ಸ್ಮಾರ್ಟ್ ಸಿಟಿ ಕಾಮಗಾರಿ ಕಳಪೆ : ದೂರು

ತುಮಕೂರು:       ಸ್ಮಾರ್ಟ್ ಸಿಟಿ ಕಾಮಗಾರಿಗಳು ಚಾಲನೆಗೆ ಬಂದು ವರ್ಷಗಳೇ ಕಳೆದಿದ್ದರೂ ಸಹ ನಗರದಲ್ಲಿ ಕೈಗೊಂಡಿರುವ ಅವೈಜ್ಞಾನಿಕ ಕಾಮಗಾರಿಗಳು ತುಂಬಾ ವಿಳಂಬವಾಗಿ ಸಾಗುತ್ತಿರುವುದು ನಗರದಲ್ಲಿ ಸಂಚರಿಸುವ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದ್ದು, ಗುತ್ತಿಗೆ ಪಡೆದಿರುವವರು ಇಡೀ ನಗರವನ್ನೇ ಧೂಳುಮಯವಾಗಿಸಿದ್ದಾರೆಂದು ಆರೋಪಿಸಿ ಜಯ ಕರ್ನಾಟಕ ತುಮಕೂರು ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.       ನಗರದಲ್ಲಿ ಸಂಚರಿಸುವವರಿಗೆ ಹಾಗೂ ಅಂಗಡಿ ಮುಂಗಟ್ಟುಗಳಲ್ಲಿ ವ್ಯವಹಾರ ಮಾಡುತ್ತಿರುವವರು ತೀವ್ರ ಸ್ವರೂಪದ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಇಂದಿನ ಆಧುನಿಕ ತಂತ್ರಜ್ಞಾನದ ಯಂತ್ರೋಪಕರಣಗಳನ್ನು ಉಪಯೋಗಿಸಿ ಅತಿ ಶೀಘ್ರವಾಗಿ ಮುಗಿಸಬಹುದಾದ ಕಾಮಗಾರಿಗಳನ್ನು ಸಹ ಗುತ್ತಿಗೆ ಪಡೆದಿರುವವರು ವರ್ಷಾನುಗಟ್ಟಲೆ ವಿಳಂಬ ಮಾಡುತ್ತಾ ಮುಂದುವರೆಸಿಕೊಂಡು ಬಂದಿರುವುದು ಈ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿರುವ ಸಂಶಯವನ್ನು ಮೂಡಿಸುತ್ತದೆ.       ಆದ್ದರಿಂದ ಅಂತಹ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ ಅತಿ ಶೀಘ್ರವಾಗಿ ಕಾಮಗಾರಿ ಮುಗಿಸುವ ಗುತ್ತಿಗೆದಾರರಿಗೆ ಟೆಂಡರ್ ನೀಡುವುದರ…

ಮುಂದೆ ಓದಿ...

ಮನ ಸೆಳೆದ ಗಾಂಧೀಜಿ ವಿಶೇಷ ಛಾಯಾಚಿತ್ರ ಪ್ರದರ್ಶನ

ತುಮಕೂರು :       ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ವತಿಯಿಂದ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆಯ ಅಂಗವಾಗಿ ತಿಪಟೂರಿನ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿಂದು ಗಾಂಧೀಜಿಯವರ ಜೀವನಚರಿತ್ರೆ ಕುರಿತ ಛಾಯಾಚಿತ್ರ ಪ್ರದರ್ಶನಕ್ಕೆ ತಿಪಟೂರು ತಾಲ್ಲೂಕು ಪಂಚಾಯತಿ ಸದಸ್ಯ ಜಿ.ಎಸ್. ಶಿವಸ್ವಾಮಿ ಅವರು ಚಾಲನೆ ನೀಡಿದರು.       ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು ಕರ್ನಾಟಕದಲ್ಲಿ ಗಾಂಧೀಜಿಯವರ ಅಪರೂಪದ ಛಾಯಾಚಿತ್ರಗಳನ್ನು ಬಸ್ ನಿಲ್ದಾಣದಲ್ಲಿ ಪ್ರದರ್ಶನಗೊಂಡಿವೆ. ಗಾಂಧೀಜಿಯವರ ಜೀವನ ಮೌಲ್ಯಗಳು ಹಾಗೂ ಅವರ ಹೋರಾಟಗಳ ಅಪರೂಪದ ಛಾಯಾಚಿತ್ರ ವೀಕ್ಷಿಸುವ ಮೂಲಕ ಗಾಂಧೀಜಿಯವರ ಸ್ಮರಣೆ ಮಾಡಿಕೊಳ್ಳಬಹುದು ಎಂದರು.       ಗಾಂಧೀಜಿ ಅವರ ಜೀವನ ಸಾಧನೆಗಳ ಅಪರೂಪದ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗಿದೆ. ಎಲ್ಲರಿಗೂ ಇದೊಂದು ಸದಾವಕಾಶವಾಗಿದೆ. ಸತ್ಯ ಅಹಿಂಸೆಯ ಮೂಲಕ ಸ್ವಾತಂತ್ರ್ಯ ಹೋರಾಟ ಹಾಗೂ ಅಪಾರ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ತೋರಿಸಿದ ಮಹಾತ್ಮ ಗಾಂಧೀಜಿ…

ಮುಂದೆ ಓದಿ...