65 ಲೈಸನ್ಸ್‍ಗಳು ರದ್ದು!

 ತುಮಕೂರು:       ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ 121 ಪ್ರಕರಣಗಳ ಪೈಕಿ 65 ಪ್ರಕರಣಗಳಲ್ಲಿ ಲೈಸನ್ಸ್‍ಗಳನ್ನು ರದ್ದುಗೊಳಿಸಲಾಗಿದೆ. ಬಾರ್/ ವೈನ್ಸ್ ಅಂಗಡಿಗಳಿಂದ ಮದ್ಯಪಾನ ಮಾಡಿ ವಾಹನ ಚಲಾಯಿಸಿಕೊಂಡು ಬರುವವರ ಮೇಲೆ ನಿಗಾವಹಿಸಬೇಕು. ಅಲ್ಲದೆ ಹೆಚ್ಚು ವ್ಯಾಪಾರವಾಗುವ ಬಾರ್‍ಗಳ ಮೇಲೂ ನಿಗಾವಹಿಸಿ ಈ ಬಗ್ಗೆ ವರದಿಯನ್ನು ಪೊಲೀಸ್ ಇಲಾಖೆಯೊಂದಿಗೆ ಹಂಚಿಕೊಳ್ಳುವಂತೆ ಅಬಕಾರಿ ಇಲಾಖೆಯ ಡಿಸಿ ಅವರಿಗೆ ಸೂಚನೆ ನೀಡಿದರು.       ರಸ್ತೆ ನಿಯಮಗಳು, ರಸ್ತೆಯ ಸುರಕ್ಷತೆ, ರಸ್ತೆ ಗುಂಡಿಗಳು, ಸ್ಪೀಡ್ ಬ್ರೇಕ್ ಅಳವಡಿಕೆ, ಸೈನ್‍ಬೋರ್ಡ್, ರಸ್ತೆ ರಿಪೇರಿ ಸೇರಿದಂತೆ ರಸ್ತೆಯ ಸುರಕ್ಷತೆಯ ಸುಧಾರಣೆಗೆ ದೀರ್ಘಕಾಲೀನ ಹಾಗೂ ಅಲ್ಪಕಾಲೀನ ಕ್ರಿಯಾ ಯೋಜನೆ ರೂಪಿಸಿ ಬರುವ 15ರೊಳಗೆ ಸಲ್ಲಿಸುವಂತೆ ಪೊಲೀಸ್, ಶಿಕ್ಷಣ ಇಲಾಖೆ, ಮಹಾ ನಗರಪಾಲಿಕೆ, ಲೋಕೋಪಯೋಗಿ, ಕೇಶಿಪ್, ಪಿ.ಆರ್.ಇ.ಡಿ. ಸೇರಿದಂತೆ ರಸ್ತೆ ಸುರಕ್ಷತೆಗೆ ಸಂಬಂಧಿಸಿದ ಇಲಾಖೆಗಳು ಸಲ್ಲಿಸಬೇಕು ಎಂದರು.       ಸಭೆಯಲ್ಲಿ…

ಮುಂದೆ ಓದಿ...

ಪ್ರಯಾಣಿಕರನ್ನು ಸಾಗಿಸುವ ಲಗೇಜ್ ವಾಹನಗಳ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

 ತುಮಕೂರು:       ತುಮಕೂರು ಜಿಲ್ಲೆಯಲ್ಲಿ ಪ್ರಯಾಣಿಕರನ್ನು ಸಾಗಾಟ ಮಾಡುವ ಟ್ಯಾಕ್ಟರ್, ಟೆಂಪೋ, ಲಗೇಜು ಆಟೋಗಳು ಸೇರಿದಂತೆ ಸರಕು ವಾಹನಗಳನ್ನು ವಶಕ್ಕೆ ಪಡೆದು ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅವರು ಪೊಲೀಸ್ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.       ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರಕುಗಳನ್ನು ಹೊತ್ತೊಯ್ಯಬೇಕಾಗಿರುವ ಟೆಂಪೋ, ಲಗೇಜು ಆಟೋ, ಟ್ಯಾಕ್ಟರ್‍ಗಳು ಜನರನ್ನು ಸಾಗಾಟ ಮಾಡುತ್ತಿವೆ. ಇದರಿಂದ ಅಪಘಾತಗಳು ಸಂಭವಿಸುತ್ತಿವೆ. ಜಿಲ್ಲೆಯಲ್ಲಿರುವ ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನರನ್ನು ಸಾಗಾಟ ಮಾಡುವ ಸರಕು ವಾಹನಗಳನ್ನು ವಶಕ್ಕೆ ಪಡೆದು ಸಾರಿಗೆ ಕಾಯ್ದೆ ಪ್ರಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಸಾರಿಗೆ ಇಲಾಖೆಗೆ ಶಿಫಾರಸ್ಸು ಮಾಡುವಂತೆ ಸಭೆಯಲ್ಲಿ ಹಾಜರಿದ್ದ ವಿವಿಧ ಪೊಲೀಸ್ ಠಾಣೆಗಳ ಇನ್‍ಪೆಕ್ಟರ್‍ಗಳಿಗೆ ಅವರು…

ಮುಂದೆ ಓದಿ...

ಮೇ 29ರಂದು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ವೇಳಾಪಟ್ಟಿ ಪ್ರಕಟ

 ತುಮಕೂರು:        ರಾಜ್ಯ ಚುನಾವಣಾ ಆಯೋಗವು ಜಿಲ್ಲೆಯ ತಿಪಟೂರು ನಗರಸಭೆ, ಕುಣಿಗಲ್ ಹಾಗೂ ಪಾವಗಡ ಪುರಸಭೆ, ತುರುವೇಕೆರೆ ಪಟ್ಟಣ ಪಂಚಾಯತಿ ಹಾಗೂ ತುಮಕೂರು ಮಹಾನಗರಪಾಲಿಕೆಯ 22ನೇ ವಾರ್ಡ್‍ಗೆ ಮೇ 29ರಂದು ಉಪ ಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದೆ. ವೇಳಾಪಟ್ಟಿ :-       ಚುನಾವಣೆಗೆ ಸಂಬಂಧಿಸಿದಂತೆ ಮೇ 9ರಂದು ನೋಟೀಸನ್ನು ಹೊರಡಿಸಲಾಗುವುದು. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಸಲ್ಲಿಸಲು ಮೇ 16 ಕಡೆಯ ದಿನವಾಗಿದ್ದು, ಮೇ 17ರಂದು ನಾಮಪತ್ರಗಳ ಪರಿಶೀಲನೆ ನಡೆಸಲಾಗುವುದು. ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಮೇ 20 ಕಡೆಯದಿನವಾಗಿದೆ. ಮತದಾನದ ಅವಶ್ಯವಿದ್ದರೆ ಮೇ 29ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ನಡೆಸಲಾಗುವುದು. ಮರು ಮತದಾನ ಇದ್ದಲ್ಲಿ ಮೇ 30ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ನಡೆಸಲಾಗುವುದು. ಮತ ಎಣಿಕೆ ಮೇ 31ರಂದು ಬೆಳಿಗ್ಗೆ 8 ಗಂಟೆಗೆ…

ಮುಂದೆ ಓದಿ...