ಕೊರಟಗೆರೆ ಪೊಲೀಸರಿಂದ ಅಂತಾರಾಜ್ಯ ದರೋಡೆಕೋರರ ಬಂಧನ!

ಕೊರಟಗೆರೆ:       ಒಂಟಿ ಮಹಿಳೆ ಮನೆಯಲ್ಲಿ ದರೋಡೆ ಮಾಡಿದ್ಧ ಆರೋಪಿಗಳನ್ನ ಕೊರಟಗೆರೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.       ಕೊರಟಗೆರೆ ತಾಲ್ಲೂಕಿನ ಅರಸಾಪುರ ಗ್ರಾಮದಲ್ಲಿ ಆಗಸ್ಟ್ 12 ರಂದು ಒಂಟಿ ಮನೆಯನ್ನೇ ಟಾರ್ಗೆಟ್ ಮಾಡಿ ಹೊಂಚು ಹಾಕಿ ಮನೆಯಲ್ಲಿದ್ದ ಓರ್ವ ಮಹಿಳೆಯ ಕೈಕಾಲು ಹಗ್ಗದಿಂದ ಕಟ್ಟಿ ಮನೆಯಲ್ಲಿದ್ದ ಚಿನ್ನಾಭರಣ. ಎರಡು ಮೊಬೈಲ್‍ಗಳನ್ನು ದೋಚಿ ಪರಾರಿಯಾಗಿದ್ದರು..ಘಟನಾ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕೆ ಕೊರಟಗೆರೆ ಪೊಲೀಸರು ಬಲೆಬೀಸಿದ್ದರು.       ತುಮಕೂರು ಎಸ್ಪಿ ಡಾ ಕೋನ ವಂಶಿಕೃಶಷ್ಣ ಘಟನಾ ಸ್ಧಳಕ್ಕೆ ಭೇಟಿ ನೀಡಿ ಎಎಸ್ಪಿ ಉದೇಶ್, ಮಧುಗಿರಿ ಡಿವೈಎಸ್ಪಿ ಧರಣೇಶ್ ಮಾರ್ಗದರ್ಶನದಲ್ಲಿ ಕೊರಟಗೆರೆ ಸಿಪಿಏ ಎಫ್.ಕೆ ನದಾಫ್, ಪಿಎಸೈ ಮಂಜುನಾಥ್ ಬಿ.ಸಿ.ಹಾಗೂ ಸಿಬ್ಬಂದಿಗಳಾದ ವೆಂಕಟೇಶ್. ಮೋಹನ್ ದೊಡ್ಡಲಿಂಗಯ್ಯ.ಲೋಹಿತ್, ಶಿವಪ್ರಸಾದ್ ಹಾಗೂ ತಾಂತ್ರಿಕ ಸಿಬ್ಬಂದಿ ರಮೇಶ್ ಸೇರಿದ…

ಮುಂದೆ ಓದಿ...

ಸ್ವಾಮಿನಾಥನ್ ವರದಿ ಜಾರಿಗೆ ಒತ್ತಾಯ : ಪ್ರತಿಭಟನೆ

ತುಮಕೂರು:       60 ವರ್ಷ ತುಂಬಿದ ರೈತರಿಗೆ ಕನಿಷ್ಠ ಪಿಂಚಣಿ, ಕೃಷಿ ಭೂಮಿಯಲ್ಲಿ ಅಂರ್ತಜಲ ಹೆಚ್ಚಳಕ್ಕೆ ಕ್ರಮ ಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ಕಿಸಾನ್ ಸಭಾ ತುಮಕೂರು ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.       ರೈತರ ಹಕ್ಕೋತ್ತಾಯ ದಿನದ ಅಂಗವಾಗಿ ಟೌನ್‍ಹಾಲ್‍ನಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿ ಅವರಿಗೆ ಮನವಿ ಸಲ್ಲಿಸ ಲಾಯಿತು.       ಈ ವೇಳೆ ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಸಂಚಾಲಕ ಗಿರೀಶ್, ತೀವ್ರ ಬರಗಾಲಕ್ಕೆ ತುತ್ತಾಗಿರುವ ಜಿಲ್ಲೆಯಲ್ಲಿ ತೆಂಗು ಮತ್ತು ಅಡಿಕೆ ಬೆಳೆಗಾರರು ನಷ್ಟ ಅನುಭವಿಸುತ್ತಿದ್ದು, ನಷ್ಟಕ್ಕೆ ಒಳಗಾಗಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು, ರೈತರಿಗೆ ವೈಜ್ಞಾನಿಕವಾಗಿ ಫಸಲ್ ಭೀಮಾ ಯೋಜನೆಯನ್ನು ಜಾರಿ ಮಾಡ ಬೇಕೆಂದು ಒತ್ತಾಯಿಸಿದರು.    …

ಮುಂದೆ ಓದಿ...

