4 ನೇ ಮುಖ್ಯಮಂತ್ರಿಯಾಗಿ ಬಿಎಸ್ ಯಡಿಯೂರಪ್ಪ ಪ್ರಮಾಣ!!

ಬೆಂಗಳೂರು:       ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ದೇವರ ಹೆಸರಿನಲ್ಲಿ ರಾಜ್ಯದ ಮುಖ್ಯಮಂತ್ರಿ ಆಗಿ ನಾಲ್ಕನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ.       ರಾಜಭವನದ ಗಾಜಿನ ಮನೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿ.ಎಸ್.ಯಡಿಯೂರಪ್ಪ ಹಸಿರು ಶಾಲು ಹೊದ್ದು, ಗೋಧೋಳಿ ಲಗ್ನದಲ್ಲಿ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ವಜುಬಾಯಿ ವಾಲ ಅವರು ಬಿಎಸ್ ಯಡಿಯೂರಪ್ಪ ಅವರಿಗೆ ಪ್ರತಿಜ್ಞಾವಿಧಿಯನ್ನು ಭೋದಿಸಿದರು.        ಕಾರ್ಯಕ್ರಮದಲ್ಲಿ ರಾಜ್ಯದ ಬಿಜೆಪಿ ನಾಯಕರು ಸೇರಿದಂತೆ ಪಕ್ಷದ ಅನೇಕರು ಪಾಲ್ಗೊಂಡು ಯಡಿಯೂರಪ್ಪ ಅವರಿಗೆ ಶುಭಕೋರಿದರು.       ಪದಗ್ರಹಣ ಸಮಾರಂಭ ಹಿನ್ನೆಲೆಯಲ್ಲಿ ರಾಜಭವನದ ಸುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು, ಖಾಕಿಪಡೆ ಭದ್ರತೆ ಕೈಗೊಂಡಿದೆ. ಇನ್ನು ರಾಜಭವನ ಮಾರ್ಗವಾಗಿ ತೆರಳುವ ವಾಹನಗಳಿಗೆ ಬದಲು ಮಾರ್ಗ ವ್ಯವಸ್ಥೆ ಕಲ್ಪಿಸಲಾಗಿದೆ.

ಮುಂದೆ ಓದಿ...

ಬೀದಿ ಬದಿ ವ್ಯಾಪಾರಿಗಳಿಗೆ ಪರ್ಯಾಯ ಸ್ಥಳಕ್ಕಾಗಿ ಡಿಸಿ ಪರಿಶೀಲನೆ

ಹುಳಿಯಾರು:       ಪಟ್ಟಣದ ಬಸ್ ನಿಲ್ದಾಣದಲ್ಲಿ ಎರಡ್ಮೂರು ದಶಕಗಳಿಂದಲೂ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ನಮ್ಮನ್ನು ತೆರವು ಗೊಳಿಸಿ 15 ದಿನವಾಗಿದ್ದು ಜೀವನ ನಿರ್ವಹಣೆ ಕಷ್ಟವಾಗಿದ್ದು ಅತಂತ್ರ ಸ್ಥಿತಿಯಲ್ಲಿರುವ ನಮಗೆ ಪರ್ಯಾಯ ಜಾಗ ಕಲ್ಪಿಸಿ ವ್ಯಾಪಾರಕ್ಕೆ ಅನುವು ಮಾಡಿಕೊಡಬೇಕೆಂದು ಬಸ್ ನಿಲ್ದಾಣದ ಫುಟ್‍ಪಾತ್ ವ್ಯಾಪಾರಿಗಳು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು.       ಕಳೆದ ವಾರದಿಂದಲೂ ತುಮಕೂರಿಗೆ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಬರುತ್ತಿದ್ದ ಫುಟ್ಪಾತ್ ವ್ಯಾಪಾರಿಗಳಿಗೆ ತಾವೇ ಖುದ್ದಾಗಿ ಹುಳಿಯಾರಿನ ಸ್ಥಳಕ್ಕೆ ಬಂದು ಪರಿಶೀಲಿಸುವ ಆಶ್ವಾಸನೆ ನೀಡಿದ್ದ ಹಿನ್ನೆಲೆಯಲ್ಲಿ ಡಾ. ಕೆ.ರಾಕೇಶ್ ಕುಮಾರ್ ಇಂದು ಹುಳಿಯಾರು ಪಟ್ಟಣ ಪಂಚಾಯಿತಿ ಕಾರ್ಯಾಲಯಕ್ಕೆ ಆಗಮಿಸಿ ಫುಟ್ಪಾತ್ ವ್ಯಾಪಾರಿಗಳ ಅಹವಾಲು ಆಲಿಸಿದರು.       ತಮ್ಮ ಸಮಸ್ಯೆ ಬಗ್ಗೆ ಕಣ್ಣೀರಿಟ್ಟ ಫುಟ್ಪಾತ್ ವ್ಯಾಪಾರಿಗಳು ಭಾವೋದ್ವೇಗದಿಂದ ಜಿಲ್ಲಾಧಿಕಾರಿಗಳ ಕಾಲಿಗೆ ಬಿದ್ದ ಘಟನೆ ಕೂಡ ಜರಗಿತು. ನೂರಕ್ಕೂ ಹೆಚ್ಚು…

ಮುಂದೆ ಓದಿ...