ಪೌರಕಾರ್ಮಿಕರು ನಿಜವಾದ ಶ್ರಮಜೀವಿಗಳು-ಶಾಸಕ ಜಿ.ಬಿ.ಜ್ಯೋತಿಗಣೇಶ್

ತುಮಕೂರು:       ಸ್ವಚ್ಛತೆಯನ್ನು ಕಾಪಾಡಲು ತಮ್ಮ ಜೀವವನ್ನೇ ಲೆಕ್ಕಿಸದಿರುವ ಪೌರಕಾರ್ಮಿಕರು ನಿಜವಾದ ಶ್ರಮಜೀವಿಗಳು ಎಂದು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಭಿಪ್ರಾಯಪಟ್ಟರು.       ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ನಗರದ ಬಾಲಭವನದಲ್ಲಿಂದು ಹಮ್ಮಿಕೊಂಡಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಡೀ ದೇಶದಲ್ಲಿ ವಾರಕ್ಕೊಂದು ಬಾರಿ ಪತ್ರಿಕೆಯಲ್ಲಿ ಪೌರಕಾರ್ಮಿಕರು ಸಾವನ್ನಪ್ಪುವ ಸುದ್ದಿಗಳನ್ನು ನೋಡುತ್ತಲೇ ಇದ್ದೇವೆ. ತಮ್ಮ ಜೀವವನ್ನು ಲೆಕ್ಕಿಸದೆ ಸ್ವಚ್ಛತಾ ಕಾರ್ಯ ಮಾಡುವ ಪೌರಕಾರ್ಮಿಕರು ದೇಶದ ಸೈನಿಕರಿಗೆ ಸಮಾನರು ಎಂದು ಹೇಳಿದರು.       ವಿದೇಶಗಳಲ್ಲಿರುವಂತೆ ನಮ್ಮ ದೇಶದಲ್ಲಿ ಎಲ್ಲರಿಗೂ ಒಂದೇ ರೀತಿಯ ಸ್ಥಾನ-ಮಾನ ಇಲ್ಲ. ಏಕವಚನದಲ್ಲಿ ಮಾತನಾಡಿಸುವ, ಕೀಳರಿಮೆಯಿಂದ ನೋಡುವ ಭಾವ ಹೋದಾಗ ಮಾತ್ರ ಸಮಾನತೆ ಎನ್ನುವುದು ದೇಶದಲ್ಲಿ ಬರುತ್ತದೆ. ಒಂದೇ ರೀತಿಯ ಸಮಾನತೆಯನ್ನು ತರಲು ಪ್ರಧಾನ ಮಂತ್ರಿ ಅಡಿಪಾಯ ಹಾಕಿಕೊಟ್ಟಿದ್ದಾರೆ. ಪಾಲಿಕೆಯು ಪೌರಕಾರ್ಮಿಕರಿಗೆ ಅಗತ್ಯವಿರುವ ಸಾಮಗ್ರಿಗಳನ್ನು ಮೊದಲ…

ಮುಂದೆ ಓದಿ...