ಅರಿವನ್ನು ಮೂಡಿಸುವವರೇ ನಿಜವಾದ ಗುರು-ಸಚಿವ ಜೆ.ಸಿ.ಮಾಧುಸ್ವಾಮಿ

ತುಮಕೂರು:       ವಿದ್ಯಾರ್ಥಿಗಳಿಗೆ ಅಕ್ಷರದೊಂದಿಗೆ ಬದುಕಿನ ಮೌಲ್ಯಗಳ ಬಗ್ಗೆ ಅರಿವನ್ನು ಮೂಡಿಸುವವರೇ ನಿಜವಾದ ಗುರು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.          ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ(ದಕ್ಷಿಣ)ಯ ಸಹಯೋಗದಲ್ಲಿಂದು ನಗರದ ಅಮಾನಿಕೆರೆಯ ಗಾಜಿನಮನೆಯಲ್ಲಿ ಏರ್ಪಡಿಸಿದ್ದ ಡಾ: ಸರ್ವಪಲ್ಲಿ ರಾಧಾಕೃಷ್ಣನ್ ಅವರ 132ನೇ ಜನ್ಮ ದಿನಾಚರಣೆ ಹಾಗೂ ಶಿಕ್ಷಕರ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.       ಶಿಕ್ಷಣಕ್ಕೆ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ಶಕ್ತಿಯಿರುತ್ತದೆ. ಶಿಕ್ಷಕನಿಗೂ ವಿದ್ಯಾರ್ಥಿಗೂ ಅವಿನಾಭಾವ ಸಂಬಂಧವಿದೆ. ಮಕ್ಕಳು ಹಿರಿಯರ ಹಾಗೂ ಶಿಕ್ಷಕರ ನಡೆ-ನುಡಿಗಳನ್ನು ಅನುಸರಿಸುವ ಮನೋಭಾವ ಹೊಂದಿರುತ್ತಾರೆ. ಈ ನಿಟ್ಟಿನಲ್ಲಿ ಶಿಕ್ಷಕರು ಮಕ್ಕಳಿಗೆ ಬುದ್ಧಿ ಹೇಳುವ ನೈತಿಕತೆಯನ್ನು ಬೆಳೆಸಿಕೊಳ್ಳಬೇಕು. ಮಗು ತನ್ನ ಜಗತ್ತಿನಲ್ಲಿ ಶಿಕ್ಷಕನೇ “ಸೂಪರ್ ಮ್ಯಾನ್”. ಗುರುವಿಗೆ ತಿಳಿಯದಿರುವ ವಿಷಯವೇ…

ಮುಂದೆ ಓದಿ...

ಮಧುಗಿರಿ : ಡಿ.ಕೆ. ಶಿವಕುಮಾರ್ ಬಂಧನ ಖಂಡಿಸಿ ಬಂದ್ ಬಾಗಶಃ ಯಶಸ್ವಿ

ಮಧುಗಿರಿ :       ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಬಂಧನ ಖಂಡಿಸಿ ಗುರುವಾರ ಡಿಕೆಶಿ ಅಭಿಮಾನಿ ಬಳಗ ಮತ್ತು ಕನ್ನಡ ಜಾಗೃತಿ ವೇದಿಕೆ ವತಿಯಿಂದ ಕರೆ ನೀಡಿದ್ದ ಮಧುಗಿರಿ ಬಂದ್ ಬಾಗಶಃ ಯಶಸ್ವಿಯಾಗಿದೆ.       ಬೆಳಗ್ಗೆ 8 ಗಂಟೆಯಿಂದಲೇ ಡಿಕೆಶಿ ಅಭಿಮಾನಿಗಳು ಮತ್ತು ಕನ್ನಡ ಜಾಗೃತಿ ವೇದಿಕೆ ಕಾರ್ಯಕರ್ತರು ಪಟ್ಟಣದಾಧ್ಯಂತ ಸಂಚರಿಸಿ ತೆರೆದಿದ್ದ ಅಂಗಡಿಗಳನ್ನು ಮುಚ್ಚಿಸಿ ಬಂದ್ ಸಹಕರಿಸುವಂತೆ ಮನವಿ ಸಲ್ಲಿಸಿ ಕೇಂದ್ರ ಸರ್ಕಾರದ ವಿರುದ್ದ ಘೋಷನೆ ಕೂಗಿದರು.       ಸಣ್ಣಪುಟ್ಟ ಕೇರಿಗಳಲ್ಲಿ ಅಂಗಡಿಗಳು ತೆರೆದಿರುವುದು ಹೊರತುಪಡಿಸಿದರೆ ಬಹುತೇಕ ಅಂಗಡಿ ಮುಗ್ಗಟ್ಟುಗಳು ಬಂದ್ ಆಗಿದ್ದವು. ವಾಹನ ಸಂಚಾರವೂ ವಿರಳವಾಗಿತ್ತು. ನಂತರ ಪಟ್ಟಣದ ಡೂಂ ಲೈಟ್ ವೃತ್ತದಲ್ಲಿ ಜಮಾಯಿಸಿ ಡಿಕೆಶಿ ಬಂಧನದ ವಿರುದ್ದ ಕಿಡಿ ಕಾರಿದರು.       ದ್ವೇಷದ ರಾಜಕಾರಣ ಮಾಡುತ್ತಿರುವ ಬಿಜೆಪಿ ತನ್ನ ವರ್ತನೆಯನ್ನು ಬದಲಾಯಿಸಿಕೊಳ್ಳಬೇಕು.…

ಮುಂದೆ ಓದಿ...