ರಮೇಶ್ ಜಾರಕಿಹೊಳಿರವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯ

ಪಾವಗಡ :       ವಾಲ್ಮೀಕಿ ನಾಯಕ ಸಮುದಾಯದ ಶ್ರೀರಾಮುಲು ಅಥವಾ ರಮೇಶ್ ಜಾರಕಿಹೊಳಿರವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಓತ್ತಾಯಿಸಿ ವಾಲ್ಮೀಕಿ ನಾಯಕ ಜನಾಂಗದ ಸಂಸ್ಥೆಗಳು ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಮನವಿ ಪತ್ರ ಸಲ್ಲಿಸಿದರು.       ಇದೇ ವೇಳೆ ಮನವಿ ಪತ್ರ ಸಲ್ಲಿಸಿ ವಾಲ್ಮೀಕಿ ಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷರಾದ ಲೋಕೇಶ್ ಪಾಳ್ಳೆಗಾರ್ ಮಾತನಾಡಿ, ಯಡಿಯೂರಪ್ಪನವರು ಲಿಂಗಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಯಕ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ಮತ್ತು 3 ಶಾಸಕರಿಗೆ ಸಚಿವ ಸ್ಥಾನ ನೀಡುವುದಾಗಿ ತಿಳಿಸಿದ್ದು, ಇಂದು ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ನಾಯಕ ಸಮುದಾಯಕ್ಕೆ ಸೂಕ್ತ ಸ್ಥಾನ-ಮಾನ ನೀಡದೇ ಉಪ ಮುಖ್ಯಮಂತ್ರಿ ಸ್ಥಾನವೂ ನೀಡದೇ ಕಡೆಗಣಿಸಲಾಗಿದೆ ಎಂದರು.       ಕರ್ನಾಟಕ ರಾಜ್ಯಾದಾದ್ಯಂತ ನಾಯಕ ಮತ್ತು ಹಿಂದುಳಿದ ಸಮುದಾಯಗಳು ಕೂಡ ಒತ್ತಾಯಿಸಿ ಬೆಂಬಲ ಸೂಚಿಸುತ್ತಿದ್ದು, ರಾಜ್ಯದಲ್ಲಿ 70 ಲಕ್ಷ ನಾಯಕ…

ಮುಂದೆ ಓದಿ...

ಜಿಲ್ಲೆಯ ಜನರಿಗೆ ಕುಡಿಯುವ ನೀರು ಒದಗಿಸುವುದು ನಮ್ಮ ಜವಾಬ್ದಾರಿ-ಸಚಿವ ಮಾಧುಸ್ವಾಮಿ

ತುಮಕೂರು:       ಜಿಲ್ಲೆಯ ಜನರಿಗೆ ಮೊದಲು ಕುಡಿಯುವ ನೀರು ಒದಗಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ ಮಾಧುಸ್ವಾಮಿ ಅವರು ತಿಳಿಸಿದರು.       ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ನಡೆದ ಹೇಮಾವತಿ ನಾಲೆಯಿಂದ ನೀರು ಹರಿಸುವ ಕುರಿತು ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸೆಪ್ಟಂಬರ್ 1ರಿಂದ ಡಿಸೆಂಬರ್ 15ರವರೆಗೆ ಜಿಲ್ಲೆಯ ಕುಡಿಯುವ ನೀರಿನ ಕೆರೆಗಳಿಗೆ ನೀರು ಹರಿಸಲಾಗುವುದು. ಸೆಪ್ಟೆಂಬರ್ 1 ರಿಂದ ಸಿ.ಎಸ್.ಪುರ ಕೆರೆಗೆ ನೀರು ಹರಿಸುವ ಮೂಲಕ ಆರಂಭಿಸಲಾಗುವುದು. ಗುಬ್ಬಿ ತಾಲೂಕಿನ ಸಿ.ಎಸ್ ಪುರ ಹಾಗೂ ಇಡಗೂರು ವ್ಯಾಲಿಗಳನ್ನು ಸ್ವಚ್ಛಗೊಳಿಸಿ ಸರಾಗವಾಗಿ ನೀರು ಹರಿಸುವಂತೆ ಹೇಮಾವತಿ ನಾಲಾ ಇಂಜಿನಿಯರ್ ಬಾಲಕೃಷ್ಣ ಅವರಿಗೆ ಸಚಿವರು ಸೂಚಿಸಿದರು.       ಶಾಸಕ ಡಿ.ಸಿ.ಗೌರಿಶಂಕರ್ ಮಾತನಾಡಿ ಗೂಳೂರು ಕೆರೆಗೆ ನೀರು ಹರಿಸಿಲ್ಲ. ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೂ…

ಮುಂದೆ ಓದಿ...