ತುಮಕೂರು : ಶ್ರೀಗಳ ಗದ್ದುಗೆ ಮೇಲೆ ಶಿವಲಿಂಗ ಪ್ರತಿಷ್ಠಾಪನೆ!!

ತುಮಕೂರು:       ಇತಿಹಾಸ ಪ್ರಸಿದ್ಧ ಸಿದ್ದಗಂಗಾ ಮಠದ ನಡೆದಾಡುವ ದೇವರು, ತ್ರಿವಿಧ ದಾಸೋಹಮೂರ್ತಿಯಾಗಿದ್ದ ಶಿವೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಐಕ್ಯ ಸ್ಥಳದ ಗದ್ದುಗೆಯ ಪೀಠದ ಮೇಲೆ ಶಿವಲಿಂಗ ಪ್ರತಿಷ್ಠಾಪಿಸಲಾಯಿತು.       ಇಂದು ಮುಂಜಾನೆ ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀಗಳ ಗದ್ದುಗೆಯ ಪೀಠದ ಮೇಲೆ 38 ಇಂಚು ಉದ್ದದ ಶಿವಲಿಂಗವನ್ನು ವಿವಿಧ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಪ್ರತಿಷ್ಠಾಪಿಸಲಾಯಿತು.       ಪ್ರಾತಃಕಾಲದಿಂದಲೇ ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ನೇತೃತ್ವದಲ್ಲಿ ಹಲವು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಶಿವಲಿಂಗವನ್ನು ದೈವೀಕರಿಸಿ ಪ್ರತಿಷ್ಠಾಪನೆ ಮಾಡಲಾಯಿತು.       ಇಂದು ಪ್ರತಿಷ್ಠಾಪಿಸಿದ ಶಿವಲಿಂಗವನ್ನು ಶ್ರೀಗಳು ತಂಗುತ್ತಿದ್ದ ಹಳೇ ಮಠದಲ್ಲಿ ಮಂಡಲದ 48 ದಿನಗಳ ಕಾಲ ಜಲಾಧಿವಾಸ, ಧಾನ್ಯಾಧಿವಾಸ, ಪುಷ್ಪಾಧಿವಾಸ ಹಾಗೂ ಶಯನಾಧಿವಾಸದ ವಿಧಿ-ವಿಧಾನ ಪೂರೈಸಲಾಗಿತ್ತು.        ಹೀಗೆ ಸಕಲ…

ಮುಂದೆ ಓದಿ...

ತುರುವೇಕೆರೆಗೆ ಆರೋಗ್ಯ ಸಚಿವ ಶ್ರೀರಾಮುಲು ಭೇಟಿ!!

ತುರುವೇಕೆರೆ:       ಮುಂಬರಲಿರುವ ಹದಿನೈದು ಕ್ಷೇತ್ರಗಳ ಉಪಚುನಾವಣೆಯಲ್ಲಿ ಹದಿನೈದಕ್ಕೆ ಹದಿನೈದು ಸ್ಥಾನಗಳಲ್ಲೂ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲುವನ್ನು ಸಾಧಿಸಲಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು.        ಪಟ್ಟಣದ ವಿರಕ್ತ ಮಠದ ಆವರಣದಲ್ಲಿ ನಡೆಯಲಿರುವ ಡಾ:ಕರಿವೃಷಭ ದೇಶಿಕೇಂದ್ರ ಸ್ವಾಮಿಯವರ 25ನೇ ವರ್ಷದ ರಜತ ಮಹೋತ್ಸವದ ಹಿನ್ನೆಲೆಯಲ್ಲಿ ಮಠಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿಯ ಎಲ್ಲಾ ಅಭ್ಯರ್ಥಿಗಳು ಉಪಚುನಾವಣೆಯಲ್ಲಿ ಗೆಲ್ಲುವ ಮೂಲಕ 15ಕ್ಷೇತ್ರಗಳು ಬಿಜೆಪಿ ಪಾಲಾಗಲಿವೆ ಇದರಲ್ಲಿ ಅನುಮಾನವೇ ಬೇಡ, ನನಗೆ ಹಲವು ಉಪಚುನಾವಣೆಗಳನ್ನು ನಡೆಸಿದ ಅನುಭವವಿದೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜನರ ನಿರೀಕÉ್ಷಗೆ ಮೀರಿ ಸ್ಪಂದಿಸುತ್ತಿದ್ದು, ಹಾಗಾಗಿ ಪಕ್ಷದ ಹದಿನೈದು ಅಭ್ಯರ್ಥಿಗಳು ಗೆಲ್ಲಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.       ಆರೋಗ್ಯ ಇಲಾಖೆಯಲ್ಲಿ ಕೆ.ಪಿ.ಎಸ್.ಸಿ. ಮೂಲಕ ನಡೆಯುತ್ತಿದ್ದ ವೈದ್ಯರ ನೇಮಕಾತಿ ಪದ್ದತಿಯನ್ನು ರದ್ದು ಮಾಡಿದ್ದು, ನೇರವಾಗಿ…

ಮುಂದೆ ಓದಿ...