ತುಮಕೂರು : 36 ಸಾಧಕರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ತುಮಕೂರು:       ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 36 ಸಾಧಕರನ್ನು ಪ್ರಸಕ್ತ ಸಾಲಿನ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜಪ್ಪ ಆಪಿನಕಟ್ಟೆ ತಿಳಿಸಿದ್ದಾರೆ.       ಪ್ರಶಸ್ತಿಗೆ ಆಯ್ಕೆಯಾದವರಿಗೆ ನವೆಂಬರ್ 1ರಂದು ಸಂಜೆ 4 ಗಂಟೆಗೆ ನಗರದ ಗಾಜಿನಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಂಗಭೂಮಿ, ಪತ್ರಿಕೋದ್ಯಮ, ಸಾಹಿತ್ಯ, ಕ್ರೀಡೆ, ಜಾನಪದ, ಸಂಗೀತ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ಪ್ರಶಸ್ತಿಗೆ ಆಯ್ಕೆಯಾದವರ ಕ್ಷೇತ್ರವಾರು ಪಟ್ಟಿ ಇಂತಿದೆ. ರಂಗಭೂಮಿ ಕ್ಷೇತ್ರ:       ಶಿರಾ ತಾಲ್ಲೂಕು ಕಟಾವೀರನಹಳ್ಳಿ ಗ್ರಾಮದ ಜಿ.ಕೆ.ರಂಗನಾಥ, ತುಮಕೂರು ತಾಲ್ಲೂಕು ಮರಳೂರಿನ ಬಿ.ರಾಮಂಜಿನೇಯ, ಭೈರವೇಶ್ವರ ನಗರದ ಡಿ.ಎನ್.ನವಿಲೇಶ್, ಗೂಳೂರಿನ ಜಿ.ಕೆ.ರಂಗಸ್ವಾಮಯ್ಯ, ತುರುವೇಕೆರೆಯ…

ಮುಂದೆ ಓದಿ...

ಬಸ್ ಅಪಘಾತದಲ್ಲಿ ಸಾವನ್ನಪ್ಪಿದವರಿಗೆ 5 ಲಕ್ಷ ಪರಿಹಾರಕ್ಕೆ ಪರಮೇಶ್ವರ್ ಒತ್ತಾಯ!

ಕೊರಟಗೆರೆ :       ಕೊರಟಗೆರೆ ಪಟ್ಟಣದ ಸಮೀಪ ಜಟ್ಟಿ ಅಗ್ರಹಾರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತ ಪಟ್ಟವರಿಗೆ ಸರಕಾರ 5 ಲಕ್ಷ ರೂ.ಪರಿಹಾರ ಮೊತ್ತ ಘೋಷಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ಒತ್ತಾಯಿಸಿದರು.       ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಅಪಘಾತದಿಂದ ಗಾಯಗೊಂಡವರ ಆರೋಗ್ಯ ವಿಚಾರಿಸಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮಧುಗಿರಿಯಿಂದ ತುಮಕೂರಿಗೆ ಹೊರಟ ಬಸ್ ಮಾರ್ಗ ಮಧ್ಯೆ ಜಟ್ಟಿ ಅಗ್ರಹಾರದಲ್ಲಿ ಭೀಕರ ಅಪಘಾತಕ್ಕೆ ಒಳಗಾಗಿದ್ದು, 5 ಜನ ಸಾವನ್ನಪ್ಪಿದ್ದಾರೆ. 15 ಕ್ಕೂ ಹೆಚ್ಚು ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರ ಕುಟುಂಬಕ್ಕೆ ಸರಕಾರ 5 ಲಕ್ಷ ರೂ. ಪರಿಹಾರ ಘೋಷಿಸಲಿ ಎಂದರು.       ಜೊತೆಗೆ, ಈ ಮಾರ್ಗದಲ್ಲಿ ಇದು ಎರಡನೇ ಅಪಘಾತವಾಗಿದೆ. ಬಸ್‍ಗಳ ವೇಗಕ್ಕೆ ಕಡಿವಾಣ ಹಾಕಬೇಕಿದೆ. ಈ ನಿಟ್ಟಿನಲ್ಲಿ ಆರ್‍ಟಿಒ ಹಾಗೂ ಪೆÇಲೀಸ್…

ಮುಂದೆ ಓದಿ...

