ಸಿ-ಡಿ ದರ್ಜೆ ನೌಕರಿ ಕನ್ನಡದ ಮಕ್ಕಳಿಗೆ – ಸಚಿವ

ತುಮಕೂರು:        ಕರ್ನಾಟಕದಲ್ಲಿ ಆರಂಭವಾಗುವ ಕೈಗಾರಿಕೆಗಳಲ್ಲಿ ಸಿ ಮತ್ತು ಡಿ ದರ್ಜೆ ಹುದ್ದೆಗಳನ್ನು ಇನ್ನು ಮುಂದೆ ಕನ್ನಡದ ಮಕ್ಕಳಿಗೆ ಕೊಡಬೇಕೆನ್ನುವ ನೀತಿಯನ್ನು ಸಚಿವ ಸಂಪುಟದಲ್ಲಿ ಪಾಸು ಮಾಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ತಿಳಿಸಿದರು.         ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿಂದು ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನಡೆಸಿ ಮಾತನಾಡಿದ ಅವರು, ಸಚಿವ ಸಂಪುಟದಲ್ಲಿ ಜವಳಿ ನೀತಿಯನ್ನೂ ಪಾಸು ಮಾಡಲಾಗಿದೆ. ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊರತು ಪಡಿಸಿ ಬೇರೆ ಎಲ್ಲಾದರೂ ಮೂಲಭೂತ ಕಸಬು ಕೈಗೊಳ್ಳಲು ಸರ್ಕಾರದಿಂದ ಪ್ರೋತ್ಸಾಹ ನೀಡಲಾಗುತ್ತದೆ ಎಂದರು.       ನಗರಕ್ಕೆ ಹೋಗುವ ವಲಸೆ ತಪ್ಪಿಸದಿದ್ದರೆ ರಾಜ್ಯ ಶ್ರೀಮಂತವಾಗಿದೆ ಎಂದು ಭಾವಿಸಲು ಸಾಧ್ಯವಿಲ್ಲ. ರಾಜ್ಯದ ಅಭಿವೃದ್ಧಿ…

ಮುಂದೆ ಓದಿ...

ಪೀಕ್ ಅವರ್‍ನಲ್ಲಿ ಬಸ್ ಸಂಚಾರ ಅಂತರ ನಿಗಧಿಪಡಿಸಿ-ಸಚಿವ

ತುಮಕೂರು :       ಕಚೇರಿ ಹಾಗೂ ಶಾಲಾ ಸಮಯದಂತಹ ಫೀಕ್ ಅವರ್‍ನಲ್ಲಿ ಬಸ್ಸುಗಳ ಸಂಚಾರ ಅಂತರದ ಸಮಯವನ್ನು ನಿಗದಿಪಡಿಸಿ ಹಾಗೂ ಜಿಲ್ಲೆಯಲ್ಲಿರುವ ಸಂಚಾರ ದಟ್ಟನೆಗೆ ತಕ್ಕಂತೆ ಬಸ್ಸುಗಳ ಟ್ರಿಪ್‍ಗಳನ್ನು ರೂಪಿಸುವಂತೆ ಕಾನೂನು ಹಾಗೂ ಸಂಸದೀಯ ವ್ಯವಹಾರಗಳು ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ ಸಿ ಮಾಧುಸ್ವಾಮಿ ಅವರು ಜಿಲ್ಲಾಧಿಕಾರಿ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.       ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ನಡೆದ ಜಿಲ್ಲಾ ಸುರಕ್ಷತಾ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.       ಮಧುಗಿರಿ ರಸ್ತೆಯಲ್ಲಿ ಸಂಚರಿಸುವ ಖಾಸಗಿ ಬಸ್ಸುಗಳ ಸಂಚಾರ ಸಮಯದಲ್ಲಿ ಅಂತರವಿರಬೇಕು. ಈ ಬಸ್ಸುಗಳು ಮಾರ್ಗ ಮಧ್ಯದಲ್ಲಿ ಬರುವ ಹಳ್ಳಿಗಳ ಜನರನ್ನು ಹಾಗೂ ಶಾಲಾ ಮಕ್ಕಳನ್ನು ಹತ್ತಿಸಿಕೊಳ್ಳುವುದಿಲ್ಲ ಎಂದು ದೂರುಗಳನ್ನು ಸಾರ್ವಜನಿಕರಿಂದ ಕೇಳಿದ್ದೇವೆ. ಶಾಲಾ ಮಕ್ಕಳನ್ನು ಹತ್ತಿಸಿಕೊಳ್ಳಬೇಕು. ಇಲ್ಲದಿದ್ದರೆ ಅಂತಹ…

ಮುಂದೆ ಓದಿ...