ತಂಬಾಕು ಕಾರ್ಯಾಚರಣೆಯಿಂದ 1,69,800 ರೂ.ದಂಡ ಸಂಗ್ರಹ

ತುಮಕೂರು :       ತುಮಕೂರು ಜಿಲ್ಲೆಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರ, ಅಂಗಡಿಗಳಲ್ಲಿ ನಾಮಫಲಕ ಪ್ರದರ್ಶಿಸದಿರುವವರ, ತಂಬಾಕು ಉತ್ಪನ್ನಗಳನ್ನು ಜಾಹಿರಾತು ಮಾಡುವವರ, ಶಾಲಾ ಆವರಣಗಳಲ್ಲಿ ತಂಬಾಕು ಉತ್ಪನ್ನಗಳ ವಹಿವಾಟು ನಡೆಸುತ್ತಿರುವವರ ವಿರುದ್ಧ ಸತತವಾಗಿ ನಡೆಸಿದ 25 ದಿನಗಳ ಕಾರ್ಯಾಚರಣೆಯಲ್ಲಿ ಒಟ್ಟು 1403 ಪ್ರಕರಣ ದಾಖಲಿಸಿ 1,69,800 ರೂ.ಗಳ ದಂಡವನ್ನು ಸಂಗ್ರಹಿಸಲಾಗಿದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ರವಿಪ್ರಕಾಶ ಎಂ.ಆರ್ ತಿಳಿಸಿದ್ದಾರೆ.       ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಗೂ ಸಮಾಜ ಕಾರ್ಯಕರ್ತ ಪುಂಡಲೀಕ ಲಕಾಟಿ, ಆರೋಗ್ಯ ಇಲಾಖೆ ಸಿಬ್ಬಂದಿ ನರಸಿಂಹರಾಜು, ತಾಲೂಕು ಆರೋಗ್ಯಾಧಿಕಾರಿಗಳು ಸೇರಿದಂತೆ ತಾಲೂಕಿನ ಸಹಾಯಕ ಸಿಬ್ಬಂದಿಗಳು ಹಾಜರಿದ್ದರು.

ಮುಂದೆ ಓದಿ...

ಹಾಲು ಒಕ್ಕೂಟದ ಬೆಳವಣಿಗೆಯಲ್ಲಿ ಉತ್ಪಾದಕರದು ಪ್ರಮುಖ ಪಾತ್ರ!!

ತುಮಕೂರು :       ಜಿಲ್ಲೆಯಲ್ಲಿ ತೀವ್ರ ಬರಗಾಲವಿದ್ದರೂ ಸಹ ತುಮಕೂರು ಸಹಕಾರಿ ಹಾಲು ಒಕ್ಕೂಟದ ಹಾಲು ಶೇಖರಣೆ ದಿನೇ ದಿನೇ ನಿರೀಕ್ಷೆಗೂ ಮೀರಿ ಹೆಚ್ಚಾಗುತ್ತಿದ್ದು 2018-19 ನೇ ಸಾಲಿನಲ್ಲಿ ದಿನವಹಿ ಸರಾಸರಿ 6,71,712 ಲೀಟರ್ ಶೇಖರಣೆಯಾಗಿರುತ್ತದೆ. ಜೂನ್ 18 ರಂದು 8,01,313 ಲೀಟರ್ ಹಾಲು ಶೇಖರಿಸಿ ಸರ್ವಕಾಲಿಕ ದಾಖಲೆ ನಿರ್ಮಿಸಿದೆ. ಒಕ್ಕೂಟದಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿಪಡಿಸಿಕೊಂಡಿರುವುದರಿಂದ ಮತ್ತು ಮಾರುಕಟ್ಟೆ ವಿಸ್ತರಣೆ ಮಾಡಿಕೊಂಡಿರುವುದರಿಂದ ಅಧಿಕ ಹಾಲು ಶೇಖರಣೆಯಾದರೂ ಸಹ ಡೇರಿಯ ನಿರ್ವಹಣೆಗೆ ಯಾವುದೇ ತೊಂದರೆಯಾಗಿರುವುದಿಲ್ಲ. ಹಾಲು ಉತ್ಪಾದಕರಿಗೆ ಕಾಲಕಾಲಕ್ಕೆ ಬಟವಾಡೆ, ದೊರೆಯಬಹುದಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು, ಹಾಲು ಉತ್ಪಾದಕರು ಈ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ತಾವು ಸಹ ಆರ್ಥಿಕವಾಗಿ ಸದೃಢವಾಗುವುದಲ್ಲದೇ ಒಕ್ಕೂಟದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸಿರುತ್ತಾರೆ ಎಂದು ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ ಮಹಾಲಿಂಗಯ್ಯ ತಿಳಿಸಿದ್ದಾರೆ.       ಒಕ್ಕೂಟದ ಮಾರಾಟದದ ಜಾಲವನ್ನು ಸಹ…

