ಅಂತರಾಷ್ಟ್ರೀಯ ಯೋಗ ದಿನ: ಯೋಗ ನಡಿಗೆ ಜಾಥಾ ಕಾರ್ಯಕ್ರಮ

 ತುಮಕೂರು:

      ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತ, ಆಯುಷ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿವಿಧ ನರ್ಸಿಂಗ್ ಕಾಲೇಜುಗಳು, ಮತ್ತಿತರ ಇಲಾಖೆ ಹಾಗೂ ಸ್ವಯಂ ಸೇವಾ ಸಂಘಗಳ ಸಹಯೋಗದಲ್ಲಿಂದು ಜಿಲ್ಲಾಸ್ಪತ್ರೆ ಆವರಣದಿಂದ ಮಹಾತ್ಮಗಾಂಧಿ ಕ್ರೀಡಾಂಗಣದವರೆಗೆ “ಯೋಗ ನಡಿಗೆ” ಜಾಥಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

      ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಆಯುಷ್ ಅಧಿಕಾರಿ ಡಾ: ಸಂಜೀವಮೂರ್ತಿ, ಅಶ್ವಿನಿ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ: ಹರೀಶ್, ಯೋಗ ಸಮನ್ವಯಾಧಿಕಾರಿ ಡಾ: ಪ್ರಭಾಕರ್, ಕಮಾಂಡಿಂಗ್ ಆಫೀಸರ್ ಕರ್ನಲ್ ಶೈಲೇಶ್‍ಶರ್ಮ, ಡಾ: ಗುರುಪ್ರಸಾದ್ ಜಂಟಿಯಾಗಿ ಚಾಲನೆ ನೀಡಿದರು.

      ಜಾಥಾದಲ್ಲಿ ಎನ್‍ಸಿಸಿ ವಿದ್ಯಾರ್ಥಿಗಳು, ಅಶ್ವಿನಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು, ಆರೋಗ್ಯ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳು, ಕೆಎಸ್‍ಆರ್‍ಪಿ ಪೊಲೀಸ್ ಸಿಬ್ಬಂದಿ, 4ನೇ ಕರ್ನಾಟಕ ಬೆಟಾಲಿಯನ್, ಮತ್ತಿತರರು ಭಾಗವಹಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

(Visited 10 times, 1 visits today)

Related posts

Leave a Comment