ರೈಲ್ವೆ ಮಾರ್ಗ ನಿರ್ಮಾಣ : ಭೂಮಿ ಕಳೆದುಕೊಳ್ಳುವವರಿಗೆ ಉತ್ತಮ ಬೆಲೆ-ಸಂಸದ

ತುಮಕೂರು:       ತುಮಕೂರು-ರಾಯದುರ್ಗ ಹಾಗೂ ತುಮಕೂರು-ದಾವಣಗೆರೆ ರೈಲ್ವೆ ಯೋಜನೆಗೆ ಜಮೀನು ಕಳೆದುಕೊಳ್ಳುವ ರೈತರಿಗೆ ಉತ್ತಮ ಬೆಲೆಯನ್ನು ನಿಗಧಿಪಡಿಸಲಾಗುವುದು. ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯವಾಗಲು ಅವಕಾಶ ನೀಡುವುದಿಲ್ಲ ಎಂದು ಸಂಸದ ಜಿ.ಎಸ್.ಬಸವರಾಜ್ ಅವರು ತಿಳಿಸಿದರು.       ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ತುಮಕೂರು-ರಾಯದುರ್ಗ ಹಾಗೂ ತುಮಕೂರು-ದಾವಣಗೆರೆ ರೈಲ್ವೆ ಯೋಜನೆಯ ಉದ್ದೇಶಕ್ಕಾಗಿ ಭೂಸ್ವಾಧೀನಪಡಿಸಿಕೊಳ್ಳಲಾದ ಜಮೀನುಗಳ ಭೂ ಮಾಲೀಕರಿಗೆ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ಸೂಕ್ತ ಪರಿಹಾರದ ಹಕ್ಕು ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾಯ್ದೆ ಕಲಂ 17ರನ್ವಯ ಸಿಗಬಹುದಾದ ಪ್ರಯೋಜನಗಳ ಕುರಿತ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.       ರೈಲ್ವೆ ಮಾರ್ಗ ನಿಮ್ಮ ಗ್ರಾಮ ಅಥವಾ ಜಮೀನಿನಲ್ಲಿ ಹಾದು ಹೋಗುವುದರಿಂದ ನಿಮಗೆ ಅನುಕೂಲವಾಗಲಿದೆ. ತಂಟೆ ತಕರಾರುಗಳನ್ನು ಮಾಡಬೇಡಿ, ತಂಟೆ ತಕರಾರುಗಳಿದ್ದರೆ ಪ್ರಾರಂಭದಲ್ಲಿ ಪರಿಹಾರ ಮಾಡಿಕೊಳ್ಳಿ. ಇವತ್ತಿಗೆ ರೈಲ್ವೆ ಮಾರ್ಗ ನಿರ್ಮಾಣ ಕಾಮಗಾರಿ…

ಮುಂದೆ ಓದಿ...

ಸಮಸ್ಯೆಗಳ ಪರಿಹಾರಕ್ಕೆ ಶರಣರ ತತ್ವಗಳಿಂದ ಮಾತ್ರ ಸಾಧ್ಯ-ಸಿದ್ಧಲಿಂಗಶ್ರೀ

ತುಮಕೂರು:       ಶರಣರ ಜೀವನ, ಮೌಲ್ಯಗಳು ಹಾಗೂ ವಚನಗಳು ಕುರಿತು ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಬುಧವಾರ ನಗರದ ಟೌನ್‍ಹಾಲ್ ವೃತ್ತದಲ್ಲಿ ಸಹಮತ ವೇದಿಕೆ ವತಿಯಿಂದ ಸಾಣೆಹಳ್ಳಿ ತರಳಬಾಳು ಶಾಖಾ ಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಮತ್ತೆ ಕಲ್ಯಾಣ ಕಾರ್ಯಕ್ರಮದ ‘ಸಾಮರಸ್ಯ ನಡಿಗೆ’ಗೆ ವಿವಿಧ ಮಠಾಧೀಶರು ಚಾಲನೆ ನೀಡಿದರು.       ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳು ಮಾತನಾಡಿ, ಇಂದು ನಾಡಿನಾದ್ಯಂತ ಮತ್ತೆ ಕಲ್ಯಾಣ ವಿಶಿಷ್ಠ ಕಾರ್ಯಕ್ರಮವನ್ನು ಪಂಡಿತಾರಾಧ್ಯ ಸ್ವಾಮಿಗಳ ನೇತೃತ್ವದಲ್ಲಿ ಹಮ್ಮಿಕೊಂಡಿದ್ದು, ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಾಮರಸ್ಯದ ನಡೆ, ಸಂವಾದ ಮತ್ತು ಚಿಂತನೆಗಳನ್ನು ಬಿತ್ತುವುದರ ಮುಖಾಂತರ ಬಸವಾದಿ ಶರಣರ ತತ್ವಗಳು ಜನಮನಸ್ಸಿಗೆ ಬಿತ್ತಬೇಕು ಎಂಬ ಉದ್ಧೇಶವನ್ನಿಟ್ಟುಕೊಂಡು ಈ ಪವಿತ್ರ ಕಾರ್ಯ ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದರು.       ಇಂದಿನ…

ಮುಂದೆ ಓದಿ...