ವಿವಿಧ ಬೇಡಿಕೆಗಳ ಈಡೇರಿಕೆಗೆ ಕೆಎಸ್‍ಆರ್‍ಟಿಸಿ ಕಾರ್ಮಿಕರ ಒತ್ತಾಯ

 ತುಮಕೂರು:       ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೆಎಸ್‍ಆರ್‍ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್ ಸಂಘಟನೆ, ಎಐಟಿಯುಸಿ ನೇತೃತ್ವದಲ್ಲಿ ನಗರದ ಕೇಂದ್ರ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿ ಒತ್ತಾಯಿಸಲಾಯಿತು.       ಕೆಎಸ್‍ಆರ್‍ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್ 6ನೇ ಸಮ್ಮೇಳನದ ತೀರ್ಮಾನದಂತೆ ರಾಜ್ಯ ಸರ್ಕಾರ ಕೆಎಸ್‍ಆರ್‍ಟಿಸಿ ಬೇಡಿಕೆಗಳನ್ನು ಈಡೇರಿಸಬೇಕು, ಕಾರ್ಮಿಕರ ಸಮಸ್ಯೆಗಳ ಬಗ್ಗೆ, ವೈದ್ಯಕೀಯ ಸೌಲಭ್ಯ, ಸಂಘದ ಮಾನ್ಯತಾ ಚುನಾವಣೆ ಹಾಗೂ ಕೆಎಸ್‍ಆರ್‍ಟಿಸಿ ನಿಗಮಗಳನ್ನು ಒಂದು ಮಾಡುವ ಮೂಲಕ ಕೆಎಸ್‍ಆರ್‍ಟಿಸಿ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ ವ್ಯಕ್ತಪಡಿಸಲಾಯಿತು.       ಕೆಎಸ್‍ಆರ್‍ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್ ಜಿಲ್ಲಾ ಗೌರವಾಧ್ಯಕ್ಷ ಗಿರೀಶ್ ಮಾತನಾಡಿ, ಕೆಎಸ್‍ಆರ್‍ಟಿಸಿಯನ್ನು ನಾಲ್ಕು ವಿಭಾಗಗಳಾಗಿ ವಿಭಜಿಸಿದ ನಂತರ ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದ್ದು, ಸಂಸ್ಥೆಯಲ್ಲಿ ದುಡಿಯುವ ಕಾರ್ಮಿಕರಿಗಾಗಲಿ, ಪ್ರಯಾಣಿಕರಿಗಾಗಲಿ ಇದರಿಂದ ಯಾವುದೇ ಉಪಯೋಗವಾಗಿಲ್ಲ, ಕಾರ್ಮಿಕರ ಸಂಖ್ಯೆ…

ಮುಂದೆ ಓದಿ...