ತುರುವೇಕೆರೆ : ಮಲ್ಲಾಘಟ್ಟ ಕೆರೆಗೆ ಬಿದ್ದು ಓರ್ವ ಸಾವು!

ತುರುವೇಕೆರೆ :       ವ್ಯಕ್ತಿಯೊಬ್ಬ ಮಲ್ಲಾಘಟ್ಟ ಕೆರೆಯಲ್ಲಿ ನೀರು ಮುಟ್ಟಲು ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.        ಮೃತನು ಗುಬ್ಬಿ ತಾಲ್ಲೂಕಿನ ಕೊಂಡ್ಲಿ ಗ್ರಾಮದ ನಿವಾಸಿ ಲಿಂಗಪ್ಪ (52) ಎಂದು ಗುರುತಿಸಲಾಗಿದೆ. ಮೃತ ಲಿಂಗಪ್ಪನಿಗೆ ಎರಡು ಗಂಡು, ಒಂದು ಹೆಣ್ಣು ಮಗು ಸಹ ಇದೆ. ಸೋಮವಾರ ಮಲ್ಲಾಘಟ್ಟ ಕೆರೆ ದಡದಲ್ಲಿರುವ ಗಂಗಾಧರೇಶ್ವರ ಸ್ವಾಮಿಯ ಪೂಜೆಗೆಂದು ಬಂದಿದ್ದು ಕೆರೆಯ ದಂಡೆ ತನ್ನ ಬಟ್ಟೆಗಳನ್ನು ಕಳಚಿಟ್ಟು ನೀರು ಮುಟ್ಟಲು ಹೋಗಿ ಕಾಲು ಜಾರಿ ಅಸುನೀಗಿದ್ದಾನೆ.       ಮೊನ್ನೆ 26ರ ಶನಿವಾರವಷ್ಟೆ ಮಲ್ಲಾಘಟ್ಟ ಕೆರೆ ಮೂಲಭೂತ ಸೌಕರ್ಯದ ಬಗ್ಗೆ ಹಾಗೂ ಕಾವಲುಗಾರ ನೇಮಕ ಪ್ರಜಾಪ್ರಗತಿಯಲ್ಲಿ ದಿನಪತ್ರಿಕೆಯಲ್ಲಿ ವರದಿ ಮಾಡಲಾಗಿತ್ತು.ಅಗ್ನಿಶಾಮಕ ದಳದ ಸಿಬ್ಬಂದಿ, ಪೆÇಲೀಸರು ಮತ್ತು ಸ್ಥಳೀಯ ಸಾರ್ವಜನಿಕರು ವಿಶಾಲವಾಗಿ ತುಂಬಿ ಹರಿಯುತ್ತಿರುವ ಕೆರೆಯಲ್ಲಿ ಮೃತನ ಶವ ಶೋಧನೆಗಾಗಿ ಹರಸಾಹಸ…

ಮುಂದೆ ಓದಿ...

ನ್ಯಾಯಾಲಯದಲ್ಲಿ ಬಾಕಿಯಿರುವ ದಲಿತ ಸಮುದಾಯಗಳ ಪ್ರಕರಣಗಳ ನಿಖರ ಮಾಹಿತಿ ನೀಡಲು ಡಿಸಿ ಸೂಚನೆ!

