ವಸತಿ ಯೋಜನೆಗಳಡಿ ಮನೆಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ

ತುಮಕೂರು :       ವಸತಿ ಯೋಜನೆಯಡಿ ಮಂಜೂರಾಗಿ ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿರುವ ಮನೆಗಳನ್ನು ಪೂರ್ಣಗೊಳಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು.       ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ವಿವಿಧ ಇಲಾಖೆಗಳು ಅನುಷ್ಟಾನಗೊಳಿಸುವ ಮನೆಗಳ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿ ಮಾತನಾಡಿದ ಅವರು ಜಿಲ್ಲೆಗೆ ಈಗಾಗಲೇ ರಾಜೀವ್‍ಗಾಂಧಿ ವಸತಿ ನಿಗಮದ ವತಿಯಿಂದ 26,526 ನಿವೇಶನ ರಹಿತರನ್ನು ಗುರುತಿಸಲಾಗಿದೆ. ಈ ಪೈಕಿ 1,191 ನಿವೇಶನ ರಹಿತರಿಗೆ ಹಕ್ಕುಪತ್ರ ಹಂಚಿಕೆ ಮಾಡಲು 36.50 ಎಕರೆ ಸರ್ಕಾರಿ ಜಮೀನು ಮತ್ತು 23.05 ಎಕರೆ ಖರೀದಿ ಜಮೀನು ಸೇರಿದಂತೆ ಒಟ್ಟು 59.55 ಎಕರೆ ಜಮೀನು ಲಭ್ಯವಿದೆ. ಕಾರ್ಯನಿರ್ವಾಹಕ ಅಧಿಕಾರಿಗಳು ಸಂಬಂಧಪಟ್ಟ ತಹಶೀಲ್ದಾರ್‍ಗಳೊಂದಿಗೆ ಚರ್ಚಿಸಿ ನಿವೇಶನ ರಹಿತರಿಗೆ ಹಕ್ಕುಪತ್ರ ಹಂಚಿಕೆ ಮಾಡಲು ಆದ್ಯತೆ ಮೇರೆಗೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.…

ಮುಂದೆ ಓದಿ...

ನಾನು ಪವರ್‍ಫುಲ್ ಅಥವಾ ಪವರ್ ಲೆಸ್ ಸಚಿವನಲ್ಲ-ಸಚಿವ ಯು.ಟಿ. ಖಾದರ್

ತುಮಕೂರು :       ನಾನು ಪವರ್‍ಫುಲ್ ಅಥವಾ ಪವರ್ ಲೆಸ್ ಸಚಿವನಲ್ಲ. ನಾನೊಬ್ಬ ಸರ್ಕಾರ ವಹಿಸಿರುವ ನಗರಾಭಿವೃದ್ಧಿ ಇಲಾಖೆಯ ಜವಾಬ್ದಾರಿ ನಿರ್ವಹಿಸುವ ಸಚಿವ. ಸಚಿವನಾಗಿ ಸರ್ಕಾರದ ಮಟ್ಟದಲ್ಲಿ ಏನು ಕೆಲಸ ಮಾಡಬೇಕೋ ಅದನ್ನು ಕಾನೂನು ವ್ಯಾಪ್ತಿಯಲ್ಲಿ ಮಾಡುತ್ತಿದ್ದೇನೆ ಎಂದು ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಇಂದಿಲ್ಲಿ ಸ್ಪಷ್ಟಪಡಿಸಿದರು.       ನಗರದಲ್ಲಿ ಸ್ಮಾರ್ಟ್‍ಸಿಟಿ, ಮಹಾನಗರ ಪಾಲಿಕೆ, ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆ ವತಿಯಿಂದ ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ಪರಿವೀಕ್ಷಣೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.       ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಈವರೆವಿಗೂ ಆಯುಕ್ತರನ್ನು ನೇಮಕ ಮಾಡಿಲ್ಲ. ಸರ್ಕಾರದಲ್ಲಿ ನೀವು ಪವರ್ ಲೆಸ್ ಅಥವಾ ಪವರ್ ಫುಲ್ ಸಚಿವರ ಎಂಬ ಪತ್ರಕರ್ತರ ಪ್ರಶ್ನೆಗೆ ಅವರು ಈ ಮೇಲಿನಂತೆ ಉತ್ತರಿಸಿದರು.       ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ…

ಮುಂದೆ ಓದಿ...