ಬೆಸ್ಕಾಂ ಅಭಿಯಂತರರಿಗೆ ಆರ್.ಆರ್. ಸಂಖ್ಯೆ ದಾಖಲೆ ಮತ್ತು ಪರಿಶೀಲನೆಗೆ ಸೂಚನೆ

 ತುಮಕೂರು:       ಕುಡಿಯುವ ನೀರಿನ ಬೋರ್‍ವೆಲ್‍ನ ವಿದ್ಯುತ್ ಸಂಪರ್ಕದ ಆರ್.ಆರ್ (ರೆವೆನ್ಯೂ ರಿಜಿಸ್ಟಾರ್) ಸಂಖ್ಯೆಯನ್ನು ಕಡ್ಡಾಯವಾಗಿ ಬರೆಯಬೇಕು ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ರಮೇಶ್ ತಿಳಿಸಿದರು.       ಆಗಸ್ಟ್ 17 ಶನಿವಾರದಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರೆದಿದ್ದ ಜಿಲ್ಲೆಯ ಬೆಸ್ಕಾಂ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಭಿಯಂತರರು ಹಾಗೂ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳ ಸಮನ್ವಯ ಸಭೆಯಲ್ಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಬೋರ್‍ವೆಲ್ ವಿದ್ಯುತ್ ಸಂಪರ್ಕದ ಮೇಲೆ ಆರ್.ಆರ್. ಸಂಖ್ಯೆಯನ್ನು ಕಡ್ಡಾಯವಾಗಿ ಬರೆಯಬೇಕು. ಆರ್. ಆರ್. ಸಂಖ್ಯೆ ಇಲ್ಲದಿದ್ದರೆ ಕೂಡಲೇ ಅದನ್ನು ಬರೆಸುವ ವ್ಯವಸ್ಥೆ ಮಾಡಿ ಎಂದು ಬೆಸ್ಕಾಂ ಅಭಿಯಂತರರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.        ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕು-6, ಕುಣಿಗಲ್-11 ತಿಪಟೂರು-3, ತುರುವೇಕೆರೆ-2, ಚಿಕ್ಕನಾಯಕನಹಳ್ಳಿ-1, ಮಧುಗಿರಿ-2,…

ಮುಂದೆ ಓದಿ...

 ತುಮಕೂರು : ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಗೋಶಾಲೆ ಆರಂಭ!

 ತುಮಕೂರು:       ತುಮಕೂರು ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇರುವುದರಿಂದ ತುಮಕೂರು ಜಿಲ್ಲಾಡಳಿತ ವತಿಯಿಂದ ಜಿಲ್ಲೆಯ ಈ ಕೆಳಕಂಡ ಸ್ಥಳಗಳಲ್ಲಿ ಗೋಶಾಲೆ ತೆರೆಯಲಾಗಿದೆ.       ಮಧುಗಿರಿ ತಾಲ್ಲೂಕು ಕಸಬಾ ಹೋಬಳಿಯ ಸಿದ್ದಾಪುರದ ಹಿಪ್ಪೆ ತೋಪು,: ತಿಪಟೂರು ತಾಲ್ಲೂಕು ಹೊನ್ನವಳ್ಳಿ ಹೋಬಳಿಯ ಬಾಗವಾಳದ ಮುನಿಯಪ್ಪನ ಆಲದಮರ: ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಕ್ಯಾಮೇನಹಳ್ಳಿ ಆಂಜನೇಯಸ್ವಾಮಿ ದೇವಸ್ಥಾನದ ಆವರಣ: ಶಿರಾ ತಾಲ್ಲೂಕಿನ ಹುಲಿಕುಂಟೆ ಹೋಬಳಿಯ ಗಂಡಿಹಳ್ಳಿ ಮಠ: ತುಮಕೂರು ತಾಲ್ಲೂಕು ಕೋರಾ ಹೋಬಳಿಯ ಚಿಕ್ಕತೊಟ್ಲುಕೆರೆ ಅಟವಿಸ್ವಾಮಿ ಮಠ: ಪಾವಗಡ ತಾಲ್ಲೂಕು ನಿಡಗಲ್ ಹೋಬಳಿಯ ವದನಕಲ್ಲು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಆವರಣ: ತುರುವೇಕೆರೆ ತಾಲ್ಲೂಕು ದಬ್ಬೇಘಟ್ಟ ಹೋಬಳಿಯ ಅರೆಮಲ್ಲೇನಹಳ್ಳಿ ರಂಗನಾಥಸ್ವಾಮಿ ದೇವಸ್ಥಾನದ ಆವರಣ: ಚಿಕ್ಕನಾಯನಕಹಳ್ಳಿ ತಾಲ್ಲೂಕು ಶೆಟ್ಟಿಕೆರೆ ಹೋಬಳಿಯ ಗೋಡೆಕೆರೆ ಶ್ರೀಗುರು ಸಿದ್ದರಾಮೇಶ್ವರ ದೇವಸ್ಥಾನದ ಹಿಂಭಾಗ: ಕುಣಿಗಲ್ ತಾಲ್ಲೂಕು ಹುತ್ರಿದುರ್ಗ ಹೋಬಳಿಯ ಬೆಟ್ಟದಳ್ಳಿ ಮಠದ ಆವರಣದಲ್ಲಿ ಗೋಶಾಲೆಗಳನ್ನು ಆರಂಭಿಸಲಾಗಿದೆ.…

