ಕಾರು ಪಲ್ಟಿ: ಇಬ್ಬರು ಸಾವು

ಶಿರಾ:       ವೇಗವಾಗಿ ಚಲಿಸುತ್ತಿದ್ದ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಕಾರಿನಲ್ಲಿದ್ದ 8 ಮಂದಿಯಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ತಾವರೆಕೆರೆ ಸಮೀಪ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಬುಧವಾರ ನಡೆದಿದೆ.        ಜಯತಿ(6) ಮತ್ತು ಸುಧಮ್ಮ (55) ಮೃತಪಟ್ಟವರು. ಶಿವಣ್ಣ, ಮೇಘನ, ಬಾಲಮ್ಮ, ಮಂಜಮ್ಮ, ಹಿಮ, ಸುಬಧ ಗಾಯಗೊಂಡವರು ಎಂದು ತಿಳಿದು ಬಂದಿದ್ದು, ಇವರೆಲ್ಲರೂ ತುಮಕೂರಿನಲ್ಲಿ ಸಂಬಂಧಿಕರ ಮದುವೆಗೆಂದು ಹೋಗಿ ವಾಪಸ್‌ ತಮ್ಮ ಊರಾದ ಹಿರಿಯೂರು ತಾಲೂಕಿನ ಎ.ವಿ.ಕೊಟ್ಟಿಗೆ ಗ್ರಾಮಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.       ಗಾಯಗೊಂಡವರನ್ನು ಹಿರಿಯೂರು, ಸಿರಾ ಮತ್ತು ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಈ ಬಗ್ಗೆ ತಾವರೆಕೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   Share

ಮುಂದೆ ಓದಿ...

ಪರಿಸರ ಸ್ವಚ್ಛತೆ ಕಾಪಾಡಿದರೆ ಮಾತ್ರ ಡೆಂಗ್ಯೂ ರೋಗ ನಿಯಂತ್ರಣ

 ತುಮಕೂರು :       ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತಲಿರುವ ಪರಿಸರ ಸ್ವಚ್ಛತೆ ಕಾಪಾಡಿದರೆ ಮಾತ್ರ ರೋಗ ನಿಯಂತ್ರಣ ಮಾಡಲು ಸಾಧ್ಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್ ಸಾರ್ವಜನಿಕರಿಗೆ ಕಿವಿ ಮಾತು ಹೇಳಿದರು.       ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ, ಮಹಾನಗರ ಪಾಲಿಕೆ ಹಾಗೂ ನರ್ಸಿಂಗ್ ಕಾಲೇಜುಗಳ ಸಹಯೋಗದಲ್ಲಿ ನಗರದ ಬಿಜಿಎಸ್ ವೃತ್ತದಲ್ಲಿ ಏರ್ಪಡಿಸಿದ್ದ, ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿದರು.        ಮನೆಯಲ್ಲಿ ಅನಗತ್ಯ ನೀರಿನ ಶೇಖರಣೆಯನ್ನು ತಪ್ಪಿಸಿ, ಮನೆಯ ಸುತ್ತಮುತ್ತಲಿನಲ್ಲಿ ಮಳೆ ನೀರು ನಿಲ್ಲದಂತೆ ಸೂಕ್ತ ರೀತಿಯಲ್ಲಿ ವ್ಯವಸ್ಥೆ ಮಾಡಬೇಕು, ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ನೀರು ಸಂಗ್ರಹ ಮಾಡುತ್ತಾರೆ, 1 ವಾರಕ್ಕಿಂತ…

ಮುಂದೆ ಓದಿ...

ರೈಲ್ವೆ ನಿಲ್ದಾಣ ರಸ್ತೆ ದುರಸ್ತಿ, ಕಸವಿಲೇವಾರಿ ಘಟಕ ಸ್ಥಳಾಂತರಕ್ಕೆ ಆಗ್ರಹ

 ತುಮಕೂರು:       ನಗರದ 15ನೇ ವಾರ್ಡು ಹಲವು ಸಮಸ್ಯೆಗಳ ಆಗರವಾಗಿದ್ದು,ರೈಲ್ವೆ ನಿಲ್ದಾಣ ರಸ್ತೆಯಲ್ಲಿನ ಯುಜಿಡಿ ಸಮಸ್ಯೆ ಹಾಗೂ ರಸ್ತೆಗೆ ಡಾಂಬರೀಕರಣ,ಉಪ್ಪಾರಹಳ್ಳಿ ಅಂಡರ್‍ಪಾಸ್ ಬಳಿಯ ಕಸವಿಲೇವಾರಿ ಘಟಕದ ಸ್ಥಳಾಂತರ ಮತ್ತು ಜನರಿಗೆ ರೈಲ್ವೆ ಹಳಿ ದಾಟಲು ಪಾದಚಾರಿ ಮೇಲ್ಸೇತುವೆ ನಿರ್ಮಾಣ ಮಾಡುವಂತೆ ವಾರ್ಡಿನ ಕೌನ್ಸಿಲರ್ ಶ್ರೀಮತಿ ಗಿರಿಜಾ ಧನಿಯಕುಮಾರ್ ಒತ್ತಾಯಿಸಿದ್ದಾರೆ.       ಗುರುವಾರ ಬೆಳಗ್ಗೆ ಉಪ್ಪಾರಹಳ್ಳಿ ರೈಲ್ವೆ ಅಂಡರ್‍ಪಾಸ್ ಬಳಿ ಆ ಭಾಗದ ಸಾರ್ವಜನಿಕರ ಸಮಸ್ಯೆಯನ್ನು ಆಲಿಸಿದ ನಂತರ ಮಾತನಾಡಿದ ಅವರು,ರೈಲ್ವೆ ನಿಲ್ದಾಣ ರಸ್ತೆಗೆ ಡಾಂಬರು ಹಾಕಿ ಹತ್ತಾರು ವರ್ಷಗಳೇ ಕಳೆದಿದೆ. ಹಲವು ಬಾರಿ ಮನವಿ ಮಾಡಿದ ನಂತರ ಲೋಕಸಭಾ ಚುನಾವಣೆಗೂ ಮೊದಲು ರಸ್ತೆಯ ಅಗಲೀಕರಣಕ್ಕೆ ಸಂಸದರು ಮತ್ತು ಸ್ಥಳೀಯ ಶಾಸಕರು ಗುದ್ದಲಿಪೂಜೆ ನೆರವೇರಿಸಿದ್ದರು.ಆದರೆ ಇದುವರೆಗೂ ಕೆಲಸ ಆರಂಭವಾಗಿಲ್ಲ.ಇದರಿಂದ ರಸ್ತೆಯಲ್ಲಿ ಒಡಾಡುವ ಜನರು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಹೋಗಬೇಕಾಗಿದೆ.ಅಲ್ಲದೆ ಕೆಲ…

ಮುಂದೆ ಓದಿ...