ಯಶಸ್ವಿನಿ ಯೋಜನೆ ಪುನಾರಂಭ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ

   ತುಮಕೂರು:       ಯಶಸ್ವಿನಿ ಯೋಜನೆ ಇನ್ನೊಂದು ತಿಂಗಳೊಳಗಾಗಿ ಪುನಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದರು.       ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ 66ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಯಶಸ್ವಿನಿ ಯೋಜನೆ ಜಾರಿಗೆ ಬಂದರೆ ಸುಮಾರು 25 ಲಕ್ಷಕ್ಕೂ ಹೆಚ್ಚು ರೈತರಿಗೆ ಅನುಕೂಲವಾಗುತ್ತದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್ ರಾಜಣ್ಣ ಅವರು ಪ್ರಸ್ತಾವನೆ ನೀಡಿದ್ದಾರೆ. ಈಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಇನ್ನೊಂದು ತಿಂಗಳಲ್ಲಿ ಅನುಷ್ಟಾನಕ್ಕೆ ತರಲಾಗುವುದು ಎಂದರು.       ಹಾಲು ಒಕ್ಕೂಟದಡಿಯಲ್ಲಿ ತುಮಕೂರು ಜಿಲ್ಲೆಯಲ್ಲಿ ಮೆಗಾಡೈರಿ ನಿರ್ಮಿಸಲು ಚಿಂತನೆ ನಡೆಸಲಾಗುವುದು. ಅಲ್ಲದೇ ತಿಪಟೂರಿನಲ್ಲಿ 100 ಎಕರೆ ಭೂಮಿಯಲ್ಲಿ ತೋಟಗಾರಿಕಾ ಕಾಲೇಜನ್ನು ಆರಂಭ ಮಾಡತ್ತೇನೆಂದು ಅವರು ಭರವಸೆ ನೀಡಿದರಲ್ಲದೇ ಜಿಲ್ಲೆಯ ಎಲ್ಲಾ ಕೆರೆಗಳಿಗೂ ನೀರು ತುಂಬಿಸುವುದು ನನ್ನ…

ಮುಂದೆ ಓದಿ...

ಮಕ್ಕಳನ್ನು ಬೆನ್ನುತಟ್ಟಿ ಪ್ರೋತ್ಸಾಹಿಸಿ – ಸಚಿವ.ಜೆ.ಸಿ.ಮಾಧುಸ್ವಾಮಿ

ತುಮಕೂರು:      ಮಕ್ಕಳ ಮನಸ್ಸಿಗೆ ನಿನ್ನಿಂದ ಮಾಡಲು ಸಾಧ್ಯ ಎಂಬ ಹುರುಪಿನ ಶಕ್ತಿ ತುಂಬಿ ಬೆನ್ನು ತಟ್ಟಬೇಕು. ಇದರಿಂದ ಮಕ್ಕಳ ಮನಸ್ಸು ಬಲವಾಗಿ ಗುರಿಯ ದಾರಿಯ ಕಡೆಗೆ ನಡೆದು ಸಫಲತೆ ಕಾಣಲು ಸಾಧ್ಯವಾಗುತ್ತದೆ ಎಂದು ಕಾನೂನು ಸಂಸದೀಯ ವ್ಯವಹಾರಗಳು, ಶಾಸನರಚನೆ ಹಾಗೂ ಸಣ್ಣ ನೀರಾವರಿ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ತಿಳಿಸಿದರು.       ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ಬಾಲಭವನ ಸೊಸೈಟಿ, ಜಿಲ್ಲಾ ಬಾಲಭವನ ಸಂಘ ಮತ್ತು ಮಕ್ಕಳ ಸಹಾಯವಾಣಿ (1098) ಹಾಗೂ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿಂದು ಜಿಲ್ಲಾ ಬಾಲಭವನದಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಕ್ಕಳ ಹಬ್ಬವನ್ನು ಉದ್ಘಾಟಿಸಿ ಅವರು ಮಾತನಾಡಿದರು.       ಮಕ್ಕಳ ಮುಗ್ದತೆ ದೈವತ್ವಕ್ಕೆ ಸಮಾನ. ಮಕ್ಕಳು…

ಮುಂದೆ ಓದಿ...

