ಸಂಸದರ ಅವಹೇಳನ ಮಾಡಿದ ಸಚಿವ ಶ್ರೀನಿವಾಸ್ ವಿರುದ್ಧ ಬಿಜೆಪಿ ಆಕ್ರೋಶ!!

ತುಮಕೂರು :       ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಆರ್ ಶ್ರೀನಿವಾಸ್ ಅವರು ಸಂಸದ ಜಿ ಎಸ್ ಬಸವರಾಜು ಅವರನ್ನು ಅವಹೇಳನಾಕಾರಿಯಾಗಿ ನಿಂದಿಸಿದ್ದಾರೆಂದು ಆಪಾದಿಸಿ ಬಿಜೆಪಿ ಕಾರ್ಯಕರ್ತರು ಬುಧವಾರ ನಗರದ ಬಿಜಿಎಸ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಸಂಸ್ಕೃತಿ ಇಲ್ಲದ ಶ್ರೀನಿವಾಸ್ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದರು.       ಸಂಸದ ಜಿ ಎಸ್ ಬಸವರಾಜು ಅವರನ್ನು ಬಫೂನ್ ಎಂದು ಏಕ ವಚನದಲ್ಲಿ ನಿಂದಿಸಿದ್ದನ್ನು ಖಂಡಿಸಿದ ಕಾರ್ಯಕರ್ತರು, ಸಾಮಾಜಿಕ ಪ್ರಜ್ಞೆಯ ಅರಿವಿಲ್ಲದ, ಸಚಿವ ಸ್ಥಾನಕ್ಕೆ ಅನರ್ಹರಂತೆ ನಡೆದುಕೊಳ್ಳುವ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಸಂಸದರನ್ನು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.       ಕೆಲ ಕಾಲ ಬಿಜಿಎಸ್ ವೃತ್ತದಲ್ಲಿ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಸಚಿವರ ವರ್ತನೆ ಖಂಡಿಸಿದರು. ಇದಕ್ಕೂ ಮೊದಲು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

ಮುಂದೆ ಓದಿ...