ತುರುವೇಕೆರೆ : ಬೋನಿಗೆ ಬಿದ್ದ ಚಿರತೆ

ತುರುವೇಕೆರೆ:       ತಾಲ್ಲೂಕಿನ ದಂಡಿನಶಿವರ ಹೋಬಳಿಯ ತೋವಿನಕೆರೆ ಆಸುಪಾಸಿನ ಗ್ರಾಮಸ್ಥರನ್ನು ನಿದ್ದೆಗೆಡಿಸಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಬೋನಿನ ಮೂಲಕ ಭಾನುವಾರ ಸೆರೆ ಹಿಡಿಯುವಲ್ಲಿ ಸಫಲರಾಗಿದ್ದಾರೆ.        ದೊಂಬರನಹಳ್ಳಿ, ಚಿಮ್ಮನಹಳ್ಳಿ, ತೋವಿನಕೆರೆ, ಹಾಲ್ದೇವರಹಟ್ಟಿ, ಮಾರತ್ತಮ್ಮನಹಳ್ಳಿ, ಡಿ.ಶೆಟ್ಟಿಹಳ್ಳಿ, ಹೊಸಹಳ್ಳಿ, ಕುರುಬರಹಳ್ಳಿ, ಅಕ್ಕಳಸಂದ್ರ ಬಸವಾಪುರ ಸೇರಿದಂತೆ ಹತ್ತಕ್ಕೂ ಹೆಚ್ಚಿನ ಗ್ರಾಮಗಳಲ್ಲಿನ ಸಾಕು ಪ್ರಾಣಿಗಳನ್ನು ಚಿರತೆಯು ಹಿಡಿದು ತಿನ್ನುವ ಮೂಲಕ ಕಳೆದ ಐದಾರು ತಿಂಗಳಿಂದ ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಸಿತ್ತು.        ಗೊಲ್ಲರಹಟ್ಟಿಗಳ ಕೊಟ್ಟಿಗೆಗಳಲ್ಲಿ ಕೂಡಿದ್ದ ಕುರಿಗಳ ಮೇಲೆ ಚಿರತೆ ದಾಳಿ ನಡೆಸುತ್ತಿದ್ದವು. ಇನ್ನು ರೈತರು ಮುಂಜಾನೆ ಮತ್ತು ಸಂಜೆ ತಮ್ಮ ತೋಟಕ್ಕೆ ನೀರು ಬಿಡಲು ಹೋಗುವುದಕ್ಕೂ ಹೆದರುತ್ತಿದ್ದರು.       ಇದರಿಂದ ಆತಂಕಗೊಂಡ ಜನರು ಅರಣ್ಯಾಧಿಕಾರಿಗೆ ದೂರು ನೀಡಿದ್ದರು. ಅರಣ್ಯಾಧಿಕಾರಿಗಳು ಮೂರು ದಿನಗಳ ಹಿಂದೆ ತೋವಿನಕೆರೆ ಬಳಿಯ ಬಸವಾಪುರ ಕಾವಲ್‌ನ ತೋಟವೊಂದರಲ್ಲಿ ಬೋನ್‌…

ಮುಂದೆ ಓದಿ...

ಮೋದಿ ಪ್ರಮಾಣವಚನ ಕ್ಷಣ, ಅಭಿಮಾನಿಗಳ ಸಂಭ್ರಮ

ತುಮಕೂರು:        ನರೇಂದ್ರ ಮೋದಿ ಎರಡನೇ ಅವಧಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಅಭಿಮಾನಿಗಳು ಗುರುವಾರ ಸಂಭ್ರಮಾಚರಿಸಿದರು.       ನಗರದ ಟೌನ್‌ಹಾಲ್‌ ವೃತ್ತದಲ್ಲಿ ಬೃಹತ್‌ ಎಲ್‌ಇಡಿ ಪರದೆ ಅಳವಡಿಸಿ, ಸಾರ್ವಜನಿಕರು ಮೋದಿ ಪ್ರಮಾಣ ವಚನ ಸ್ವೀಕರಿಸುವ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಬಿಜೆಪಿ ಅವಕಾಶ ಮಾಡಿಕೊಟ್ಟಿತ್ತು. ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್‌ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು, ಸಾರ್ವಜನಿಕರು ಇಲ್ಲಿ ಕಾರ್ಯಕ್ರಮ ವೀಕ್ಷಿಸಿದರು. ಇದೇ ವೇಳೆ ಕಾರ್ಯಕರ್ತರು ಟೌನ್‌ಹಾಲ್‌ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಹಬ್ಬದಂತೆ ಸಂಭ್ರಮಿಸಿದರು. ಗುಬ್ಬಿ ತಾಲೂಕಿನ ಎಂ.ಎನ್‌. ಕೋಟೆಯ ಹೊಸಕೆರೆಯಲ್ಲಿ ಹಾಗೂ ತುಮಕೂರು ನಗರದ ಹಲವೆಡೆ ಮೋದಿ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಿಸಿದರು.        ಟೀ ಹಂಚಿದ ಅಭಿಮಾನಿ:       …

ಮುಂದೆ ಓದಿ...

ಕಠಿಣ ಕಾನೂನಿನಿಂದ ತಂಬಾಕು ಉತ್ಪನ್ನಗಳ ನಿಯಂತ್ರಣ ಸಾಧ್ಯ

ತುಮಕೂರು:       ತಂಬಾಕು ಸೇವನೆ ಆರೋಗ್ಯಕ್ಕೆ ಅಪಾಯಕಾರಿಯಾಗಿದ್ದು, ಕಠಿಣ ಕಾನೂನು ಜಾರಿಯಾದಾಗ ಮಾತ್ರ ತಂಬಾಕು ಉತ್ಪನ್ನಗಳನ್ನು ನಿಯಂತ್ರಿಸಲು ಸಾಧ್ಯ ಎಂದು ಶಾಸಕ ಜ್ಯೋತಿ ಗಣೇಶ್ ಅಭಿಪ್ರಾಯಪಟ್ಟರು.       ನಗರದ ಜಿಲ್ಲಾ ಬಾಲಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸ್, ಶಿಕ್ಷಣ, ಮಹಾನಗರ ಪಾಲಿಕೆ, ಸಾರಿಗೆ, ಕೆ.ಎಸ್.ಆರ್.ಟಿ.ಸಿ., ಐ.ಎಂ.ಎ., ಉಚಿತ ಕಾನೂನು ಸೇವಾ ಪ್ರಾಧಿಕಾರ, ತುಮಕೂರು ಹಾಲು ಒಕ್ಕೂಟ, ಫುಡ್ ಪಾರ್ಕ್, ವಿವಿಧ ನರ್ಸಿಂಗ್ ಕಾಲೇಜುಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿಂದು “ವಿಶ್ವ ತಂಬಾಕು ರಹಿತ ದಿನಾಚರಣೆ ಹಾಗೂ ತಂಬಾಕು ಮುಕ್ತ ತುಮಕೂರು ನಗರ ಘೋಷಣಾ ಕಾರ್ಯಕ್ರಮ”ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಯುವಕರು ಹೆಚ್ಚಾಗಿ ತಂಬಾಕು ಸೇವನೆಯನ್ನು ಚಟವಾಗಿ ರೂಢಿಸಿಕೊಂಡಿದ್ದು, ತಂಬಾಕು ಉತ್ಪನ್ನಗಳಾದ ಧೂಮಪಾನ, ಗುಟ್ಕಾ ಸೇವನೆಯಿಂದ ತಮ್ಮ ಅತ್ಯಮೂಲ್ಯ…

ಮುಂದೆ ಓದಿ...