ಆರ್ಥಿಕ ಹಿಂಜರಿತ ಕೇವಲ ನಮ್ಮ ರಾಷ್ಟ್ರಕ್ಕೆ ಮಾತ್ರ ಆಗಿಲ್ಲ -ಸಚಿವ ಜಗದೀಶ್ ಶೆಟ್ಟರ್

ತುಮಕೂರು:       ಕೈಗಾರಿಕಾ ವಲಯದಲ್ಲಿ ಉದ್ಯೋಗಾವಕಾಶ ಸೃಷ್ಠಿ ಹಾಗೂ ಆರ್ಥಿಕ ಮಟ್ಟ ಚೇತರಿಕೆಗೆ ಕ್ರಮ ಕೈಗೊಳ್ಳುವ ಸಂಬಂಧ ಚಿಂತನೆ ನಡೆಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‍ಶೆಟ್ಟರ್ ಇಂದಿಲ್ಲಿ ತಿಳಿಸಿದರು.       ಆರ್ಥಿಕ ಹಿಂಜರಿತ ಕೇವಲ ನಮ್ಮ ರಾಜ್ಯ, ರಾಷ್ಟ್ರಕ್ಕೆ ಮಾತ್ರ ಆಗಿಲ್ಲ. ಇಡೀ ಜಗತ್ತಿನಲ್ಲೇ ಇದೆ. ಆದರೆ ಇದರಿಂದ ಆಟೋ ಮೊಬೈಲ್ ಕ್ಷೇತ್ರಕ್ಕೆ ಭಾರೀ ಹಿನ್ನಡೆಯಾಗಿರುವುದು ಸತ್ಯ. ಈ ಎಲ್ಲದರ ಬಗ್ಗೆ ಅಧ್ಯಯನ ನಡೆಸಿ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.       ನಗರದ ವಸಂತನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡುವ ಮುನ್ನ ಸಿದ್ದಗಂಗಾ ಮಠಕ್ಕೆ ತೆರಳಿ ಲಿಂ. ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ…

ಮುಂದೆ ಓದಿ...