ಹೇಮಾವತಿ ನಾಲಾ ಕಚೇರಿಗೆ ಬೀಗ ಜಡಿದು ದಿಢೀರ್ ಪ್ರತಿಭಟನೆ!!

ತುಮಕೂರು :       ಕುಣಿಗಲ್ ತಾಲ್ಲೂಕಿನಲ್ಲಿ ಹೇಮಾವತಿ ಚಾನಲ್ ಮಾಡುವ ನಿಟ್ಟಿನಲ್ಲಿ ಏಕಾಏಕಿ ರೈತರ ಜಮೀನಿಗೆ ಪ್ರವೇಶ ಮಾಡಿ ಯಾವುದೇ ನೋಟೀಸ್ ನೀಡದೆ , ಪರಿಹಾರ ನೀಡದೇ ಮನಸೋ ಇಚ್ಚೆ ರೈತರನ್ನು ಒಕ್ಕಲೆಬ್ಬಿಸುವ ಕೆಲಸವನ್ನು ಹೇಮಾವತಿ ಇಲಾಖಾ ಅಧಿಕಾರಿಗಳು ಮಾಡುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದದ ಪಟೇಲ್ ಆರೋಪಿಸಿದರು.       ನಗರದ ಕುಣಿಗಲ್ ರಸ್ತೆಯಲ್ಲಿರುವ ಹೇಮಾವತಿ ಕಚೇರಿಗೆ ಭೇಟಿ ನೀಡಿ ಅಲ್ಲಿನ ಅಧಿಕಾರಿಗಳ ಬೇಜವಬ್ಧಾರಿ ಹೇಳಿಕೆಗಳಿಗೆ ಆಕ್ರೋಶಗೊಂಡ ರೈತರು ಕಚೇರಿಗೆ ಬೀಗ ಜಡಿದು ದಿಢೀರ್ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಕುಣಿಗಲ್ ಮೂಲಕ ಹುಲಿಯೂರುದುರ್ಗದ ವರೆಗೆ ಕುಡಿಯುವ ನೀರಿನ ಯೋಜನೆಗಾಗಿ ಮಾಡುತ್ತಿರುವ ಚಾನಲ್‍ಗಾಗಿ ರೈತರ ಜಮೀನುಗಳನ್ನು ವಶಪಡಿಸಿಕೊಂಡಿದ್ದು, ಅದಕ್ಕೆ ಪರಿಹಾವೂ ನೀಡಿಲ್ಲ. ಕೇಳಲು ಕಚೇರಿಗೆ ಬಂದರೆ ಸರಿಯಾದ ಉತ್ತರವೂ ಸಿಗುತ್ತಿಲ್ಲ ಎಂದು ಆರೋಪಿಸಿದರು.  …

ಮುಂದೆ ಓದಿ...