ಮಧುಗಿರಿಗೆ ಅಗತ್ಯಕ್ಕಿಂತ ಹೆಚ್ಚು ಹೇಮೆ – ಜಿಎಸ್‍ಬಿ ಭರವಸೆ

ತುಮಕೂರು:       ಕೊರಟಗೆರೆ ಮತ್ತು ಮಧುಗಿರಿ ತಾಲ್ಲೂಕಿಗೆ ಹೇಮಾವತಿ ಕುಡಿಯುವ ನೀರು ಸರಬರಾಜು ಮಾಡುವ ತುಮಕೂರು ತಾಲ್ಲೂಕು ಬೆಳ್ಳಾವಿ ಹೋಬಳಿ ಬಳ್ಳಾಪುರ ಸಮೀಪವಿರುವ ಪಂಪ್‍ಹೌಸ್‍ನಲ್ಲಿ ಕಳ್ಳರು ಯಂತ್ರೋಪಕರಗಣಳನ್ನು ಕಳವು ಮಾಡಿದ್ದು, ಸೋಮವಾರ ಬೆಳಿಗ್ಗೆ ಸ್ಥಳಕ್ಕೆ ಸಂಸದ ಜಿ.ಎಸ್. ಬಸವರಾಜು ಅವರನ್ನು ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಆರ್.ರಾಜೇಂದ್ರ ಅವರು ಕರೆದೊಯ್ದು ಪರಿಶೀಲನೆ ನಡೆಸಿದರು.       ಈ ವೇಳೆ ಮಾತನಾಡಿದ ಸಂಸದ ಜಿ.ಎಸ್. ಬಸವರಾಜು ಅವರು, ಮಧುಗಿರಿ-ಕೊರಟಗೆರೆಗೆ ಹೇಮಾವತಿ ಕುಡಿಯುವ ನೀರು ಸರಬರಾಜಾಗುವ ತುಮಕೂರು ಗ್ರಾಮಾಂತರದ ಬಳ್ಳಾಪುರ ಪಂಪ್‍ಹೌಸ್‍ನಲ್ಲಿ ಯಂತ್ರೋಪಕರಣಗಳನ್ನು ಕಳ್ಳರು ಕಳವು ಮಾಡಿದ್ದು, ಈಗ ದುರಸ್ಥಿ ಕಾರ್ಯ ನಡೆಯುತ್ತಿದೆ. ಸಂಜೆ ವೇಳೆಗೆ ದುರಸ್ಥಿ ಕಾರ್ಯ ಮುಗಿದು ಕೊರಟಗೆರೆ ಅಗ್ರಹಾರ ಕೆರೆಗೆ ನೀರು ತಲುಪಲಿದ್ದು, ಮಂಗಳವಾರ ಸಂಜೆ ವೇಳೆಗೆ ಮಧುಗಿರಿ ಸಿದ್ಧಾಪುರ ಕೆರೆಗೆ ನೀರು ಹರಿಯಲಿದೆ ಎಂದು ತಿಳಿಸಿದರು.      …

ಮುಂದೆ ಓದಿ...