ಕೃಷಿ ಯೋಜನೆಗಳನ್ನು ಪ್ರಾಮಾಣಿಕವಾಗಿ ರೈತರಿಗೆ ತಲುಪಿಸಲು ಸಿಇಓ ಸಲಹೆ!

ತುಮಕೂರು:       ರೈತಸಿರಿ, ಕೃಷಿಭಾಗ್ಯ, ಪಿಎಂಕಿಸಾನ್, ಬೆಳೆ ವಿಮಾ, ಗಂಗಾ ಕಲ್ಯಾಣ ಸೇರಿದಂತೆ ಎಲ್ಲಾ ಕೃಷಿ ಯೋಜನೆಗಳನ್ನು ಅರ್ಹ ರೈತ ಫಲಾನುಭವಿಗಳಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಬೇಕೆಂದು ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಲತಾ ರವಿಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.       ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿಂದು ಜರುಗಿದ ಕೆಡಿಪಿ ಸಭೆ ಅಧ್ಯಕ್ಷತೆವಹಿಸಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸುತ್ತಾ ಮಾತನಾಡಿದ ಅವರು, ರೈತರಿಗಾಗಿ ಜಾರಿಯಲ್ಲಿರುವ ಸರ್ಕಾರಿ ಯೋಜನೆಗಳ ಬಗ್ಗೆ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಮಳೆ ಬಾರದೆ ಮೊದಲೇ ರೈತರು ಸಂಕಷ್ಟದಲ್ಲಿದ್ದಾರೆ. ಸರ್ಕಾರಿ ಯೋಜನೆಗಳಿಂದಾದರೂ ರೈತರು ಕೊಂಚ ಸುಧಾರಿಸಿಕೊಳ್ಳಲಿ ಎಂದು ತಿಳಿಸಿದ ಅವರು, ಬಾಕಿ ಇರುವ ಬೆಳೆ ವಿಮಾ ಅರ್ಜಿಗಳನ್ನು ಆದಷ್ಟು ಬೇಗನೆ ವಿಲೇವಾರಿ ಮಾಡಬೇಕೆಂದು ಸೂಚಿಸಿದರು.       ಕೃಷಿ ಜಂಟಿ ನಿರ್ದೇಶಕ ಜಯಸ್ವಾಮಿ ಮಾತನಾಡಿ, ಮಳೆ ಕೊರತೆಯಿಂದ ಜಿಲ್ಲೆಯಲ್ಲಿ…

ಮುಂದೆ ಓದಿ...

ಸಣ್ಣ ಕೈಗಾರಿಕೋದ್ಯಮಿಗಳು ತಪ್ಪದೇ ಪೇಟೆಂಟ್ ಪಡೆಯಲು ಡೀಸಿ ಸಲಹೆ!

ತುಮಕೂರು:       ಸಣ್ಣ ಕೈಗಾರಿಕೋದ್ಯಮಿಗಳು ತಾವು ಹೊಸದಾಗಿ ಆವಿಷ್ಕರಿಸಿದ ಕೈಗಾರಿಕೆ/ಯಂತ್ರೋಪಕರಣಗಳ ಪೇಟೆಂಟ್(ಹಕ್ಕುಪತ್ರ)ಅನ್ನು ತಪ್ಪದೇ ಪಡೆದಿರಬೇಕೆಂದು ಜಿಲ್ಲಾಧಿಕಾರಿ ಡಾ|| ಕೆ. ರಾಕೇಶ್‍ಕುಮಾರ್ ಅವರು ಸಲಹೆ ನೀಡಿದರು.       ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ(ಕಾಸಿಯಾ), ಜಿಲ್ಲಾ ಕೈಗಾರಿಕಾ ಕೇಂದ್ರ, ಮತ್ತಿತರ ಸರ್ಕಾರಿ ಹಾಗೂ ಸರ್ಕಾರೇತರ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ನಗರದ ಗಾಜಿನಮನೆಯಲ್ಲಿಂದು ಏರ್ಪಡಿಸಿದ್ದ “ದಕ್ಷಿಣ ಭಾರತದ ಆಗ್ರೋ ಎಕ್ಸ್‍ಪೋ ಕೃಷಿ ಮತ್ತು ಪೂರಕ ವಸ್ತುಪ್ರದರ್ಶನ” ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನುದ್ದೇಶಿಸಿ ಅವರು ಮಾತನಾಡಿದರು.       ಈ ವಸ್ತುಪ್ರದರ್ಶನಕ್ಕೆ ತಾವು ಭೇಟಿ ನೀಡಿದ ಸಂದರ್ಭದಲ್ಲಿ ಎಷ್ಟೋ ಮಳಿಗೆಗಳಲ್ಲಿರುವ ಕೈಗಾರಿಕೋದ್ಯಮಿಗಳು ತಮ್ಮ ಉತ್ಪನ್ನದ ಪೇಟೆಂಟ್ ಪಡೆಯದಿಲ್ಲದಿರುವುದು ಕಂಡುಬಂತು. ಒಂದು ದೇಶವನ್ನು ಅಭಿವೃದ್ಧಿ ದೇಶವೆಂದು ವಿಶ್ವ ಮಟ್ಟದಲ್ಲಿ ಪರಿಗಣಿಸಬೇಕಾದರೆ ಹೆಚ್ಚಿನ ಸಂಖ್ಯೆಯಲ್ಲಿ ಪೇಟೆಂಟ್ ಆಗಿರುವ ಅಂಶವನ್ನೂ ಸಹ ಗಣನೆಗೆ ತೆಗೆದುಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ಉದ್ಯಮಿಗಳು ತಮ್ಮ ಹೊಸ ಆವಿಷ್ಕಾರ…

ಮುಂದೆ ಓದಿ...

