ತುಮಕೂರು : ಮಹಿಳೆಯರು, ಮಕ್ಕಳ ರಕ್ಷಣೆಗೆ `ಕಲ್ಪತರು ಪಡೆ’

ತುಮಕೂರು:       ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಗಟ್ಟಲು ನಲವತ್ತು ವರ್ಷಕ್ಕಿಂತ ಕಡಿಮೆ ವಯಸ್ಸಿನ 40 ಮಂದಿ ಮಹಿಳಾ ಪೊಲೀಸ್ ಸಿಬ್ಬಂದಿ ಒಳಗೊಂಡ `ವಿಶೇಷ ಕಲ್ಪತರು ಪಡೆ’ಯನ್ನು ಜಿಲ್ಲಾ ಪೊಲೀಸ್ ಇಲಾಖೆ ರಚಿಸಿದೆ.       ಈ ವಿಶೇಷ ಪಡೆ ಆಯಾ ಪೊಲೀಸ್ ಉಪ ವಿಭಾಗ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲಿವೆ. ಪ್ರಮುಖವಾಗಿ ಬಂದೋಬಸ್ತ್ ಕರ್ತವ್ಯ, ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ಪ್ರಕರಣ ಮೇಲೆ ತುರ್ತು ನಿಗಾವಹಿಸಿ ಅಗತ್ಯ ಕಾನೂನು ಕ್ರಮ ಕೈಗೊಳ್ಳುತ್ತದೆ. ಮಹಿಳೆಯರು ಮತ್ತು ಮಕ್ಕಳಿಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ತಿಳಿಸಿದ್ದಾರೆ.       ಈ ತಂಡಕ್ಕೆ ಜು.26ರಿಂದ ಆ.8ರವರೆಗೆ ಒಟ್ಟು 11 ದಿನ ವಿವಿಧ ರೀತಿಯ ತರಬೇತಿ ನೀಡಲಾಗಿದೆ. ಮೊದಲ 5 ದಿನ ದುರ್ಗಾ ಸಂಸ್ಥೆಯ ಸಂಸ್ಥಾಪಕರಾದ…

ಮುಂದೆ ಓದಿ...