ತುಮಕೂರು :       ನ್ಯಾಯಾಲಯದಲ್ಲಿ ಬಾಕಿಯಿರುವ ದಲಿತ ಸಮುದಾಯದವರ ದೂರು ಪ್ರಕರಣಗಳ ನಿಖರ ಮಾಹಿತಿಯನ್ನು ಸಭೆಗೆ ನೀಡಬೇಕೆಂದು ಜಿಲ್ಲಾಧಿಕಾರಿ ಡಾ|| ರಾಕೇಶ್‍ಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.       ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಾರ್ವಜನಿಕ ಕುಂದು ಕೊರತೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಸಭೆಗೆ ಸಮರ್ಪಕ ಮಾಹಿತಿ ನೀಡಲು ತಡವರಿಸಿದ ಅಧಿಕಾರಿಗಳಿಗೆ ಈ ಸೂಚನೆ ನೀಡಿದರು. ಮುಂದಿನ ಸಭೆಯೊಳಗಾಗಿ ನಿಖರ ಮಾಹಿಯೊಂದಿಗೆ ಸಭೆಗೆ ಹಾಜರಾಗಬೇಕೆಂದು ನಿರ್ದೇಶನ ನೀಡಿದರು.       ಸಭೆಯಲ್ಲಿ “ದಲಿತರು ಒಳಗೆ ಪ್ರವೇಶಿಸಲು ಮುಕ್ತ ಅವಕಾಶವಿದೆ” ಎಂಬ ನಾಮಫಲಕವನ್ನು ಜಿಲ್ಲಾದ್ಯಂತ ಎಲ್ಲ ಮುಜರಾಯಿ ದೇವಾಲಯಗಳ ಮುಂದೆ ಪ್ರದರ್ಶಿಸಬೇಕೆಂದು ದಲಿತ ಮುಖಂಡರೊಬ್ಬರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದಾಗ ಸ್ಪಂದಿಸಿದ ಜಿಲ್ಲಾಧಿಕಾರಿಗಳು ತಹಶೀಲ್ದಾರ್, ಕಾರ್ಯನಿರ್ವಾಹಕ ಅಧಿಕಾರಿಗಳ ವ್ಯಾಪ್ತಿಗೆ ಬರುವ ಮುಜರಾಯಿ ದೇವಾಲಯಗಳಲ್ಲಿ ಈ ನಾಮಫಲಕವನ್ನು ಕಟ್ಟು…

ಮುಂದೆ ಓದಿ...

ಬಸ್ ಅಪಘಾತ : ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ಮಾಧುಸ್ವಾಮಿ

ತುಮಕೂರು:       ಜಿಲ್ಲೆಯ ಕೊರಟಗೆರೆ ತಾಲೂಕಿನ ಜಟ್ಟಿ ಅಗ್ರಹಾರದ ಬಳಿ ಸಂಭವಿಸಿದ ಬಸ್ ದುರಂತದಲ್ಲಿ ಗಾಯಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಕಾನೂನು ಹಾಗೂ ಸಂಸದೀಯ ವ್ಯವಹಾರಗಳು ಮತ್ತು ಸಣ್ಣ ನೀರಾವರಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರಿಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.       ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಕೊರಟಗೆರೆ ತಾಲ್ಲೂಕಿನ ಜಟ್ಟಿ ಅಗ್ರಹಾರದ ಬಳಿ ಬುಧವಾರ ಬೆಳಿಗ್ಗೆ ಸಂಭವಿಸಿದ ಬಸ್ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ್ದು, ನಂತರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದೇನೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳು ನೀಡಿದ ಮಾಹಿತಿಯಂತೆ ಎದುರಿಗೆ ಬಂದ ಆಟೋರಿಕ್ಷಾವನ್ನು ತಪ್ಪಿಸಲು ಹೋಗಿ ಖಾಸಗಿ ಬಸ್ ತಲೆಕೆಳಗಾಗಿ ಬಿದ್ದದ್ದರಿಂದ ಈ ಅಪಘಾತ ಸಂಭವಿಸಿದೆ ಎಂದರು.       ವಾಹನಗಳು ವೇಗಮಿತಿ ಇಲ್ಲದೇ, ಖಾಸಗಿ…

ಮುಂದೆ ಓದಿ...

