ತುಮಕೂರು : ಸ್ಮಾರ್ಟ್ ಸಿಟಿ ಕಚೇರಿಗೆ ಸ್ಮಾರ್ಟ್ ಲುಕ್!!

ತುಮಕೂರು:       ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಮಾರ್ಟ್ ಸಿಟಿ ಕಚೇರಿಯು ಸ್ಮಾರ್ಟ್ ಲುಕ್ ಪಡೆದುಕೊಂಡಿರುವುದು ಸಂತಸ ಮೂಡಿಸಿದೆ ಎಂದು ಸ್ಮಾರ್ಟ್ ಸಿಟಿ ಲಿಮಿಟೆಡ್ ಅಧ್ಯಕ್ಷೆ ಡಾ|| ಶಾಲಿನಿ ರಜನೀಶ್ ಖುಷಿ ವ್ಯಕ್ತಪಡಿಸಿದರು.        ಸ್ಮಾರ್ಟ್ ಸಿಟಿ ಕಚೇರಿಯಲ್ಲಿಂದು ನೂತನ ಸಭಾಂಗಣವನ್ನು ಉದ್ಘಾಟಿಸಿದ ನಂತರ ಮಾತನಾಡಿದ ಅವರು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಭೂಬಾಲನ್ ಅವರು ಈ ಕಚೇರಿಗೆ ಹೊಸ ಬದಲಾವಣೆ ತಂದು ಸ್ಮಾರ್ಟ್ ಲುಕ್ ನೀಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ರೀತಿ ಸ್ಮಾರ್ಟ್ ಸಿಟಿ ಯೋಜನೆಯಡಿ ಪ್ರಾರಂಭವಾಗಿರುವ ಕಾಮಗಾರಿಗಳು ತ್ವರಿತವಾಗಿ ಅನುಷ್ಠಾನಗೊಂಡು ನಂಬರ್ ಒನ್ ಸ್ಮಾರ್ಟ್ ನಗರವಾಗುವ ಕಾಲ ದೂರ ಉಳಿದಿಲ್ಲವೆಂದು ಆಶಿಸಿದರು.       ಕಳೆದ ಬಾರಿ ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನಗರದಲ್ಲಿ ಸ್ವಚ್ಛತೆ ಇಲ್ಲದಿರುವ ಬಗ್ಗೆ ಅಧಿಕಾರಿಗಳ ಮೇಲೆ ಸಿಟ್ಟಾಗಿದ್ದು, ನೆನಪಿಸಿಕೊಂಡ ಅವರು ಈ ದಿನ…

ಮುಂದೆ ಓದಿ...

ಮಹಿಳೆಯರ ವಾರ್ಷಿಕ ಆದಾಯ ಹೆಚ್ಚಳ : ಉಸ್ತುವಾರಿ ಕಾರ್ಯದರ್ಶಿಗಳ ಮೆಚ್ಚುಗೆ

ತುಮಕೂರು:       ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ಯಶಸ್ಸು ಕಂಡಿರುವ ಮಹಿಳೆಯರ ವಾರ್ಷಿಕ ಆದಾಯದಲ್ಲಿ ಹೆಚ್ಚಳವಾಗಿರುವುದು ಸಂತಸ ತಂದಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ|| ಶಾಲಿನಿ ರಜನೀಶ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.       ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿಂದು ಸಮಗ್ರ ಕೃಷಿ ಪದ್ಧತಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರೈತರೊಂದಿಗೆ ನಡೆದ ಚರ್ಚೆಯಲ್ಲಿ ರೈತ ಮನವಿಗಳನ್ನು ಆಲಿಸಿ ಮಾತನಾಡಿದ ಅವರು ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಲು ಸರ್ಕಾರದಿಂದ ಸ್ವ-ಸಹಾಯ ಸಂಘದ ಮಹಿಳೆಯರಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ. ಈ ಪದ್ಧತಿಯನ್ನು ಅನುಸರಿಸುವ ಮೂಲಕ ಮುಂದಿನ ದಿನಗಳಲ್ಲಿ ಮಹಿಳೆಯರು ಉತ್ಪಾದಿಸುವ ಆಹಾರ ಪದಾರ್ಥ ಹಾಗೂ ಬೆಳೆಯುವ ಬೆಳೆಗೆ ಮಾರುಕಟ್ಟೆ ಒದಗಿಸುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.       ಚರ್ಚೆಯಲ್ಲಿ ಕೊರಟಗೆರೆ ತಾಲೂಕಿನ ರೈತ ರವಿಕುಮಾರ್ ಮಾತನಾಡಿ ಸಮಗ್ರ ಕೃಷಿ ಯೋಜನೆಯಿಂದ ರೈತರಿಗೆ ಬಹಳಷ್ಟು ಅನುಕೂಲವಾಗುತ್ತಿದೆ.…

ಮುಂದೆ ಓದಿ...