ಮಧುಗಿರಿ ಆಸ್ಪತ್ರೆಯ ಆವರಣದಲ್ಲಿ ತಡರಾತ್ರಿ ಹೆಬ್ಬಾವು ಪ್ರತ್ಯೆಕ್ಷ

ಮಧುಗಿರಿ :       ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಗುರುವಾರ ತಡರಾತ್ರಿ ಹೆಬ್ಬಾವು ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದಾಗಿ ಕಿಡಿಗೇಡಿಗಳ ದಾಳಿಗೆ ಬಲಿಯಾಯ್ತ ಎಂಬ ಅನುಮಾನಗಳು ವ್ಯಕ್ತವಾಗುತ್ತಿವೆ.        ರಾತ್ರಿ ಸುಮಾರು 11 ಘಂಟೆಯ ಸಂದರ್ಭದಲ್ಲಿ ಆಸ್ಪತ್ರೆಯ ಆವರಣದ ಕಾಂಪೌಂಡ್ ಮೇಲ್ಬಾಗದಲ್ಲಿ ಹೆಬ್ಬಾವು ಓಡಾಡುತ್ತಿದ್ದುದನ್ನು ಗಮನಿಸಿದ ಸಾರ್ವಜನಿಕರು ಭಯಬೀತರಾಗಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದಾಗ ಹೆಬ್ಬಾವು ಚರಂಡಿಯೊಳಗೆ ನುಸುಳಿದೆ. ಚರಂಡಿಯೊಳಗೆ ಹೋದ ಹಾವು ಮತ್ತೆ ಮೇಲೆ ಬರುವುದಿಲ್ಲ. ಯಾರಿಗೂ ಏನೂ ತೊಂದರೆ ಮಾಡುವುದಿಲ್ಲ. ಬೆಳಗ್ಗೆ ಬಂದು ಹಿಡಿಯುವುದಾಗಿ ಸಿಬ್ಬಂದಿ ಅಲ್ಲಿಂದ ನಿರ್ಗಮಿಸಿದ್ದಾರೆ.       ಸ್ವಲ್ಪ ಸಮಯದ ನಂತರ ಮತ್ತೆ ಮೇಲೆ ಬಂದ ಹಾವು ಅಸ್ಪತ್ರೆಯ ಆವರಣ ಕಾಂಪೌಂಡ್ ಮೇಲ್ಬಾಗದಲ್ಲಿ ಓಡಾಡಿದೆ. ಇದರಿಂದ ಗಾಬರಿಗೊಂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳು ಹೊರಕ್ಕೆ ಓಡಿ ಬಂದಿದ್ದಾರೆ.…

ಮುಂದೆ ಓದಿ...

ಎಸಿಬಿ ಪತ್ರಕ್ಕೆ ಬೆಲೆ ನೀಡದ ಸರ್ಕಾರಿ ಕಛೇರಿಗಳ ವಿಷಾದ

ತುರುವೇಕೆರೆ :       ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲು ಹಿಂದೇಟು ಹಾಕುವ ಹಾಗೂ ಸಾರ್ವಜನಿಕರಿಂದ ಹಣ ಸುಲಿಗೆ ಮಾಡುವವರಿಗೆ ಸಿಂಹಸ್ವಪ್ನದಂತಿರಬೇಕಾದ ಭ್ರಷ್ಠಾಚಾರ ನಿಗ್ರಹ ದಳದ ಪತ್ರಕ್ಕೆ ತಾಲೂಕಿನ ಹಲವಾರು ಸರ್ಕಾರಿ ಕಛೇರಿಗಳು ಕವಡೆ ಕಿಮ್ಮತ್ತನ್ನೂ ನೀಡುತ್ತಿಲ್ಲ ಎಂಬ ಸಂಗತಿ ಇಂದು ಬಾಣಸಂದ್ರದಲ್ಲಿ ನಡೆದ ಎಸಿಬಿ ಸಾರ್ವಜನಿಕರ ಸಭೆಯ ವೇಳೆ ಪ್ರಸ್ತಾಪವಾಯಿತು.       ತಾಲೂಕಿನ ಎಂ.ಮಂಚೇನಹಳ್ಳಿಯ ಕೃಷ್ಣಮೂರ್ತಿ ಎಂಬುವವರು ಕಳೆದ 28-11- 18 ರಂದು ಎಸಿಬಿ ಗೆ ತುರುವೇಕೆರೆ ತಾಲೂಕು ಕಛೇರಿಯಲ್ಲಿ ಕಾನೂನು ಬಾಹಿರವಾಗಿ ಖಾತೆ ಬದಲಾವಣೆ ಮಾಡಲಾಗಿದೆ. ಈ ಕುರಿತು ಸಾಕಷ್ಟು ಬಾರಿ ಮನವಿ ಹಾಗೂ ದೂರು ನೀಡಿದ್ದರೂ ಸಹ ಯಾವುದೇ ಕ್ರಮ ಕೈಗೊಳ್ಳದೇ ತೊಂದರೆ ಮಾಡಲಾಗಿದೆ ಎಂದು ದೂರು ನೀಡಿದ್ದರು. ಈ ಸಂಬಂಧ ತಾಲೂಕು ಕಛೇರಿಗೆ ಅಂದೇ ಜಿಲ್ಲಾ ಭ್ರಷ್ಠಾಚಾರ ನಿಗ್ರಹ ದಳದ ಅಧಿಕಾರಿಗಳು ಸಂಬಂಧಿಸಿದ ದಾಖಲೆಗಳನ್ನು ಪರಿಶೀಲನೆ ಮಾಡಿ ದೂರುದಾರರಿಗೆ…

ಮುಂದೆ ಓದಿ...

