ವೈಜ್ಞಾನಿಕ ಕಸ ವಿಲೇವಾರಿ : ಸ್ಮಾರ್ಟ್ ಸಿಟಿ ವತಿಯಿಂದ ಸಾರ್ವಜನಿಕ ಅರಿವು ಕಾರ್ಯಕ್ರಮ

ತುಮಕೂರು:       ಹಸಿ ಕಸ-ಒಣ ಕಸವನ್ನು ವಿಂಗಡಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಬಗ್ಗೆ ನಗರ ವ್ಯಾಪ್ತಿಯ ಶಾಲಾ ಕಾಲೇಜುಗಳಲ್ಲಿ ಚರ್ಚಾ/ಪ್ರಬಂಧ ಸ್ಪರ್ಧೆ, ಮಕ್ಕಳಿಂದ ಜಾಗೃತಿ ಜಾಥಾ, ವಿದ್ಯಾರ್ಥಿಗಳಿಗಾಗಿ ಸಾಂಸ್ಕøತಿಕ ಕಾರ್ಯಕ್ರಮ, ಪ್ರತೀ ವಾರ್ಡಿನಲ್ಲಿ ಬೀದಿ ನಾಟಕ, ಸ್ಥಳೀಯ ಮಖಂಡರು ಹಾಗೂ ಸ್ವಸಹಾಯ ಗುಂಪಿನ ಸದಸ್ಯರೊಂದಿಗೆ ಗುಂಪು ಚರ್ಚೆ ನಡೆಸುವ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ ಎಂದು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಭೂಬಾಲನ್ ತಿಳಿಸಿದರು.        ಸ್ಮಾರ್ಟ್ ಸಿಟಿ ಕಚೇರಿಯಲ್ಲಿಂದು ಪತ್ರಿಕಾ ಹೇಳಿಕೆ ನೀಡಿದ ಅವರು ಸ್ವಚ್ಛ, ಸುಂದರ ಹಸಿರು ತುಮಕೂರನ್ನಾಗಿಸಲು ಸ್ಮಾರ್ಟ್ ಸಿಟಿ ಲಿಮಿಟೆಡ್, ಮಹಾನಗರ ಪಾಲಿಕೆ ಹಾಗೂ ಭಗೀರಥ ಸಂಸ್ಥೆಯ ಸಹಕಾರದಲ್ಲಿ ಈ ಸಾರ್ವಜನಿಕ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರಲ್ಲದೆ ಸ್ವಚ್ಛತೆ ಕಾಪಾಡಿಕೊಳ್ಳುವ ಬಗ್ಗೆ ನಗರದ ಎಲ್ಲ ಮನೆ-ಮನೆಗೆ ಭೇಟಿ ನೀಡಿ ಕರಪತ್ರ, ಫ್ಲೈಯರ್, ಬ್ಯಾನರ್, ಸ್ಟಿಕರ್, ಪೋಸ್ಟರ್‍ಗಳನ್ನು…

ಮುಂದೆ ಓದಿ...