ಕೊರಟಗೆರೆ : ಭೀಕರ ಬಸ್ ದುರಂತಕ್ಕೆ ಐವರ ಬಲಿ!!

        ಆಟೋ ಚಾಲಕನ ಅಜಾಗರೂಕತೆ ಮತ್ತು ಚೆಲ್ಲಾಟದಿಂದ ಖಾಸಗಿ ಬಸ್ಸಿನ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಅಪಘಾತವಾಗಿ ಬಸ್ಸಿನಲ್ಲಿದ್ದ ಐದು ಜನ ಮೃತ ಪಟ್ಟಿದ್ದಾರೆ.       ಇನ್ನುಳಿದ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಕೈಕಾಲು ಮುರಿದು ತೀವ್ರ ತರಹದ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಬುಧವಾರ ನಡೆದಿದೆ.       ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಕಸಬಾ ಹೋಬಳಿ ಜೆಟ್ಟಿಅಗ್ರಹಾರದ ಸರಕಾರಿ ಪ್ರೌಢಶಾಲೆಯ ಮುಂಭಾಗದ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದೆ. ಜಗನ್ನಾಥಪುರ ಕಡೆಯಿಂದ ಅಗ್ರಹಾರದ ಮುಖ್ಯರಸ್ತೆಗೆ ಸೇರಲು ಬಂದಂತಹ ಆಟೋ ವೇಗವಾಗಿ ಬರುತ್ತಿದ್ದ ವಿಜಯಲಕ್ಷ್ಮೀ ಎಂಬ ಖಾಸಗಿ ಬಸ್ಸನ್ನು ನೋಡಿಯೂ ಮುನ್ನುಗ್ಗಿದ್ದಾನೆ. ಅಪಘಾತ ತಡೆಯಲು ಯತ್ನಿಸಿದ ಬಸ್ಸು ನಿಯಂತ್ರಣಕ್ಕೆ ಬರದೇ ಪಲ್ಟಿ ಹೊಡೆದು ಅಪಘಾತವಾಗಿದೆ.        ಅಪಘಾತದಲ್ಲಿ ಕೊರಟಗೆರೆ ತಾಲೂಕಿನ ಗೇರಹಳ್ಳಿ ಗ್ರಾಮದ ಇಮ್ರಾನ್(18),…

ಮುಂದೆ ಓದಿ...

ಬೈಕ್ ತೊಳೆಯಲು ಹೋಗಿದ್ದ ಬಾಲಕರು ನೀರುಪಾಲು!!

ಶಿರಾ :         ದೀಪಾವಳಿ ಹಬ್ಬದ ಪ್ರಯುಕ್ತ ಎಮ್ಮೆ ಮತ್ತು ಬೈಕ್ ತೊಳೆಯಲು ಹೋಗಿದ್ದ ಯಲಪೇನಹಳ್ಳಿಯ ಯೋಗೇಶ್(15) ಮತ್ತು ಸಿದ್ದೇಶ್(11) ಎಂಬ ಬಾಲಕರು ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.       ನಿನ್ನೆ ಕೆರೆಯಲ್ಲಿ ಎಮ್ಮೆಯ ಮೈ ತೊಳೆಯುವಾಗ, ಅದು ಇವರಿಬ್ಬರನ್ನು ಎಳೆದುಕೊಂಡು ಆಳವಿರುವ ಕಡೆಗೆ ಹೋಗಿದೆ. ಅದನ್ನು ದಡಕ್ಕೆ ಎಳೆದು ತರುವ ಪ್ರಯತ್ನವನ್ನು ಈ ಅಣ್ಣ-ತಮ್ಮಂದಿರು ಮಾಡಿದ್ದಾರೆ. ಆದರೆ ಆ ಪ್ರಯತ್ನ ಫಲಿಸಲಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.       ದೊಡ್ಡಪ್ಪ – ಚಿಕ್ಕಪ್ಪನ ಮಕ್ಕಳಾದ ಇವರನ್ನು ಕಳೆದುಕೊಂಡ ಕುಟುಂಬದ ಸದಸ್ಯರು ದುಃಖದ ಮಡುವಿನಲ್ಲಿ ಮುಳುಗಿದ್ದಾರೆ. ಪಟ್ಟನಾಯಕನಹಳ್ಳಿ ಪೆÇಲೀಸರು ಮಹಜರು ಕಾರ್ಯ ನಡೆಸುತ್ತಿದ್ದಾರೆ.