ಭೂಮಿ ಸ್ವಾಧೀನ : ಪರಿಹಾರ ನೀಡದಿರುವುದನ್ನು ಖಂಡಿಸಿ ಪ್ರತಿಭಟನೆ

ಗುಬ್ಬಿ :       ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ 206 ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹಾಗೂ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಸ್ವಾಧೀನಪಡಿಸಿ ಕೊಳ್ಳುತ್ತಿರುವ ರೈತರ ಭೂಮಿ, ನಿವೇಶನ, ತೋಟಗಳು, ವಾಸದ ಮನೆಗಳಿಗೆ ಸೂಕ್ತವಾದ ಪರಿಹಾರ ನೀಡದಿರುವುದನ್ನು ಖಂಡಿಸಿ ತಾಲ್ಲೂಕಿನ ಮುದಿಗೆರೆ ಭಾಗದ ರೈತರು ಹಾಗೂ ರೈತ ಸಂಘದ ಪದಾಧಿಕಾರಿಗಳು ಕಾಮಗಾರಿ ನಡೆಸದಂತೆ ಜೆಸಿಬಿ ಯಂತ್ರಗಳನ್ನು ತಡೆದು ಪ್ರತಿಭಟನೆ ನಡೆಸಿದರು.       ತಾಲ್ಲೂಕಿನ ಮುದಿಗೆರೆ ಗ್ರಾಮದ ಪಕ್ಕದಲ್ಲಿ ಹಾದು ಹೋಗುತ್ತಿರುವ ರಸ್ತೆ ಕಾಮಗಾರಿ ನಡೆಯುತ್ತಿರುವ ರೈತರ ಜಮೀನಿನಲ್ಲಿ ಜೆಸಿಬಿ ಯಂತ್ರವನ್ನು ತಡೆದು ಸ್ವಾಧೀನಪಡಿಸಿಕೊಳ್ಳುವ ಜಮೀನಿಗೆ ಸೂಕ್ತವಾದ ಪರಿಹಾರ ನೀಡುವವರೆಗೂ ಕಾಮಗಾರಿ ಮಾಡಬಾರದೆಂದು ಈ ಭಾಗದ ರೈತರು ರೈತ ಸಂಘದ ಮುಖಂಡರೊಂದಿಗೆ ಪ್ರತಿಭಟನೆ ನಡೆಸಿದರು.       ರೈತ ಮಹದೇವಯ್ಯ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಗೆ ಸ್ವಾಧೀನ ಪಡಿಸಿಕೊಂಡಿರುವ ನಮ್ಮ ಭೂಮಿಗೆ ರಾಷ್ಟ್ರೀಯ…

ಮುಂದೆ ಓದಿ...

ಶಾಲೆಯಿಂದ ಹೊರಗುಳಿದ ಅಲ್ಪಸಂಖ್ಯಾತ ಮಕ್ಕಳನ್ನು ಮುಖ್ಯವಾಹಿನಿಗೆ ಕರೆತರಲು ಡಿಸಿ ಸೂಚನೆ!

ತುಮಕೂರು :       ಶಾಲೆಯಿಂದ ಹೊರಗುಳಿದ ಅಲ್ಪಸಂಖ್ಯಾತ ಮಕ್ಕಳನ್ನು ಮುಖ್ಯವಾಹಿನಿಗೆ ಕರೆ ತನ್ನಿ ಎಂದು ಜಿಲ್ಲಾಧಿಕಾರಿ ಡಾ|| ಕೆ. ರಾಕೇಶ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.       ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ನಡೆದ ಅಲ್ಪಸಂಖ್ಯಾತ ಕಲ್ಯಾಣದ ಪ್ರಧಾನ ಮಂತ್ರಿಗಳ 15 ಅಂಶಗಳ ವಿವಿಧ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಗುಬ್ಬಿ ಹಾಗೂ ತುಮಕೂರು ತಾಲ್ಲೂಕಿನಲ್ಲಿ ಒಟ್ಟು 114 ಅಲ್ಪಸಂಖ್ಯಾತರ ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಹೊರಗುಳಿದ ಮಕ್ಕಳನ್ನು ವಿಶೇಷ ದಾಖಲಾತಿ ಆಂದೋಲನಡಿಯಲ್ಲಿ ಮಕ್ಕಳಿಗೆ ಜಾಗೃತಿ ಮೂಡಿಸಿ ಶಾಲೆಗೆ ದಾಖಲಿಸಬೇಕು ಹಾಗೂ ತಂದೆ-ತಾಯೆಂದರಿಗೆ ಮಕ್ಕಳ ಭವಿಷ್ಯದ ಬಗ್ಗೆ ಅರಿವು ಮೂಡಿಸಬೇಕೆಂದರು.       ಅಲ್ಪಸಂಖ್ಯಾತ ಶಾಲೆಗಳಲ್ಲಿ ವಿದ್ಯಾರ್ಥಿನಿಯರ ದಾಖಲಾತಿ ಹೆಚ್ಚಾಗಿದ್ದು, ವಿದ್ಯಾರ್ಥಿಗಳ ಸಂಖ್ಯೆ ಕಡಿಯಾಗುತ್ತಿರುವ ಬಗ್ಗೆ ಕಾರಣವೇನೆಂದು ಕೇಳಿ ನಿಖರ ಮಾಹಿತಿ ನೀಡಲು ಡಿಡಿಪಿಐ ಕಾಮಾಕ್ಷಿ ಅವರಿಗೆ ಸೂಚಿಸಿದಾಗ ಆರ್ಥಿಕವಾಗಿ ಹಿಂದುಳಿದಿರುವುದರಿಂದ…

ಮುಂದೆ ಓದಿ...