ಡಿ.ಕೆ.ಶಿವಕುಮಾರ್ ಬಂಧನಕ್ಕೂ ಬಿಜೆಪಿಗೂ ಸಂಬಂಧವಿಲ್ಲ-ಸಚಿವ ಜೆ.ಸಿ.ಮಾಧುಸ್ವಾಮಿ

ಗುಬ್ಬಿ :       ರಾಜಕೀಯದಲ್ಲಿ ಪರ ವಿರೋಧದ ಪ್ರತಿಭಟನೆ ಸಾಮಾನ್ಯವಾದದು. ಆದರೆ ಡಿ.ಕೆ.ಶಿವಕುಮಾರ್ ಅವರ ಬಂಧನಕ್ಕೂ, ಬಿಜೆಪಿ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.       ಗುಬ್ಬಿ ತಾಲ್ಲೂಕು ನಿಟ್ಟೂರಿನ ಮರಿಯಮ್ಮ ದೇವಾಲಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ಅಗ್ನಿವಂಶ ಕ್ಷತ್ರಿಯ (ತಿಗಳರ) ಸೇವಾ ಟ್ರಸ್ಟ್ ಆಯೋಜಿಸಿದ್ದ ನೂತನ ಅಂಗಡಿ ಮಳಿಗೆ ಉದ್ಘಾಟನೆ ಹಾಗೂ ಧಾರ್ಮಿಕ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಅಕ್ರಮ ಹಣದ ಪ್ರಕರಣದಲ್ಲಿ ಇಡಿ ತನಿಖೆ ನಡೆಸಿದೆ. ಶಿವಕುಮಾರ್ ಅವರಿಂದ ಸರಿಯಾದ ಮಾಹಿತಿ ಸಿಗದ ಹಿನ್ನಲೆಯಲ್ಲಿ ಬಂಧನಕ್ಕೆ ಒಳಪಡಿಸಿದ್ದಾರೆ. ಈ ಘಟನೆಗೂ ಬಿಜೆಪಿಯ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟ ಪಡಿಸಿದರು.      ಪ್ರತಿಭಟನೆ ಮೂಲಕ ನ್ಯಾಯ ಕೇಳುವ ಹಕ್ಕು ಸಾಮಾನ್ಯರಿಗಿದೆ. ಪ್ರಜಾಪ್ರಭುತ್ವದಂತೆ ನ್ಯಾಯ ಸಮ್ಮತವನ್ನು ಪ್ರಶ್ನಿಸಬಹುದಾಗಿದೆ. ಆದರೆ…

ಮುಂದೆ ಓದಿ...

ಕೇಂದ್ರ ಸರಕಾರದ ವಿರುದ್ಧ ಕೊರಟಗೆರೆ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ!

ಕೊರಟಗೆರೆ:       ರಾಜ್ಯದಲ್ಲಿ ಪ್ರವಾಹದಿಂದ ನಲುಗಿರುವ ನೆರೆ ಸಂತ್ರಸ್ಥರ ಬಗ್ಗೆ ನಿರ್ಲಕ್ಷ, ಕೇಂದ್ರ ಸರಕಾರದ ದ್ವೇಷದ ರಾಜಕಾರಣ ಮತ್ತು ಕೇಂದ್ರ ಸರಕಾರದ ಹತ್ತಾರು ಏಕಪಕ್ಷೀಯ ನಿರ್ಧಾರಗಳಿಂದ ಆಗಿರುವ ವೈಫಲ್ಯಗಳ ವಿರುದ್ದ ಬ್ಲಾಕ್ ಕಾಂಗ್ರೇಸ್ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.       ಪಟ್ಟಣದ ಸರಕಾರಿ ಬಸ್ ನಿಲ್ದಾಣದಿಂದ ಮುಖ್ಯರಸ್ತೆಯಲ್ಲಿ ಮೆರವಣಿಗೆ ಮೂಲಕ ಕೊರಟಗೆರೆ ಬ್ಲಾಕ್ ಕಾಂಗ್ರೇಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ದ ಘೋಷಣೆಗಳನ್ನು ಕೂಗುತ್ತಾ ಕೊರಟಗೆರೆ ತಹಶೀಲ್ದಾರ್ ಗೋವಿಂದರಾಜು ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.       ರಾಜ್ಯ ಕೆಪಿಸಿಸಿ ಕಾರ್ಯದರ್ಶಿ ಬಿ.ಎಸ್.ದಿನೇಶ್ ಮಾತನಾಡಿ ಕೇಂದ್ರ ಸರಕಾರದ ವೈಫಲ್ಯ ಮರೆಮಾಚಲು ಹಾಗೂ ಜನತೆಯ ಗಮನ ಬೇರೆಡೆ ಸೆಳೆಯಲು ಕೇಂದ್ರ ಸರಕಾರ ಸ್ವತಂತ್ರ ಸ್ವಾಯತ್ತತೆ ಸಂಸ್ಥೆಗಳಾದ ಐಟಿ, ಈಡಿ ಹಾಗೂ ಸಿಬಿಐ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡಿದೆ. ದ್ವೇಷದ ರಾಜಕಾರಣದ…

ಮುಂದೆ ಓದಿ...