ಸಾರಿಗೆ ಬಸ್ ತಡೆದು ವಿದ್ಯಾರ್ಥಿಗಳಿಂದ ಪ್ರತಿಭಟನೆ

ಶಿರಾ :       ನಗರದ ಶಾಲಾ-ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್ ಸೌಲಭ್ಯವಿಲ್ಲವೆಂದು ಆರೋಪಿಸಿ ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಸಾರಿಗೆ ಬಸ್ಸನ್ನು ತಡೆದು ಪ್ರತಿಭಟನೆ ನಡೆಸಿದ ಘಟನೆ ಬುಧವಾರ ಕಳ್ಳಂಬೆಳ್ಳ ಗ್ರಾಮದ ಗೇಟ್‍ನಲ್ಲಿ ನಡೆದಿದೆ.       ಕಳ್ಳಂಬೆಳ್ಳ ಹೋಬಳಿಯ ಬೆಂಚೆ, ಕಳ್ಳಂಬೆಳ್ಳ ಗ್ರಾಮ, ಗೋಪಾಲದೇವರಹಳ್ಳಿ, ದೊಡ್ಡ ಅಗ್ರಹಾರ, ಚಿಕ್ಕ ಅಗ್ರಹಾರ, ಬಟ್ಟಿಗಾನಹಳ್ಳಿ ಸೇರಿದಂತೆ ಅನೇಕ ಗ್ರಾಮಗಳ ವಿದ್ಯಾರ್ಥಿಗಳು ಶಿರಾ ನಗರದ ಶಾಲಾ-ಕಾಲೇಜುಗಳಿಗೆ ಬರಬೇಕಿದ್ದು, ಬೆಳಗ್ಗೆ ಕೇವಲ ಒಂದು ಸರ್ಕಾರಿ ಬಸ್ ಬಿಟ್ಟರೆ ಇನ್ನಾವುದೇ ಸರ್ಕಾರಿ ಬಸ್‍ಗಳನ್ನು ಈ ರಸ್ತೆಯ ಮೂಲಕ ಚಲಿಸಲು ಅವಕಾಶ ಕಲ್ಪಿಸಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದರು.       ಕಳ್ಳಂಬೆಳ್ಳ ಗ್ರಾಮದ ಗೇಟ್‍ನಲ್ಲಿ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸ್‍ನ್ನು ಅಡ್ಡಗಟ್ಟಿದ ವಿದ್ಯಾರ್ಥಿಗಳು ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸದ ಹೊರತು ಬಸ್ಸನ್ನು ಬಿಡುವುದಿಲ್ಲ ಎಂದು ಹಠ ಹಿಡಿದು…

ಮುಂದೆ ಓದಿ...

ಪರಿಚಯಸ್ಥರಿಂದಲೇ ಹೆಚ್ಚಿನ ಲೈಂಗಿಕ ದೌರ್ಜನ್ಯ!

ತುಮಕೂರು:       ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಹೆಚ್ಚಾಗುತ್ತಿದ್ದು, ಇದಕ್ಕೆ ಪ್ರಮುಖ ಕಾರಣ ಪರಿಚಯಸ್ಥರು, ಸಂಬಂಧಿಕರು ಹಾಗೂ ನೆರೆಹೊರೆಯವರೇ ಆಗಿರುತ್ತಾರೆ. ಇಂತಹ ಪ್ರಕರಣಗಳು ಮಕ್ಕಳ ಮೇಲೆ ಮಾನಸಿಕವಾಗಿ ಗಂಭೀರ ಪರಿಣಾಮ ಬೀರುತ್ತಿರುವುದು ಆಘಾತಕಾರಿ ಅಂಶವಾಗಿದ್ದು, ಇದಕ್ಕೆ ಪೋಷಕರ ನಿರ್ಲಕ್ಷ್ಯ ಹಾಗೂ ಮಕ್ಕಳಿಗೆ ಈ ಕುರಿತು ಅರಿವು ಇಲ್ಲದಿರುವುದೇ ಪ್ರಮುಖ ಕಾರಣ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ  ಪ್ರೊಬೇಷನರಿ ಅಧಿಕಾರಿ ಕವಿತಾ ತಿಳಿಸಿದರು.       ಜಿಲ್ಲಾ ಮಕ್ಕಳ ರಕ್ಷಣಾ ಘಟಕ ತುಮಕೂರು ಇವರ ಆಶ್ರಯದಲ್ಲಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆ 2012 ಹಾಗೂ ಮಕ್ಕಳ ಮಾರಾಟ ಹಾಗೂ ಸಾಕಾಣಿಕೆ ಕುರಿತು ಮಾತನಾಡಿದ ಅವರು, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಬಗ್ಗೆ ಪರಿಚಯಿಸಿದರು. ಬಾಲ್ಯ ವಿವಾಹ ಮತ್ತು ಪೋಕ್ಸೋ ಕಾಯ್ದೆ ಕುರಿತು ಉದಾಹರಣೆಗಳೊಂದಿಗೆ ವಿವರಿಸುತ್ತಾ ಬಾಲ್ಯ ವಿವಾಹ…

ಮುಂದೆ ಓದಿ...

ಸಭೆಗೆ ಸುಳ್ಳು ಮಾಹಿತಿ ನೀಡಿದರೆ ಕಠಿಣ ಕ್ರಮ!

 ತುಮಕೂರು :       ಸಭೆಗೆ ಸುಳ್ಳು ಮಾಹಿತಿ ನೀಡಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ|| ಶಾಲಿನಿ ರಜನೀಶ್ ಸೂಚನೆ ನೀಡಿದರು.       ಜಿಲ್ಲಾ ಪಂಚಾಯತಿಯಲ್ಲಿಂದು ನರೇಗಾ ಮತ್ತು ನೀರು ಸಂರಕ್ಷಣೆ ಕುರಿತು ಪ್ರಗತಿ ಪರಿಶೀಲಾನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಒದಗಿಸುವ ಮಾಹಿತಿ ನಿಖರವಾಗಿರಬೇಕು. ಅಸ್ಪಷ್ಟ ಮಾಹಿತಿ ನೀಡಿದರೆ ಶಿಸ್ತು ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ವರದಿ ಮಾಡಲಾಗುವುದೆಂದ ಅವರು ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಶೇ.48ರಷ್ಟು ಮಾತ್ರ ಉದ್ಯೋಗ ಒದಗಿಸಲಾಗಿದೆ. ನಿರೀಕ್ಷಿತ ಗುರಿ ಸಾಧನೆಯಾಗಿಲ್ಲ. ಇದರಿಂದ ನರೇಗಾ ಯೋಜನೆಯಡಿ ಉದ್ಯೋಗ ಒದಗಿಸುವಲ್ಲಿ ರಾಷ್ಟ್ರ ಮಟ್ಟದಲ್ಲಿ ಹಿಂದುಳಿದಿದ್ದೇವೆ. ನರೇಗಾ ಯೋಜನೆಯಡಿ ಗುರಿ ಮೀರಿ ಸಾಧನೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.       ಕೃಷಿ ಭಾಗ್ಯ ಯೋಜನೆಯಡಿ ಕೈಗೊಳ್ಳಲಾಗುವ ಕೃಷಿ…

ಮುಂದೆ ಓದಿ...