ಹಲ್ಲೆ ಮಾಡಿ ಪ್ರಾಣ ಬೆದರಿಕೆ ಆರೋಪಿಗಳಿಗೆ 4 ವರ್ಷ ಕಠಿಣ ಶಿಕ್ಷೆ

 ತುಮಕೂರು: ತಿಲಕ್‍ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಿಪ್ಪೇಶ ಹಾಗೂ ಲಕ್ಷ್ಮಣ್ ಎಂಬುವವರ ಮೇಲೆ ಹಲ್ಲೆ ಮಾಡಿ ಪ್ರಾಣ ಬೆದರಿಕೆ ಹಾಕಿದ್ದ ರಂಗಪ್ಪ, ಭೀಮಣ್ಣ ಬಿನ್ ನರಸಪ್ಪ ಹಾಗೂ ಭೀಮಣ್ಣ ಬಿನ್ ಯಲ್ಲಪ್ಪ ಎಂಬ ಮೂರು ಮಂದಿ ಆರೋಪಿಗಳಿಗೆ 4 ವರ್ಷಗಳ ಕಠಿಣ ಶಿಕ್ಷೆ ಹಾಗೂ ತಲಾ 15000 ರೂ.ಗಳ ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜೇಂದ್ರ ಬಾದಾಮಿಕರ್ ತೀರ್ಪು ನೀಡಿದ್ದಾರೆ. ಪ್ರಕರಣದ ಹಿನ್ನಲೆ:- ಮೂವರು ಆರೋಪಿಗಳು ಸೇರಿ 2018ರ ಮಾರ್ಚ್ 10ರಂದು ತಿಲಕ್‍ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿ ರಿಂಗ್ ರಸ್ತೆಯಲ್ಲಿರುವ ಡಿ.ಎ.ಟಿ ಮಸೀದಿ ಬಳಿ ತಿಪ್ಪೇಶ ಮತ್ತು ಲಕ್ಷ್ಮಣ ಎಂಬುವವರನ್ನು ಅವಾಚ್ಯ ಶಬ್ದಗಳಿಂದ ಬೈದು, ಕೊಲೆ ಮಾಡಬೇಕೆಂಬ ಉದ್ದೇಶದಿಂದ ಇಬ್ಬರಿಗೂ ಇಟ್ಟಿಗೆಯಿಂದ ಹಣೆ, ಕೆನ್ನೆ, ಹೊಟ್ಟೆ, ಎದೆ, ಕಿವಿ ಭಾಗಕ್ಕೆ ಹೊಡೆದು ತೀವ್ರ ಸ್ವರೂಪದ ಗಾಯಪಡಿಸಿ ಪ್ರಾಣಬೆದರಿಕೆ ಹಾಕಿರುವುದು ತನಿಖೆಯಿಂದ ಸಾಬೀತಾಗಿದೆ. ಆರೋಪ…

ಮುಂದೆ ಓದಿ...

ಶ್ರೀಗಂಧ ಮರಗಳ ಅಕ್ರಮ ಮಾರಾಟ ಆರೋಪಿಗಳಿಗೆ 5 ವರ್ಷಗಳ ಕಠಿಣ ಶಿಕ್ಷೆ!