ಮುಂದೆ ಓದಿ...

ಸ್ಮಾರ್ಟ್‍ಸಿಟಿ ಪ್ರಾಜೆಕ್ಟ್ ಮ್ಯಾನೇಜ್‍ಮೆಂಟ್ ಕನ್ಸಲ್ಟೆಂಟ್ಸ್ ಹಾಗೂ ವಿವಿಧ ಕಾಮಗಾರಿಗಳ ಗುತ್ತಿಗೆದಾರರಿಗೆ 65ಲಕ್ಷ ರೂ.ದಂಡ

 ತುಮಕೂರು:       ತುಮಕೂರು ಸ್ಮಾರ್ಟ್‍ಸಿಟಿ ಲಿಮಿಟೆಡ್ ಕಾಮಗಾರಿಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, 1 ಪ್ರಾಜೆಕ್ಟ್ ಮ್ಯಾನೇಜ್‍ಮೆಂಟ್ ಕನ್ಸಲ್ಟೆಂಟ್ಸ್ ಹಾಗೂ 7 ಕಾಮಗಾರಿಗಳ ಗುತ್ತಿಗೆದಾರರಿಗೆ ಒಟ್ಟು 65,09,553 ರೂ.ಗಳ ದಂಡ ವಿಧಿಸಲಾಗಿದೆ.        ತುಮಕೂರು ನಗರವನ್ನು ಸ್ಮಾರ್ಟ್ ನಗರವನ್ನಾಗಿಸುವ ನಿಟ್ಟಿನಲ್ಲಿ ನಗರದಲ್ಲಿ ಸ್ಮಾರ್ಟ್‍ಸಿಟಿ ಲಿಮಿಟೆಡ್ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಪ್ರಾಜೆಕ್ಟ್ ಮ್ಯಾನೇಜ್‍ಮೆಂಟ್ ಕನ್ಸಲ್ಟೆಂಟ್ ರವರು ಕಾಮಗಾರಿಗಳಿಗೆ ಸಂಬಂಧಿಸಿದ ನಕ್ಷೆ ಮತ್ತು ಇತರೆ ವಿವರಗಳನ್ನು ಸರಿಯಾದ ಸಮಯಕ್ಕೆ ನೀಡದೆ ಇರುವುದರಿಂದ ಕಾಮಗಾರಿಗಳ ಪ್ರಗತಿಯಲ್ಲಿ ವಿಳಂಬವಾಗುತ್ತಿದೆ ಎಂದು ಸ್ಮಾರ್ಟ್‍ಸಿಟಿ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಪಾಲಿಕೆ ಆಯುಕ್ತ ಟಿ.ಭೂಬಾಲನ್ ತಿಳಿಸಿದ್ದಾರೆ.       ಸ್ಮಾರ್ಟ್‍ಸಿಟಿ ಪ್ರಾಜೆಕ್ಟ್ ಮ್ಯಾನೇಜ್‍ಮೆಂಟ್ ಕನ್ಸಲ್ಟೆಂಟ್ ಹಾಗೂ ಕಾಮಗಾರಿಗಳ ಗುತ್ತಿಗೆದಾರರಿಗೆ ವಿಧಿಸಿರುವ ದಂಡದ ವಿವರ ಇಂತಿದೆ.         ಕೆ.ಆರ್. ಬಡಾವಣೆಯ ಬಸ್ ನಿಲ್ದಾಣದಿಂದ ರೂರಲ್ ಪೊಲೀಸ್ ಸ್ಟೇಷನ್ ವರೆಗಿನ…

ಮುಂದೆ ಓದಿ...