ಮುಂದೆ ಓದಿ...

ಪ್ರೌಢಶಾಲೆ ಮಕ್ಕಳಲ್ಲಿ ಪ್ರಾಚ್ಯಪ್ರಜ್ಞೆ ಮೂಡಿಸಲು ಸ್ಪರ್ಧೆಗಳನ್ನು ಏರ್ಪಡಿಸುವಂತೆ ಎಡಿಸಿ ನಿರ್ದೇಶನ

ತುಮಕೂರು:       ಜಿಲ್ಲೆಯಲ್ಲಿರುವ ಕಲೆ, ಸಂಸ್ಕೃತಿ, ಸಾಮಾಜಿಕ ಜೀವನಕ್ಕೆ ಸಂಬಂಧಪಟ್ಟಂತಹ ಪುರಾತನ ಕಾಲದಲ್ಲಿ ಪ್ರಾಚ್ಯವಾಗಿ ಅಳಿದು ಉಳಿದಿರುವ ಕೋಟೆ-ಕೊತ್ತಲಗಳ ಕುರಿತು ಮಕ್ಕಳಿಗೆ ಪ್ರಾಚ್ಯ ಪ್ರಜ್ಞೆ ಮೂಡಿಸುವ ಸಲುವಾಗಿ ಕಿರುಚಿತ್ರ/ಸಾಕ್ಷ್ಯಚಿತ್ರ/ಭಾಷಣದ ರೂಪದಲ್ಲಿ ಸ್ಪರ್ಧೆಗಳನ್ನು ಏರ್ಪಡಿಸುವಂತೆ ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.        ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ವಿವಿಧ ಪ್ರಾಚ್ಯ ಸ್ಥಳಗಳ ಕುರಿತು ಭಾಷಣ, ಚಿತ್ರಕಲೆ ಸ್ಪರ್ಧೆ, ಚರ್ಚಾಸ್ಪರ್ಧೆ ರಸಪ್ರಶ್ನೆ ಕಾರ್ಯಕ್ರಮ ಕೈಗೊಂಡು ಈ ತಿಂಗಳ 15ರೊಳಗೆ ತಾಲ್ಲೂಕು ಮಟ್ಟದ ಸ್ಪರ್ಧೆಗಳನ್ನು ಏರ್ಪಡಿಸಿ, ತಿಂಗಳ ಕೊನೆಯ ವಾರದಲ್ಲಿ ಜಿಲ್ಲಾಮಟ್ಟದ ಸ್ಪರ್ಧೆ ಏರ್ಪಡಿಸಿ ವಿಜೇತ ಮಕ್ಕಳಿಗೆ ಜಿಲ್ಲಾಮಟ್ಟದಲ್ಲಿ ಪ್ರಶಸ್ತಿ ಪ್ರದಾನ ಮಾಡುವಂತೆ ಸೂಚಿಸಿದರು.        ಕರ್ನಾಟಕವು ಪ್ರಾಗೈತಿಕ ಇತಿಹಾಸದ ಪರಂಪರೆ ಹೊಂದಿರುವ ನಾಡು. ಕದಂಬರು, ಗಂಗರು, ಚಾಲುಕ್ಯರು,…

ಮುಂದೆ ಓದಿ...