ಕಪ್ಪುಪಟ್ಟಿ ಧರಿಸಿ ಡಿಸಿಸಿ ಬ್ಯಾಂಕ್ ನೌಕರರ ಪ್ರತಿಭಟನೆ!

ತುಮಕೂರು:       ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‍ನ್ನು ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಸೂಪರ್ ಸೀಡ್ ಮಾಡಿರುವ ಸರ್ಕಾರದ ಕ್ರಮವನ್ನು ಖಂಡಿಸಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಡಿಸಿಸಿ ಬ್ಯಾಂಕ್ ನೌಕರರು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.       ನಗರದ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಸೇರಿದಂತೆ ತಾಲ್ಲೂಕು ಕೇಂದ್ರ, ಹೋಬಳಿ ಕೇಂದ್ರಗಳ ಶಾಖೆ ಮುಂಭಾಗ ಕಪ್ಪುಪಟ್ಟಿ ಧರಿಸಿ ಜಮಾಯಿಸಿದ ಬ್ಯಾಂಕ್ ನೌಕರರು ಬ್ಯಾಂಕ್‍ನ ಆಡಳಿತ ಮಂಡಳಿಯನ್ನು ರದ್ದುಮಾಡಿ ಸೂಪರ್ ಸೀಡ್ ಮಾಡಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಹಾಗೂ ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು.       ಪ್ರತಿಭಟನಾಕಾರರನ್ನು ಉದ್ದೇಶಿಸಿ ಡಿಸಿಸಿ ಬ್ಯಾಂಕ್ ನೌಕರರ ಯೂನಿಯನ್ ಕಾರ್ಯದರ್ಶಿ ಮಧುಸೂದನ್ ಮಾತನಾಡಿ, ಕೂಡಲೇ ರದ್ದುಪಡಿಸಿರುವ ಡಿಸಿಸಿ ಬ್ಯಾಂಕ್ ಆಡಳಿತ…

ಮುಂದೆ ಓದಿ...

ಡಿಸಿಸಿ ಬ್ಯಾಂಕ್ ಸೂಪರ್‍ಸೀಡ್ ಆಡಳಿತಾಧಿಕಾರಿಯಾಗಿ ಡಿಸಿ ನೇಮಕ

ತುಮಕೂರು:       ತುಮಕೂರು ಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿಯನ್ನು ವಜಾ(ಸೂಪರ್‍ಸೀಡ್)ಗೊಳಿಸಿ ತಮ್ಮನ್ನು ಒಂದು ವರ್ಷದ ಅವಧಿಗೆ ಬ್ಯಾಂಕಿನ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ಬೆಂಗಳೂರು ವಿಭಾಗದ ಸಹಕಾರ ಸಂಘಗಳ ಜಂಟಿ ನಿಬಂಧಕರು ಜುಲೈ 19ರಂದು ಹೊರಡಿಸಿರುವ ಆದೇಶದನ್ವಯ ಜುಲೈ 20ರ ಸಂಜೆ ಆಡಳಿತಾಧಿಕಾರಿಯ ಸ್ವಯಂ ಪ್ರಭಾರವನ್ನು ವಹಿಸಿಕೊಂಡಿದ್ದೇನೆ ಎಂದು ಜಿಲ್ಲಾಧಿಕಾರಿ ಡಾ|| ಕೆ. ರಾಕೇಶ್‍ಕುಮಾರ್ ಅವರು ತಿಳಿಸಿದರು.          ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ಆಗಿರುವ ಹಿನ್ನೆಲೆಯಲ್ಲಿ ಬ್ಯಾಂಕಿನ ಮುಂದಿನ ಕಾರ್ಯಚಟುವಟಿಕೆಗಳನ್ನು ರೂಪಿಸುವ ಬಗ್ಗೆ ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದರು.        ಸೂಪರ್ ಸೀಡ್ ಮಾಡಲು ಕಾರಣವೇನೆಂದು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು 6 ಪುಟಗಳನ್ನೊಳಗೊಂಡ ಜಂಟಿ ನಿಬಂಧಕರ ಆದೇಶದಲ್ಲಿ ಪ್ರತ್ಯೇಕವಾಗಿ ಕಾರಣವೇನೆಂದು ತಿಳಿಸಿಲ್ಲ. ಆದರೆ ಬ್ಯಾಂಕಿನ ಹಣಕಾಸು ವ್ಯವಹಾರದಲ್ಲಿ ಲೋಪವಾಗಿರುವ…

ಮುಂದೆ ಓದಿ...