ತುರುವೇಕೆರೆ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ಧಿಡೀರ್ ಭೇಟಿ

ತುರುವೇಕೆರೆ:       ತುಮಕೂರು ಜಿಲ್ಲಾದಿಕಾರಿ ರಾಕೇಶ್‍ಕುಮಾರ್ ಮಂಗಳವಾರ ಸಂಜೆ ತಾಲೂಕು ಕಚೇರಿಗೆ ಧಿಡೀರ್ ಬೇಟಿ ನೀಡಿ ಹಲವಾರು ಇಲಾಖೆಗಳ ಕಡತಗಳನ್ನು ಪರಿಶೀಲಿಸುವ ಮೂಲಕ ಅದಿಕಾರಿಗಳಿಗೆ ಚುರುಕು ಮುಟ್ಟಿಸಿದರು.       ತಾಲೂಕು ಕಛೇರಿಯಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಸಮಾಜಿಕ ಭದ್ರತ ಯೋಜನೆಯಲ್ಲಿನ ಪಿಂಚಣಿ ಹಣ ವರ್ಗಾವಣೆಯಲ್ಲಿ ವಿಳಂಬವಾಗುತ್ತಿದ್ದ ಹಿನ್ನಲೆಯಲ್ಲಿ ಸಾರ್ವಜನಿಕರಿಂದ ಹಲವು ದೂರುಗಳು ಸಲ್ಲಿಕೆಯಾಗಿದ್ದು ಖುದ್ದು ಬೇಟಿ ನೀಡಿ ಪರಿಶೀಲಿಸಲಾಗಿ ಕೆಲವು ಲೋಪ ದೋಷಗಳು ಕಂಡ ಬಂದಿದ್ದು ಹಲವು ಪಲಾನುಭವಿಗಳಿಗೆ ಎರಡು ಬಾರಿ ಹಣ ಸಂದಾಯವಾಗಿದ್ದು. ಇನ್ನು ಕೆಲವು ಜನರಿಗೆ ಸುಮಾರು ದಿನಗಳಿಂದ ಪಿಂಚಣಿ ಬಂದಿಲ್ಲ. ಕೆ-1 ನಿಂದ ಕೆ-2ಗೆ ಆಡಳಿತ ಯಂತ್ರ ಬದಲಾಗಿರುವುದರಿಂದ ಸೂಕ್ತ ದಾಖಲಾತಿಗಳನ್ನು ಪಲಾನುಭವಿಗಳು ಸಲ್ಲಿಸದಿದ್ದರಿಂದ ವಿಳಂಬವಾಗಿದೆ. ಪಿಂಚಣಿ ಪಲಾನುಭವಿಗಳು ತಮ್ಮ ಆದಾರ್ ಕಾರ್ಡ್ ಬ್ಯಾಂಕ್ ಪಾಸ್ ಪುಸ್ತಕವನ್ನು ಸಲ್ಲಿಸುವಂತೆ ಸೂಚಿಸಿದರು.…

ಮುಂದೆ ಓದಿ...

ಹಿರಿಯ ಅಧಿಕಾರಿಗಳ ದಬ್ಬಾಳಿಕೆಗೆ ಕಡಿವಾಣ ಹಾಕಲು ಆಗ್ರಹ!!

