ಮತ್ತು ಹಿರಣ್ಣಯ್ಯ ಅವರ ಕೆಲ ಆಪ್ತರ ಉಪಸ್ಥಿತಿಯಲ್ಲಿ ಅಂತಿಮ ವಿಧಿಗಳನ್ನು ನೆರವೇರಿಸಲಾಯಿತು.

(Visited 9 times, 1 visits today)

Related posts

Leave a Comment