ಕಬ್ಬಿಣಾಂಶದ ಮಾತ್ರೆ ನುಂಗಿ 39 ವಿದ್ಯಾರ್ಥಿಗಳು ಅಸ್ವಸ್ಥ

ಗುಬ್ಬಿ :      ತಾಲ್ಲೂಕಿನ ಎಸ್.ಕೊಡಗೀಹಳ್ಳಿ ಗ್ರಾಮದ ಶ್ರೀನಿವಾಸ ಪ್ರೌಢಶಾಲೆಯ 39 ವಿದ್ಯಾರ್ಥಿಗಳು ಹೊಟ್ಟೆನೋವು ಮತ್ತು ವಾಂತಿಯಿಂದ ಅಸ್ವಸ್ಥರಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು.       ಶಾಲೆಯ ವಿದ್ಯಾರ್ಥಿಗಳಿಗೆ ಮಂಗಳವಾರ ಕಬ್ಬಿಣಾಂಶದ ಮಾತ್ರೆಗಳನ್ನು ನೀಡಲಾಗಿತ್ತು. ಅದನ್ನು ನುಂಗಿದ ಕಾರಣ ನಮ್ಮ ಮಕ್ಕಳಿಗೆ ವಾಂತಿ ಮತ್ತು ಹೊಟ್ಟೆ ನೋವು ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ ಎಂದು ಮಕ್ಕಳ ಪೋಷಕರು ತಿಳಿಸಿದ್ದಾರೆ. ಮಾತ್ರೆ ಸೇವಿಸಿದ ವಿದ್ಯಾರ್ಥಿಗಳು ಶಾಲೆಯಿಂದ ಮನೆಗೆ ಬಂದಾಗಲೆ ಹೊಟ್ಟೆನೋವು ಮತ್ತು ವಾಂತಿಯಿಂದ ಬಳಲುತ್ತಿದ್ದರು. ಕೂಡಲೆ ಪೋಷಕರು ಸಮೀಪದ ಆಸ್ಪತ್ರೆಗಳಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ.       ಬೆಳಗ್ಗೆ ಶಾಲೆಗೆ ಬಂದಾಗ ಮತ್ತಷ್ಟು ವಿದ್ಯಾರ್ಥಿಗಳು ಅಸ್ವಸ್ಥರಾದ ಹಿನ್ನೆಲೆಯಲ್ಲಿ ಕೂಡಲೆ ಆಂಬ್ಯುಲೆನ್ಸ್ ವಾಹನಗಳಲ್ಲಿ ತಾಲ್ಲೂಕು ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಯಿತು. ತ್ವರಿತವಾಗಿ ಚಿಕಿತ್ಸೆ ನೀಡಿದ ಕಾರಣ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಯಾವುದೇ ರೀತಿಯ…

ಮುಂದೆ ಓದಿ...

ದಲಿತರ ಮೇಲಿನ ಹಲ್ಲೆ-ದೌರ್ಜನ್ಯ ಖಂಡಿಸಿ ಪ್ರತಿಭಟನೆ

ತುಮಕೂರು :       ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ನಿಗಮಗಳ ವತಿಯಿಂದ ಗಂಗಾ ಕಲ್ಯಾಣ, ಸ್ವಯಂ ಉದ್ಯೋಗಕ್ಕೆ ಸಹಾಯಧನ ಮತ್ತಿತರ ಸೌಲಭ್ಯಗಳನ್ನು ಅರ್ಹತೆಗನುಗುಣವಾಗಿ ನೀಡುವಂತೆ ಒತ್ತಾಯಿಸಿ ಹಾಗೂ ದಲಿತ ಮೇಲಿನ ಹಲ್ಲೆ, ದೌರ್ಜನ್ಯವನ್ನು ಖಂಡಿಸಿ ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ದಲಿತ ಹಕ್ಕುಗಳ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.       ಪ್ರತಿಭಟನೆಯನ್ನು ಉದ್ದೇಶಿ ಮಾತನಾಡಿದ ದಲಿತ ಹಕ್ಕುಗಳ ಸಮಿತಿ ರಾಜ್ಯ ಸಂಚಾಲಕ ಗೋಪಾಲಕೃಷ್ಣ ಹರಳಹಳ್ಳಿ, ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಳವಾಗಿದ್ದು ಸರ್ಕಾರ ಈ ದೌರ್ಜನ್ಯ ಪ್ರಕರಣಗಳ ಆರೋಪಿಗಳಿಗೆ ಶಿಕ್ಷೆ ನೀಡುವಲ್ಲಿ ವಿಫಲವಾಗಿದೆ. ತುಮಕೂರು ಜಿಲ್ಲೆಯ ಮಲ್ಲೇಕಾವು ಗ್ರಾಮದಲ್ಲಿ ದಲಿತರು ದೇವಾಲಯಕ್ಕೆ ಪ್ರವೇಶ ಮಾಡಿದರೆಂದು ಜಗದೀಶ್ ಎಂಬುವರ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡಲಾಗಿದೆ. ಆದರೂ ಆರೋಪಿಗಳನ್ನು ಇದುವರೆಗೂ ಬಂಧಿಸಿಲ್ಲ. ಕೂಡಲೇ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.      …

ಮುಂದೆ ಓದಿ...