ಅದ್ಧೂರಿಯಾಗಿ ಜರುಗಿದ 43ನೇ ವರ್ಷದ ಸಿದ್ಧಿ ವಿನಾಯಕ ವಿಸರ್ಜನಾ ಮಹೋತ್ಸವ!

ತುಮಕೂರು:      ನಗರದ ವಿನಾಯಕ ನಗರದಲ್ಲಿ ಶ್ರೀ ಸಿದ್ಧಿವಿನಾಯಕ ಸೇವಾ ಮಂಡಳಿ ವತಿಯಿಂದ 43ನೇ ವರ್ಷದ ಸಿದ್ಧಿ ವಿನಾಯಕ ವಿಸರ್ಜನಾ ಮಹೋತ್ಸವದ ಅಂಗವಾಗಿ ಗುರುವಾರ ಬೆಳಿಗ್ಗೆ ಶಾಸಕ ಜ್ಯೋತಿಗಣೇಶ್, ಮಾಜಿ ಸಚಿವ ಸೊಗಡು ಶಿವಣ್ಣ, ಜಿಲ್ಲಾಧಿಕಾರಿ ಕೆ.ರಾಕೇಶ್‍ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ ಮೆರವಣಿಗೆಗೆ ಚಾಲನೆ ನೀಡಿದರು.       ಮೆರವಣಿಗೆಯೂ ವಿನಾಯಕ ನಗರದಿಂದ ಬಿ.ಎಚ್.ರಸ್ತೆ, ಟೌನ್‍ಹಾಲ್, ಎಂ.ಜಿ.ರಸ್ತೆ, ಹೊರಪೇಟೆ, ಗುಂಚಿಸರ್ಕಲ್, ಮಂಡಿಪೇಟೆ, ಆಯಿಲ್ ಮಿಲ್ ರೋಡ್, ಚಿಕ್ಕಪೇಟೆ, ಕೋಟೆ ಆಂಜನೇಯಸ್ವಾಮಿ ವೃತ್ತ, ಗಾರ್ಡನ್ ರಸ್ತೆ ಮುಖಾಂತರ ಕೆ.ಎನ್.ಎಸ್ ಕಲ್ಯಾಣಿಯಲ್ಲಿ ಆಕರ್ಷಕ ಸಿಡಿಮದ್ದು ಪ್ರದರ್ಶನದೊಂದಿಗೆ ವಿಸರ್ಜಿಸಲಾಯಿತು.       ಕೋಟೆ ಆಂಜನೇಯಸ್ವಾಮಿ ವೃತ್ತದಲ್ಲಿ ಶಿವು ಎಲೆಕ್ಟ್ರಿಕಲ್‍ವತಿಯಿಂದ ವಿದ್ಯುತ್ ದೀಪಾಲಂಕಾರ ಹಾಗೂ ವಾದ್ಯಗೋಷ್ಠಿ ಮೂಲಕ ಸಿದ್ಧಿವಿನಾಯಕ ಮೂರ್ತಿಯನ್ನು ಸ್ವಾಗತಿಸಲಾಯಿತು, ಮೆರವಣಿಯಲ್ಲಿ ಚೆನ್ನೈನ ಶಿವತಾಂಡವ ನೃತ್ಯ, ಬೆಂಗಳೂರಿನ ಸುಪ್ರಸಿದ್ಧ ವಿಶೇಷ ಅಲಂಕೃತ ವಾಹನ, ಡೋಲು, ನಂದಿಧ್ವಜ,…

ಮುಂದೆ ಓದಿ...

ಧನ್ಯವಾದ ತಿಳಿಸಲು ತಡವಾಗಿ ಬಂದಿದ್ದೇನೆ ನನ್ನನ್ನು ಕ್ಷಮಿಸಿ -ಹೆಚ್.ಡಿ.ದೇವೇಗೌಡ

ತುಮಕೂರು:       ಚುನಾವಣೆಯಲ್ಲಿ ಸೋಲುಗೆಲುವು ಸಾಮಾನ್ಯ, ಕಳೆದ ಲೋಕಸಭಾ ಚುನಾವಣೆಯಲ್ಲಿ 6.5ಲಕ್ಷ ಮತಗಳನ್ನು ನೀಡಿದ ಮತದಾರರಿಗೆ ಧನ್ಯವಾದವನ್ನು ತಿಳಿಸಬೇಕಿತ್ತು, ತಡವಾಗಿ ಬಂದಿದ್ದೇನೆ ನನ್ನನ್ನು ಕ್ಷಮಿಸಿ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮನವಿ ಮಾಡಿದರು.       ನಗರದ ಜೆಡಿಎಸ್ ಕಚೇರಿಯಲ್ಲಿ ನಡೆದ ಪಕ್ಷದ ಜಿಲ್ಲಾ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು ಕಳೆದ ಚುನಾವಣೆಯಲ್ಲಿ ಜಿಲ್ಲೆ ಮತದಾರರು ಹಾಗೂ ಮುಖಂಡರು ಸಹಕಾರ ನೀಡಿದ್ದೀರಿ, ಸೋಲನ್ನು ಸ್ಪೂರ್ತಿಯಾಗಿ ಸ್ವೀಕರಿಸಿ, ಪ್ರತಿ ತಾಲ್ಲೂಕಿಗೆ ಹೋಗಿ ಧನ್ಯವಾದ ಹೇಳಬೇಕು ಅದಕ್ಕಾಗಿ ಕಾರ್ಯಕ್ರಮ ರೂಪಿಸುವಂತೆ ಗುಬ್ಬಿ ಶಾಸಕ ವಾಸುಗೆ ಹೇಳಿದ್ದೇ ಏಳು ತಿಂಗಳ ನಂತರ ಜಿಲ್ಲೆಗೆ ಬಂದಿದ್ದೇನೆ, ಪ್ರತಿ ತಾಲ್ಲೂಕಿಗೆ ಹೋಗಿ ಮತದಾರರ ಕಷ್ಟ ಸುಖ ಆಲಿಸುತ್ತೇನೆ ಎಂದು ಹೇಳಿದರು.        ಮೂರು ವರ್ಷಗಳ ಹಿಂದೆಯೇ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿದ್ದೆ, ಆದರೆ ವಿಧಿ ಇಲ್ಲಿಗೆ…

ಮುಂದೆ ಓದಿ...