ಮನೆ ಮುರುಕರ ಪ್ರಯತ್ನ ಸಫಲ ಆಗಲಿಲ್ಲ -ಮೈತ್ರಿ ಸರ್ಕಾರದ ವಿರುದ್ಧ ಹರಿಹಾಯ್ದ ರಾಜಣ್ಣ

ತುಮಕೂರು:       ಲೋಕಸಭಾ ಚುನಾವಣೆಯಲ್ಲಿ ಆದ ವ್ಯತ್ಯಾಸದಿಂದಾಗಿ ತುಮಕೂರು ಡಿ.ಸಿ.ಸಿ.ಬ್ಯಾಂಕ್ ಸೂಪರ್ ಸೀಡ್ ಮಾಡಿದ್ದರು. ಆದರೆ ಯಡಿಯೂರಪ್ಪ ನಾನಿದ್ದೇನೆ ಎಂದು ಧೈರ್ಯ ತುಂಬಿದರು. ಅವರಿಂದ ನನ್ನ ಈ ಸ್ಥಾನ ಉಳಿದಿದೆ ಎಂದು ಎಂದು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಹೇಳಿದರು.       ಇಲ್ಲಿ ನಡೆಯುತ್ತಿರುವ 66ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಮಾತನಾಡಿದ ಅವರು, ಬೇರೆ ಮನೆ ಮುರುಕರು ನನ್ನನ್ನು ಸಹಕಾರಿ ಆಂದೋಲನದಿಂದ ತೆಗೆಯಲು ಪ್ರಯತ್ನಿಸಿದರು. ಆದರೆ ಯಶಸ್ವಿ ಆಗಲಿಲ್ಲ. ಈ ಜಿಲ್ಲೆಯಲ್ಲಿ ಯಾರನ್ನು ಬೇಕಾದರೂ ಗೆಲ್ಲಿಸುವ, ಸೋಲಿಸುವ ಶಕ್ತಿ ನನಗಿದೆ ಎಂದು ಮನವರಿಕೆ ಆಗಿದೆ ಎಂದು ವಿಶ್ವಾಸದಿಂದ ನುಡಿದರು.       ಅಕಾಲಿಕವಾಗಿ ಮೃತಪಟ್ಟ ರೈತರ ಒಂದು ಲಕ್ಷದ ವರೆಗಿನ ಸಾಲವನ್ನು ನಮ್ಮ ಬ್ಯಾಂಕ್ ಮನ್ನಾ ಮಾಡುತ್ತಿದೆ. ಅದಕ್ಕಾಗಿ ಬ್ಯಾಂಕ್‍ನ ಲಾಭದ ಹಣ ಬಳಸಿಕೊಳ್ಳುತ್ತಿದೆ. ಈ ಪದ್ಧತಿಯನ್ನು ಎಲ್ಲ…

ಮುಂದೆ ಓದಿ...

ಉತ್ತಮ ಸಂದೇಶವಿರುವ ಚಿತ್ರಗಳನ್ನು ವೀಕ್ಷಿಸಿ : ಜಿ.ಪಂ ಸಿಇಓ ಕಿವಿಮಾತು

 ತುಮಕೂರು:       ಸಾಮಾಜಿಕ, ಐತಿಹಾಸಿಕ ಸಂದೇಶ ಸಾರುವ ಚಿತ್ರಗಳನ್ನು ವೀಕ್ಷಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್ ಮಕ್ಕಳಿಗೆ ಕಿವಿಮಾತು ಹೇಳಿದರು.       ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ವತಿಯಿಂದ ನಗರದ ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ “ಡೆಲ್ ಅಂತರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ”ವನ್ನು ಉದ್ಘಾಟಿಸಿ ಮಾತನಾಡಿದ ಅವರು ಭವಿಷ್ಯದಲ್ಲಿ ಮುಂದಿನ ಹಾದಿಗಳು ಸುಲಭವಾಗಿರುವುದಿಲ್ಲ ಮಕ್ಕಳು ಈಗಿನಿಂದಲೇ ಪ್ರಯತ್ನ ಪಡಬೇಕು. ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರಾಗಬೇಕು ಎಂದು ನೀತಿ ಕತೆಯನ್ನು ಹೇಳಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.       ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಗಂಗಾಜನೇಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್.ನಟರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ರಂಗಧಾಮಪ್ಪ, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಜೈಪಾಲ್, ಎಲ್‍ಎಕ್ಸ್‍ಎಲ್ ಐಡಿಯಾಸ್‍ನ ಶರತ್‍ಕುಮಾರ್ ಮತ್ತಿತರು ಹಾಜರಿದ್ದರು.  …

ಮುಂದೆ ಓದಿ...