ಮೀಸಲಾತಿ ನಮ್ಮ ಹಕ್ಕು, ಯಾರಪ್ಪನ ಮನೆಯ ಸ್ವತ್ತಲ್ಲ – ಪ್ರಸನ್ನಾನಂದ ಸ್ವಾಮೀಜಿ

ಗುಬ್ಬಿ :      ಜನಸಂಖ್ಯಾ ಅನುಗುಣವಾಗಿ ಪರಿಶಿಷ್ಟ ಪಂಗಡಕ್ಕೆ ನೀಡಬೇಕಾದ ಮೀಸಲಾತಿಯನ್ನು ಶೇ.೭.೫ ಕ್ಕೆ ಏರಿಸಬೇಕು. ಈ ಬಗ್ಗೆ ದೊಡ್ಡ ಹೋರಾಟ ನಡೆಸಿ ಹಕ್ಕೋತ್ತಾಯ ಮಂಡಿಸಲಾಗಿದೆ. ಆದರೂ ಸರ್ಕಾರ ನಿರ್ಲಕ್ಷ್ಯ ತೋರಿದಂತೆ ಕಾಣುತ್ತಿದೆ. ಮೀಸಲಾತಿ ನಮ್ಮ ಹಕ್ಕು ಯಾರಪ್ಪನ ಮನೆಯ ಸ್ವತ್ತಲ್ಲ ಎಂದು ರಾಜನಹಳ್ಳಿ ವಾಲ್ಮೀಕಿ ಪೀಠಾಧ್ಯಕ್ಷ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಗುಡುಗಿದರು.        ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ವಾಲ್ಮೀಕಿ ನಾಯಕರ ಸಮಾಜ ಹಮ್ಮಿಕೊಂಡಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಬುಡಕಟ್ಟು ಜನಾಂಗವಾಗಿ ತನ್ನದೇ ಆದ ವೈಶಿಷ್ಟ ಬೆಳೆಸಿಕೊಂಡು ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ವಿಚಾರದಲ್ಲಿ ಅನ್ಯಾಯವಾಗುತ್ತಿದೆ. ಎಲ್ಲಾ ರಂಗದಲ್ಲೂ ಮೀಸಲಾತಿ ಪಡೆದಲ್ಲಿ ನಮ್ಮ ಸಮುದಾಯ ಮುಖ್ಯವಾಹಿನಿಗೆ ಬರಲಿದೆ. ಈ ನಿಟ್ಟಿನಲ್ಲಿ ನಿಗದಿಯಾಗಿರುವ ಶೇ.೩ ರ ಮೀಸಲಾತಿಯನ್ನು ಶೇ.೭.೫ ಕ್ಕೆ…

ಮುಂದೆ ಓದಿ...

ತುಮಕೂರು : ಕಸ ಸ್ಥಳಾಂತರಿಸಲು ಪಾಲಿಕೆ ಅಧಿಕಾರಿಗಳಿಗೆ ಮನವಿ!

ತುಮಕೂರು:       ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಪಕ್ಕದಲ್ಲಿ ಮಾಜಿ ಉಪಪ್ರಧಾನಿ ಬಾಬು ಜಗಜೀವನರಾಂ ಭವನ ನಿರ್ಮಾಣಕ್ಕೆ ಮೀಸಲಿಟ್ಟಿರುವ ನಿವೇಶನವನ್ನು ತಾಲ್ಲೂಕು ಸಮಾಜಕಲ್ಯಾಣಾಧಿಕಾರಿ ಶ್ರೀನಿವಾಸ್ ಅವರು ದಲಿತ ಪರ ಸಂಘಟನೆಗಳ ಮುಖಂಡರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.        ಬಾಬು ಜಗಜೀವನರಾಂ ಭವನ ನಿರ್ಮಾಣಕ್ಕೆಂದು ಮೀಸಲಿಟ್ಟಿರುವ ಜಾಗದ ಬಗ್ಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟರ ಕುಂದುಕೊರತೆ ಸಭೆಯಲ್ಲಿ ದಲಿತ ಮುಖಂಡರು ಪ್ರಸ್ತಾಪಿಸಿ, ಭವನ ನಿರ್ಮಾಣಕ್ಕೆ ಮುಂದಾಗಬೇಕು, ಕಾಪೌಂಡ್ ನಿರ್ಮಾಣ ಮಾಡಬೇಕೆಂದು ಒತ್ತಾಯಿಸಿದ್ದ ಹಿನ್ನೆಲೆಯಲ್ಲಿ ತಾಲ್ಲೂಕು ಸಮಾಜಕಲ್ಯಾಣಾಧಿಕಾರಿ ಶ್ರೀನಿವಾಸ್ ಅವರು ಸ್ಥಳ ಪರಿಶೀಲನೆ ನಡೆಸಿದರು. ಭವನಕ್ಕೆಂದು ಮೀಸಲಿಟ್ಟಿರುವ ಜಾಗದಲ್ಲಿ ಸುರಿಯಲಾಗಿರುವ ಕಸವನ್ನು ತೆರವುಗೊಳಿಸುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಪತ್ರ ಬರೆಯುವುದಾಗಿ ತಿಳಿಸಿದ ಅವರು, ನಿವೇಶನವನ್ನು ಒತ್ತುವರಿ ಮಾಡದಂತೆ ಹಾಗೂ ನಿವೇಶನವನ್ನು ಸ್ವಚ್ಛವಾಗಿ ಇಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಈ ವೇಳೆ ಭರವಸೆ…

ಮುಂದೆ ಓದಿ...