 ತುಮಕೂರು:       ಶ್ರೀಗಂಧ ಮರಗಳನ್ನು ಅಕ್ರಮವಾಗಿ ಕಡಿದು ಸ್ವಾಧೀನ ಪಡಿಸಿಕೊಂಡಿದ್ದ ಆರೋಪದ ಮೇಲೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಲಕ್ಷ್ಮಿ ಎಂಬ ಮಹಿಳೆಗೆ 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 50 ಸಾವಿರ ರೂ.ಗಳ ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜೇಂದ್ರ ಬಾದಾಮಿಕರ್ ತೀರ್ಪು ನೀಡಿದ್ದಾರೆ.      ಪ್ರಕರಣದ ಹಿನ್ನೆಲೆ:-       ಗುಬ್ಬಿ ಅರಣ್ಯ ವಲಯದ ವ್ಯಾಪ್ತಿಯೊಳಗಿನ ದೊಡ್ಡಗುಣಿ ಅನುಭಾಗದ ಮಾರಶೆಟ್ಟಿಹಳ್ಳಿ ರಾಜ್ಯ ಮೀಸಲು ಅರಣ್ಯ ಪ್ರದೇಶದಲ್ಲಿ ಹಂಡನಹಳ್ಳಿ ಗುಡ್ಡದ ತಪ್ಪಲಿನಲ್ಲಿ ಸುಮಾರು 17 ಶ್ರೀಗಂಧದ ಮರಗಳನ್ನು ಅಕ್ರಮವಾಗಿ ಕಡಿದು ಸ್ವಾಧೀನ ಪಡಿಸಿಕೊಂಡಿದ್ದರೆಂಬ ಖಚಿತ ಮಾಹಿತಿ ಮೇರೆಗೆ ದೊಡ್ಡಗುಣಿ ಉಪವಲಯ ಅರಣ್ಯಾಧಿಕಾರಿ ಬಸವರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಆರೋಪಿ ಲಕ್ಷ್ಮಿ ಬಳಿ ಶ್ರೀಗಂಧದ ಮರಗಳಿರುವುದು ಸಾಬೀತಾಗಿದೆ. ಆರೋಪಿ ಲಕ್ಷ್ಮಿ ಬಳಿಯಿದ್ದ ಶ್ರೀಗಂಧದ ಮರಗಳನ್ನು ಅಮಾನತ್ತುಪಡಿಸಿಕೊಳ್ಳಲಾಗಿದೆ. ಅರಣ್ಯ…

ಮುಂದೆ ಓದಿ...

‘ಮಾಧ್ಯಮರಂಗದ ಭವಿಷ್ಯ ಡಿಜಿಟಲ್ ಮಾಧ್ಯಮಗಳಲ್ಲಿದೆ’

ತುಮಕೂರು:       ಮಾಧ್ಯಮ ಕ್ಷೇತ್ರದ ಒಟ್ಟಾರೆ ಭವಿಷ್ಯ ಡಿಜಿಟಲ್ ಮಾಧ್ಯಮಗಳಲ್ಲಿ ಅಡಗಿದೆ ಎಂದು ದುಬೈಯ ಹೈಯರ್ ಕಾಲೇಜಸ್ ಆಫ್ ಟೆಕ್ನಾಲಜಿಯ ಅಪ್ಲೈಡ್ ಮೀಡಿಯ ವಿಭಾಗದ ಉಪನ್ಯಾಸಕ ಡಾ. ಶ್ರೀಶ ಎಂ. ಅಭಿಪ್ರಾಯಪಟ್ಟರು.       ತುಮಕೂರು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗವು ಶುಕ್ರವಾರ ಹಮ್ಮಿಕೊಂಡಿದ್ದ ‘ಮಾಧ್ಯಮರಂಗ: ಭವಿಷ್ಯದಲ್ಲೇನಿದೆ?’ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.       ಸಾಂಪ್ರದಾಯಿಕ ಮಾಧ್ಯಮಗಳ ಜಾಗವನ್ನು ಸಾಮಾಜಿಕ ಮಾಧ್ಯಮಗಳು ಆವರಿಸಿಕೊಳ್ಳುತ್ತಿವೆ. ಮುದ್ರಣ ಮಾಧ್ಯಮಕ್ಕೆ ಭವಿಷ್ಯವಿಲ್ಲ ಎಂದು ಇದರರ್ಥವಲ್ಲ. ಭವಿಷ್ಯದಲ್ಲಿ ಅದರ ಸ್ವರೂಪ ಬದಲಾಗಲಿದೆ. ವಾಸ್ತವವಾಗಿ ಸ್ಥಳೀಯ ಪತ್ರಿಕೆಗಳಿಗೆ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯವಿದೆ ಎಂದರು.       ಕಾರ್ಪೋರೇಟ್ ಕಂಪೆನಿಗಳು ತಮ್ಮ ಜಾಹೀರಾತು ಮೊತ್ತದ ಶೇ. 45 ಪಾಲನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚಾರಕ್ಕಾಗಿ ಬಳಸಲಿವೆ. ಸೋಶಿಯಲ್ ಮೀಡಿಯಾ ಮ್ಯಾನೇಜರ್ ಎಂಬುದು ಮುಂದಿನ ಕೆಲವೇ…

ಮುಂದೆ ಓದಿ...