ತುಮಕೂರು :       ಗ್ರಾಮಲೆಕ್ಕಾಧಿಕಾರಿಗಳ ಮುಂಬಡ್ತಿಯಲ್ಲಿ ಉಂಟಾಗುತ್ತಿರುವ ನಿರಂತರ ಅನ್ಯಾಯವನ್ನು ಸರಿಪಡಿಸಿ, ಇಲಾಖೆಯ ದ್ವಿತೀಯ ದರ್ಜೆ ಸಹಾಯಕ ಮತ್ತು ಗ್ರಾಮಲೆಕ್ಕಿಗರ ಜೇಷ್ಠತೆಗಳನ್ನು ಒಟ್ಟುಗೂಡಿಸಿ, ಪದನವೀಕರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಜಿಲ್ಲಾ. ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಕೆ.ಆರ್.ಮುರಳೀಧರ್ ಆಗ್ರಹ ವ್ಯಕ್ತ ಪಡಿಸಿದರು.       ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಕೇಂದ್ರ ಸಂಘವು ರಾಜ್ಯ ಗ್ರಾಮಲೆಕ್ಕಾಧಿಕಾರಿಗಳ ಕುಂದು ಕೊರತೆ ಮತ್ತು ಇತರೆ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಸರಿಪಡಿಸುವಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಲ್ಲಿ ಕೋರಲಾಗಿತ್ತು. ನಂತರ ಈ ಬಗ್ಗೆ ಎರಡು ಬಾರಿ ಸಭೆ ಕರೆದು ಚರ್ಚ ಮಾಡಿ ಬೇಡಿಕೆಗಳ ಈಡೇರಿಕೆಗೆ ಆಶ್ವಾಸನೆ ನೀಡಲಾಗಿತ್ತು. ಆದರೆ ಇಲ್ಲಿವರೆಗೆ ಭರವಸೆಗಳು ಈಡೇರಿಲ್ಲ ಎಂದು ಆಕ್ರೋಷ ವ್ಯಕ್ತ ಪಡಿಸಿದರು.…

ಮುಂದೆ ಓದಿ...

ರಾಜ್ಯ ರೈತ ಸಂಘದಿಂದ ಛೀ..ಥೂ..ಚಳುವಳಿ!

ಹುಳಿಯಾರು:       ಅಧಿಕಾರಕ್ಕೋಸ್ಕರ ಖರೀದಿಯಾದ ಶಾಸಕರುಗಳಿಗೆ ಹಾಗೂ ಅಭಿವೃದ್ಧಿ ಬಗ್ಗೆ ಚಿಂತಿಸದೆ ರೈತರ ಹಿತ ಕಡೆಗಣಿಸಿದ ಸರ್ಕಾರಕ್ಕೆ ಛೀ.. ಥೂ ಎಂದು ಉಗಿಯುವ ಚಳುವಳಿಯನ್ನು ಹುಳಿಯಾರಿನಲ್ಲಿ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆಂಕೆರೆ ಸತೀಶ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು.       ಹುಳಿಯಾರಿನ ಬಸ್ ನಿಲ್ದಾಣದಲ್ಲಿ ನಡೆದ ವಿನೂತನ ಪ್ರತಿಭಟನೆಯಲ್ಲಿ ತಮ್ಮ ಶಾಸಕ ಸ್ಥಾನವನ್ನು ದುಡ್ಡಿಗೆ ಮಾರಾಟ ಮಾಡಿಕೊಂಡ ಶಾಸಕರುಗಳಿಗೆ ಛೀಮಾರಿ ಹಾಕಿದ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆಂಕೆರೆ ಸತೀಶ್ ಜನರಿಂದ ಆಯ್ಕೆಯಾಗಿ ಶಾಸಕರಾದ ಇವರುಗಳಿಂದು ಕೇವಲ ಹಣ ಹಾಗೂ ಸಚಿವಗಿರಿ ಸ್ಥಾನಕ್ಕಾಗಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ತೀವ್ರವಾಗಿ ಖಂಡಿಸಿದರಲ್ಲದೆ ಹಣಕ್ಕಾಗಿ ಮತದಾರರನ್ನು ಕಡೆಗಣಿಸಿ ರೆಸಾರ್ಟ್‍ನಲ್ಲಿ ವಾಸಿಸುತ್ತಿರುವ ಶಾಸಕರುಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಅವರ ಜನ್ಮ ಜಾಲಾಡಿದರು.       ತಾಲೂಕು ಅಧ್ಯಕ್ಷ ತಿಮ್ಮನಹಳ್ಳಿ ಲೋಕಣ್ಣ ಮಾತನಾಡಿ ರೈತರ,…

ಮುಂದೆ ಓದಿ...