ಮುಂದೆ ಓದಿ...

ತುಮಕೂರು : ಮನ ಸೆಳೆದ ಗಾಂಧೀಜಿ ವಿಶೇಷ ಛಾಯಾಚಿತ್ರ ಪ್ರದರ್ಶನ!!

ತುಮಕೂರು :       ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆಯ ಅಂಗವಾಗಿ ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿಂದು ಗಾಂಧೀಜಿಯವರ ಜೀವನಚರಿತ್ರೆ ಕುರಿತ ಛಾಯಾಚಿತ್ರ ಪ್ರದರ್ಶನವನ್ನು ಶಾಸಕ ಜಿ.ಬಿ ಜ್ಯೋತಿಗಣೇಶ್ ಹಾಗೂ ಜಿಲ್ಲಾಧಿಕಾರಿ ಡಾ|| ರಾಕೇಶ್‍ಕುಮಾರ್ ಅವರು ಚಾಲನೆ ನೀಡಿದರು.ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಶಾಸಕ ಜಿ.ಬಿ ಜ್ಯೋತಿಗಣೇಶ್ ಅವರು ಕರ್ನಾಟಕದಲ್ಲಿ ಗಾಂಧೀಜಿಯವರ ಅಪರೂಪದ ಛಾಯಾಚಿತ್ರಗಳನ್ನು ಬಸ್ ನಿಲ್ದಾಣದಲ್ಲಿ ಪ್ರದರ್ಶನಗೊಂಡಿವೆ. ಪ್ರದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಬರುತ್ತಿದ್ದಾರೆ.       ಗಾಂಧೀಜಿಯವರ ಜೀವನ ಮೌಲ್ಯಗಳು ಹಾಗೂ ಅವರ ಹೋರಾಟಗಳ ಅಪರೂಪದ ಛಾಯಾಚಿತ್ರ ವೀಕ್ಷಿಸುವ ಮೂಲಕ ಗಾಂಧೀಜಿಯವರ ಸ್ಮರಣೆ ಮಾಡಿಕೊಳ್ಳಬಹುದು ಎಂದರು.ಪ್ರದರ್ಶನ ವೀಕ್ಷಿಸಿದ ಜಿಲ್ಲಾಧಿಕಾರಿ ಡಾ|| ರಾಕೇಶ್‍ಕುಮಾರ್ ಅವರು ಮಾತನಾಡಿ, ಗಾಂಧೀಜಿ ಅವರ ಜೀವನ ಸಾಧನೆಗಳ ಅಪರೂಪದ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗಿದೆ. ಎಲ್ಲರಿಗೂ ಇದೊಂದು ಸದಾವಕಾಶವಾಗಿದೆ. ಸತ್ಯ ಅಹಿಂಸೆಯ ಮೂಲಕ…

ಮುಂದೆ ಓದಿ...

ಅಧಿಕೃತ ಪರವಾನಗಿ ಪಡೆದವರಿಗೆ ಮಾತ್ರ ಪಟಾಕಿ ಮಾರಾಟ ಮಾಡಲು ಅವಕಾಶ !!

