ಇಂದಿರಾ ಕ್ಯಾಂಟೀನ್‍ಗೆ ಪಾಲಿಕೆ ಆಯುಕ್ತರ ದಿಢೀರ್ ಭೇಟಿ

ತುಮಕೂರು :       ತುಮಕೂರು ನಗರದ ರೈಲುನಿಲ್ದಾಣದ ರಸ್ತೆಯಲ್ಲಿರುವ ಇಂದಿರಾ ಕ್ಯಾಂಟೀನ್ ಹಾಗೂ ಮಾಸ್ಟರ್ ಕಿಚನ್‍ಗೆ ತುಮಕೂರು ಮಹಾನಗರ ಪಾಲಿಕೆ ಆಯುಕ್ತ ಟಿ.ಭೂಬಾಲನ್ ಅವರು ಮಂಗಳವಾರ ಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲನೆ ನಡೆಸಿದರು.      ಇಲ್ಲಿ ಇಂದಿರಾ ಕ್ಯಾಂಟೀನ್ ಜೊತೆಗೆ ಮಾಸ್ಟರ್ ಕಿಚನ್ ಇದೆ. ನಗರದಲ್ಲಿರುವ ಎಲ್ಲ ನಾಲ್ಕು ಇಂದಿರಾ ಕ್ಯಾಂಟೀನ್‍ಗಳಿಗೂ ಈ ಮಾಸ್ಟರ್ ಕಿಚನ್‍ನಿಂದಲೇ ಬೆಳಗಿನ ಉಪಹಾರ ಮತ್ತು ಮಧ್ಯಾಹ್ನದ ಊಟ ಹಾಗೂ ರಾತ್ರಿಯ ಊಟ ತಯಾರಾಗಿ ಸರಬರಾಜಾಗುತ್ತದೆ. ಆಯುಕ್ತರು ಇವೆರಡನ್ನೂ ಪರಿವೀಕ್ಷಣೆ ಮಾಡಿದರು. ಮಧ್ಯಾಹ್ನ 12 ಗಂಟೆ ಸುಮಾರಿಗೆ ಇಂದಿರಾ ಕ್ಯಾಂಟೀನ್‍ಗೆ ದಿಢೀರನೆ `ಭೂಬಾಲನ್ ಅವರು ಆಗಮಿಸಿದರು. ಪಾಲಿಕೆ ಆರೋಗ್ಯಾಧಿಕಾರಿ ಡಾ. ನಾಗೇಶ್ ಕುಮಾರ್, ಪರಿಸರ ಇಂಜಿನಿಯರ್ಗಳಾದ ಮೃತ್ಯುಂಜಯ ಮತ್ತು ನಿಖಿತಾ, ಹೆಲ್ತ್‍ಇನ್ಸ್‍ಪೆಕ್ಟರ್ ರುದ್ರೇಶ್ ಜೊತೆಯಲ್ಲಿದ್ದರು. ಊಟ ಮಾಡಿದ ಆಯುಕ್ತರು:       ಆಗಷ್ಟೇ ಕ್ಯಾಂಟೀನ್ ಸಿಬ್ಬಂದಿ…

ಮುಂದೆ ಓದಿ...

ಉದಾಸೀನವೇ ಡೆಂಗ್ಯು ಪ್ರಕರಣ ಹೆಚ್ಚಾಗಲು ಕಾರಣ

ತುಮಕೂರು:       ಡೆಂಗ್ಯು, ಚಿಕುನ್‍ಗುನ್ಯಾ, ಮಲೇರಿಯಾ, ನಿಫಾ ಮತ್ತಿತರ ಸಾಂಕ್ರಾಮಿಕ ರೋಗಗಳು ಹೆಚ್ಚಾಗಲು ನಮ್ಮಲ್ಲಿರುವ ಉದಾಸೀನ ಮನೋಭಾವವೇ ಕಾರಣ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ|| ಸಿದ್ದೇಗೌಡ ಬೇಸರ ವ್ಯಕ್ತಪಡಿಸಿದರು.        ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಸಾರ್ವಜನಿಕ ಶಿಕ್ಷಣ ಇಲಾಖೆ, ನರ್ಸಿಂಗ್ ಕಾಲೇಜ್, ಎನ್‍ಸಿಸಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿಗಳ ಸಂಯುಕ್ತಾಶ್ರಯದಲ್ಲಿ ಮಹಾನಗರ ಪಾಲಿಕೆ ಆವರಣದಲ್ಲಿಂದು ಹಮ್ಮಿಕೊಂಡಿದ್ದ “ಡೆಂಗ್ಯೂ ವಿರೋಧಿ ಮಾಸಾಚರಣೆ ಕಾರ್ಯಕ್ರಮ”ವನ್ನುದ್ದೇಶಿಸಿ ಅವರು ಮಾತನಾಡಿದರು.       ಡೆಂಗ್ಯು ಮತ್ತಿತರ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಹಾಗೂ ರೋಗ ಹರಡದಂತೆ ಅನುಸರಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಜನಸಾಮಾನ್ಯರಿಗೆ ತಿಳುವಳಿಕೆ ಇದ್ದರೂ ಸಹ ಉದಾಸೀನ ನಡವಳಿಕೆ ತೋರುತ್ತಿದ್ದಾರೆ. ರೋಗ ತಗುಲಿದಾಗ ವಾಸಿ ಮಾಡುವುದಕ್ಕಿಂತ ರೋಗ ಹರಡದಂತೆ ನಿಯಂತ್ರಿಸುವುದೇ ಬಹುಪಾಲು…

ಮುಂದೆ ಓದಿ...