ತುಮಕೂರು :       ಸ್ಪೋಟಕ ಪಟಾಕಿಗಳನ್ನು ಅಧಿಕೃತವಾಗಿ ಪರವಾನಗಿ(ಅನುಮತಿ) ಪಡೆದ ಮಾರಾಟಗಾರರು ಮಾತ್ರ ಆದೇಶಾನುಸಾರ ಮಾರಾಟ ಮಾಡಬೇಕೆಂದು ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಸೂಚನೆ ನೀಡಿದರು.       ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇತ್ತೀಚೆಗೆ ದೀಪಾವಳಿ ಹಬ್ಬಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು ಪಾಲಿಸಬೇಕಾದ ನಿಯಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು ಪಟಾಕಿ ಸಿಡಿಸುವುದರಿಂದ ವಾಯುಮಾಲಿನ್ಯ, ಶಬ್ದಮಾಲಿನ್ಯ ಹಾಗೂ ಪಟಾಕಿ ಸಿಡಿಸಿದ ನಂತರ ಘನತ್ಯಾಜ್ಯ ವಸ್ತುಗಳಿಂದ ಮಾಲಿನ್ಯ ಉಂಟಾಗುವುದರಿಂದ ಸರಣಿ ಸ್ಪೋಟಕ ಪಟಾಕಿಗಳನ್ನು ತಯಾರಿಸುವುದು, ಮಾರಾಟ ಮಾಡುವುದು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ ಎಂದರು.       ಸಾರ್ವಜನಿಕರು ದೀಪಾವಳಿ ಹಬ್ಬದ ಸಮಯದಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಪಟಾಕಿಯನ್ನ ಸಿಡಿಸಬೇಕು. ಶಾಲಾ ಕಾಲೇಜುಗಳಲ್ಲಿ ಪಟಾಕಿ ಸಿಡಿಸುವಂತಿಲ್ಲ ಎಂದು ತಿಳಿಸಿದರಲ್ಲದೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ದೀಪಾವಳಿ ಹಬ್ಬದ ದಿನದಿಂದ 7…

ಮುಂದೆ ಓದಿ...

ತುಮಕೂರು ಸ್ಮಾರ್ಟ್‍ಸಿಟಿ : 19ನೇ ಸ್ಥಾನಕ್ಕೆ ಏರಿಕೆ!

ತುಮಕೂರು :       ಸ್ಮಾರ್ಟ್ ಸಿಟಿ ಯೋಜನೆಯಡಿ ಆಯ್ಕೆಯಾದ ದೇಶದ 100 ಸ್ಮಾರ್ಟ್ ಸಿಟಿಗಳ ರ್ಯಾಂಕಿಂಗ್ ಪಟ್ಟಿಯಲ್ಲಿ 20ನೇ ಸ್ಥಾನದಲ್ಲಿದ್ದ ತುಮಕೂರು ಸ್ಮಾರ್ಟ್ ಸಿಟಿಯು 19ನೇ ಸ್ಥಾನಕ್ಕೆ ಏರಿದೆ ಎಂದು ಸ್ಮಾರ್ಟ್ ಸಿಟಿ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಜಯ್.ವಿ ಅವರು ಸಂತಸ ಹಂಚಿಕೊಂಡಿದ್ದಾರೆ.       ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಹಮ್ಮಿಕೊಂಡ ಯೋಜನೆಗಳ ಅನುಷ್ಠಾನದಲ್ಲಿ ಪ್ರಗತಿಯ ವೇಗ ಹೆಚ್ಚಾಗಿದ್ದು, ಈ ಸಿಟಿ ರ್ಯಾಂಕಿಂಗ್ ಏರಿಕೆಗೆ ಸಾಧ್ಯವಾಗಿದೆ. ಮುಂಬರುವ ದಿನಗಳಲ್ಲಿಯೂ ಸಹ ಸ್ಮಾರ್ಟ್ ಸಿಟಿಯ ಎಲ್ಲಾ ಕಾಮಗಾರಿಗಳ ಪ್ರಗತಿಯನ್ನು ಹೆಚ್ಚಿಸಿ ನಗರವನ್ನು ಸ್ಮಾರ್ಟ್ ಸಿಟಿ ಮಾಡಲು ಶ್ರಮವಹಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದೆ ಓದಿ...